Breaking News

ಕರ್ನಾಟಕ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸ ಇದೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆ. ನಾನು ಹಾಗೂ ಶೆಟ್ಟರ್ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆ. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆ ಎಂಬ ವಿಶ್ವಾಸವಿದೆ ಎಂದರು. ಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ …

Read More »

ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು

ಹುಬ್ಬಳ್ಳಿ: ರಾಣಿ ಚೆನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತ ಹುಬ್ಬಳ್ಳಿ, ತಾಲೂಕು ಸ್ವೀಪ್ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವತಿಯಿಂದ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮತದಾನದ ಕುರಿತಾದ ಘೋಷಣೆಗಳನ್ನು ಕೂಗುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಅಪರ …

Read More »

ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ

ಹುಬ್ಬಳ್ಳಿ: ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಮಂಜುಳಾ ಚವ್ಹಾಣ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ …

Read More »

ನಿಂಬಣ್ಣವರ್ ಮನವೊಲಿಕೆ ಯತ್ನ ಕಾಲು ಮುಟ್ಟಿ ನಮಸ್ಕರಿಸಿದ ನಾಗರಾಜ್ ಛಬ್ಬಿ…

ಕಲಘಟಗಿಯಲ್ಲಿ ರಾಜಕೀಯ ಬೆಳವಣಿಗೆ…ಹಾಲಿ ಶಾಸಕ ಸಿಎಂ ನಿಂಬಣ್ಣವರ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ನಾಗರಾಜ್ ಛಬ್ಬಿ…ಕಲಘಟಗಿಯಲ್ಲಿನ ಸಿಎಂ ನಿಂಬಣ್ಣವರ ನಿವಾಸದಲ್ಲಿ ಛಬ್ಬಿ ಭೇಟಿಗುಜರಾತ್ ನ ರಾಜ್ ಕೋಟ್ ಶಾಸಕ ಉದಯ್ ಉಪಸ್ಥಿತಿನಿಂಬಣ್ಣವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಛಬ್ಬಿನಿಂಬಣ್ಣವರ ಮನವೊಲಿಸಲು ಪ್ರಯತ್ನಿಸುತ್ತಿರುವ ಛಬ್ಬಿ…ಛಬ್ಬಿಗೆ ಟಿಕೆಟ್‌ ನೀಡಿರುವ ಹಿನ್ನಲೆ ಅಸಮಾಧಾನಗೊಂಡಿರುವ ಹಾಲಿ ಶಾಸಕ ಸಿಎಂ ನಿಂಬಣ್ಣವರರಹಸ್ಯ ಮಾತುಕತೆಯಲ್ಲಿ ನಿರತವಾದ ಮೂವರು ನಾಯಕರು..

Read More »

ಶೆಟ್ಟರ ಅವರನ್ನು ಹೈ ಕಮಾಂಡ್ ಕೈ ಬಿಡುವುದಿಲ್ಲ ಊಹಾಪೋಹಗಳಿಗೆ ಕಿವಿಗೊಡಬೇಡಿ:ನಾಗೇಶ ಕಲಬುರ್ಗಿ…

ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು.ಜಗದೀಶ್ಶೆ ಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಿಎಂ …

Read More »

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ..

ಹುಬ್ಬಳ್ಳಿ ನಾನು ನಂದೇ ಆದ ಕ್ಯಾಲ್ಕುಲೇಷನ್ ಮಾಡಿ, ಮಾಹಿತಿ ಪಡೆದು ತೀರ್ಮಾನಕ್ಕೆ ಬರುತ್ತೇನೆಹಾಸನ ಟಿಕೆಟ್‌ ಗೊಂದಲದ ಚರ್ಚೆ ನನಗೇನು ದೊಡ್ಡದ್ದಲ್ಲಹಾಸನದಲ್ಲಿ ಸಧೃಡ ಕಾರ್ಯಕರ್ತರಿದ್ದಾರೆ, ಅವರ ಅಭಿಪ್ರಾಯಕ್ಕೆ ಮಣಿಬೇಕು ಅನ್ನೋದು ನನ್ನ ಅಭಿಪ್ರಾಯಇಲ್ಲಿ ಪ್ರತಿಷ್ಠೆ ಮುಖ್ಯವಲ್ಲ, ಅಲ್ಲಿನ ಗ್ರೌಂಡ ರಿಯಾಲಿಟಿ ಮುಖ್ಯಪಕ್ಷಕ್ಕಿಂತ ಸ್ವಾರ್ಥ ಮುಖ್ಯ ಅನ್ನೋದಾದ್ರೆ ನಾನೇನು ಮಾಡಕ್ಕಾಗಲ್ಲಾದೇವೇಗೌಡರ ಕುಟುಂಬ ಮುಗಿಸಬೇಕೆಂದು ಯಾರ್ಯಾರು ಇವರ ತಲೆ ಕೆಡಿಸುತ್ತಿದ್ದಾರೆ ನಂಗೆ ಗೊತ್ತಿದೆನಾವು ದೇವೇಗೌಡರ ಕುಟುಂಬದ ಹಿತೈಷಿಗಳೆಂದು ಕುಟುಂಬ ಮುಗಿಸಲು ಹೊರಟವರಿಗೆ ಹಾಲೆರೆದರೆ ನಾನು …

Read More »

ಸಾಮಾಜಿಕ ಜಾಲತಾಣದ ವಾರ್ ಬಗ್ಗೆ ಮಾತನಾಡಿರುವ ಶಾಸಕ ಅಮೃತ ದೇಸಾಯಿ

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಹೆಸರು ಅಂತಿಮಗೊಳ್ಳುತ್ತಿದ್ದಂತೆ ಶಾಸಕ ಅಮೃತ ದೇಸಾಯಿ ವೇದಿಕೆ ಕಾರ್ಯಕ್ರಮವೊಂದರಲ್ಲಿ ಹಾಕಿದ್ದ ಬಹಿರಂಗ ಸವಾಲಿಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ಕೊಡುತ್ತಿದ್ದಾರೆ. ಬಾರೋ ಅಂತ ಕರೆದವರು ಈಗ ಎಲ್ಲಿದ್ದೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಾಮಾಜಿಕ ಜಾಲತಾಣದ ವಾರ್ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಶಾಸಕ ಅಮೃತ ದೇಸಾಯಿ, ಈಗಲೂ ಅವರಿಗೆ ಬಾರೋ ಅಂತಲೇ ಕರೆಯುತ್ತೇನೆ. ಅವರು …

Read More »

ಪತ್ತೆ ಮಾಡಿದ ಮೊಬೈಲ್ ಗಳನ್ನು ಸಾರ್ವಜನಿಕರಿಗೆ ಹಸ್ತಾಂತರಿಸಿದ ಪೊಲೀಸ್ ಕಮೀಷನರೇಟ್

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 400 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೆಶಕ ಪ್ರವೀಣ ಸೂದ್ ನೇತೃತ್ವದಲ್ಲಿ …

Read More »

ಪರಿಶಿಷ್ಟ ಜನಾಂಗದಿಂದ ಸಿಎಂ ಬೊಮ್ಮಾಯಿಗೆ ಅಭಿನಂದನಾ ಸಮಾವೇಶ

ಹುಬ್ಬಳ್ಳಿ: ನಾಳೆ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ, ಒಳಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಕ್ಕೆ ತಂದಿದ್ದಾರೆ.‌ ಇದು ಐತಿಹಾಸಿಕ ನಿರ್ಧಾರ. ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿತ್ತು. ಐದು ವರ್ಷಕ್ಕೊಮ್ಮೆ ಅವರನ್ನ ಬಾವಿಯಿಂದ ಹೊರಗೆ ತಗೆದು ವೋಟ್ ಹಾಕಿಸಿಕೊಂಡು ಮತ್ತೆ ಬಾವಿಯೊಳಗೆ ತಳುತ್ತಿದ್ದರೆಂದು ಸಚಿವ ಸಿಸಿ ಪಾಟೀಲ್ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮಾಜಕ್ಕೆ ನ್ಯಾಯ …

Read More »

ಚುನಾವಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ಡಾ.ಗೋಪಾಲಕೃಷ್ಣ

ಹುಬ್ಬಳ್ಳಿ: ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 13 ರಂದು ನಾಮ ಪತ್ರ ಸಲ್ಲಿಕೆ ದಿನ ಆರಂಭ, ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ. ನಾಮ ಪತ್ರ ಪರಿಶೀಲನೆ ಏಪ್ರಿಲ್ 21 ಕ್ಕೆ. ನಾಮ ಪತ್ರ ಹಿಂಪಡೆಯುವ ಕೊನೆಯ ದಿನಾಂಕ ಏಪ್ರಿಲ್ 24. ಇವುಗಳು ಚುನಾವಣೆಯ ನಿಯಮಗಳು ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ಅಧಿಕಾರಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ …

Read More »