admin
February 2, 2022
Breaking News, ಕರ್ನಾಟಕ
ಮುದ್ದೇಬಿಹಾಳ : 3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ತಂಗಡಗಿ ಗ್ರಾಮದ ಬಸವರಾಜ (28) ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಇವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯದಲ್ಲಿದ್ದು ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ …
Read More »
admin
February 1, 2022
Breaking News, ಕರ್ನಾಟಕ
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ್ (95) ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಸಜ್ಜನ್ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »
admin
January 30, 2022
Breaking News, ಕರ್ನಾಟಕ
ಗಂಗಾವತಿ : ಭತ್ತದ ಗದ್ದೆಗಳಲ್ಲಿ ರಸಗೊಬ್ಬರದ ಚೀಲವಿಟ್ಟು ರೈತರು ತಾಲ್ಲೂಕಿನ ಆಜಾದ್ ನರಸಾಪುರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ನಿರ್ದೇಶಕ ರೆಡ್ಡಿ ಮಾತನಾಡಿ,ಕಳೆದ 2 3 ತಿಂಗಳ ಇಂದೆ 50 ಕೆ.ಜಿ. ಪೊಟ್ಯಾಷ್‌ಗೆ 950-1050 ರೂ. ಇದ್ದ ದರ ಇದೀಗ 1,700 ರೂ.ಗೆ ಏರಿಕೆಯಾಗಿದೆ. ಜತೆಗೆ ಮಾರುಕಟ್ಟೆಯಲ್ಲಿ ಕೊರತೆಯೂ ಉಂಟಾಗಿದ್ದು, ಪೊಟ್ಯಾಷ್ ಬಳಸಬೇಕಾಗಿರುವ ಬೆಳೆಗಾರರು ಗೊಬ್ಬರ ಸಿಗದೆ ಕಂಗಾಲಾಗಿದ್ದಾರೆ.ಕಳೆದ ತಿಂಗಳಲ್ಲಿ 50 ಕೆ.ಜಿ. ಪೊಟ್ಯಾಷ್‌ಗೆ …
Read More »
admin
January 26, 2022
Breaking News, ಕರ್ನಾಟಕ
ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಘಟನೆ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ . ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ …
Read More »
admin
January 26, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ KSRTC ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
admin
January 25, 2022
Breaking News, ಕರ್ನಾಟಕ
ಕುಷ್ಟಗಿ: ಪುರಸಭೆ ಉಪಾಧ್ಯಕ್ಷೆಯಾಗಿದ್ದ ದಿ. ತೋಟಮ್ಮ ಕಲಕಬಂಡಿ ನಿಧನ ಹೊಂದಿ 4 ತಿಂಗಳು ಕಳೆದಿದೆ. ಕಳೆದ 9ನೇ ಸೆಪ್ಟೇಬರ್ 2021ರಂದು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರು ಮೊದಲ ಡೋಸ್ ಕೋವಿಶಿಲ್ಡ್ ಲಸಿಕೆ ಹಾಕಿಸಿಕೊಂಡಿದ್ದರು. ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಮೆಸೇಜ್ ಬಂದಿದೆ. ತೋಟಮ್ಮ ಕಲಕಬಂಡಿ ಪುರಸಭೆ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಪುತ್ರ ಅಮರೇಶ ಕಲಕಬಂಡಿ ಅವರ ಮೊಬೈಲ್ ಗೆ ಎರಡನೇ ಡೋಸ್ ಲಸಿಕೆ …
Read More »
admin
January 25, 2022
SPECIAL NEWS, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆತ್ಮನಿರ್ಭರ್ ಮಹತ್ವವನ್ನು ಸಾರಲು ವಿಶೇಷವಾಗಿ ಅಲಂಕರಿಸಿದ ಮೆಟ್ರೋವನ್ನು, ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಗುಸಿಂಗ್ ಯಮುನಾ ಬ್ಯಾಂಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭಿಸಿದರು. ಈ ವಿಶೇಷ ರೈಲು ಆಜಾದಿ ಕಾ ಅಮೃತ ಮಹೋತ್ಸವದ ಸ್ಮರಣಾರ್ಥ ಪ್ರಾರಂಭಿಸಲಾಗಿದ್ದು, ಗಣರಾಜ್ಯೋತ್ಸವದ ನಿಮಿತ್ತ ಸಾಂಕೇತಿಕವಾಗಿ ಈ ರೈಲನ್ನು ಆರಂಭಿಸಲಾಗಿದೆ. ಇದು ಜನರ ಸೇವೆಯಲ್ಲಿ ಮುಂದುವರಿಯುತ್ತದೆ. ಮೆಟ್ರೋದ ವಿಶೇಷತೆ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕೂಡಿದ ಮೆಟ್ರೋದ ಹೊರಭಾಗವೂ …
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಹೈಕೋರ್ಟ್‌ನ ಆದೇಶದಹಿನ್ನೆಲೆಯಲ್ಲಿ ಪದವಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಪದವಿಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ …
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ. ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 …
Read More »
admin
January 24, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ನಡೆದಿದೆ. ಲಕ್ಷ್ಮಿದೇವಿ ನಗರ ನಿವಾಸಿ ಸುರೇಶ್ ಬಾಬು(45)ಮೃತ ದುರ್ದೈವಿ. ವೇಗವಾಗಿ ಬಂದ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಹೆಲ್ಮೆಟ್ ಧರಿಸದೆ ಇದ್ದ ಕಾರಣ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »