Breaking News

ಕರ್ನಾಟಕ

ದೂರು ಕೊಡಲು ಹೋದಾಗ PSI ಧಮ್ಕಿ : ಕುಟುಂಬದ ಸದಸ್ಯರು ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್‌ಐ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ  ಯತ್ನಿಸಿದ್ದಾರೆ.  ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ …

Read More »

ಕ್ಯಾಂಟರ್‌ಗೆ ದ್ವಿಚಕ್ರವಾಹನ ಡಿಕ್ಕಿ : ಇಬ್ಬರು ಸಾವು

ಬೆಂಗಳೂರು: ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದ,  ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. …

Read More »

ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ. ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು …

Read More »

ರಾಜ್ಯದಲ್ಲಿ 165 ಓಮಿಕ್ರಾನ್ ಕೇಸ್‍ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ನ ರೂಪಾಂತರಿ ಓಮಿಕ್ರಾನ್‌ ತನ್ನ ಕಬಂದ ಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಿದೆ. ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ.ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು 165 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ …

Read More »

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ.ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು …

Read More »

ವೃದ್ಧಾಪ್ಯದಲ್ಲಿ ಆಸರೆಯಾದ 65 ವರ್ಷದ ಮಹಿಳೆ : ಮೈಸೂರುಲ್ಲಿ ಅಪರೂಪದ ನಿಖಾ

ಮೈಸೂರು: ಪತ್ನಿಯನ್ನು ಕಳೆದುಕೊಂಡಿರುವ ಅಪ್ಪನಿಗೆ ವೃದ್ಧಾಪ್ಯದಲ್ಲಿ ಆಸರೆ ಬೇಕೆಂಬ ಕಾರಣಕ್ಕೆ ಮಕ್ಕಳು, ಮೊಮ್ಮಕ್ಕಳು ಸೇರಿ 85 ವರ್ಷದ ವೃದ್ಧನಿಗೆ65 ವರ್ಷದ ಮಹಿಳೆ ಮದುವೆ ಮಾಡಿಸಿದ್ದಾರೆ.ಮೈಸೂರಿನ ಉದಯಗಿರಿಯ ಗೌಸಿಯ ನಗರದ ನಿವಾಸಿ, ಕುರಿ ವ್ಯಾಪಾರಿಯಾಗಿರುವ ಹಾಜಿ ಮುಸ್ತಫಾ ಅವರನ್ನು ಮೊಮ್ಮಕ್ಕಳು ಮುಂದೆ ನಿಂತು ಮದುವೆ ಮಾಡಿಸಿರುವ  ಅಪರೂಪದ ಘಟನೆ ಮೈಸೂರಿನಲ್ಲಿ ನಡೆದಿದೆ. ಮುಸ್ತಫಾಗೆ ಸದ್ಯ 9 ಜನ ಮಕ್ಕಳು. ಎಲ್ಲರಿಗೂ ಮದುವೆಯಾಗಿದ್ದು, ಮೊಮ್ಮಕ್ಕಳೂ ಇದ್ದಾರೆ. ಎಲ್ಲರೂ ಬೇರೆ ಬೇರೆ ಕೆಲಸದಲ್ಲಿ ಇರುವ ಕಾರಣ …

Read More »

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು ಶೇ70 ಪ್ರತಿಶತದಷ್ಟು ಇದ್ದ ಪೌಷ್ಟಿಕತೆ ಈಗ ಶೇ 97 ಪ್ರತಿಶತದಷ್ಟಾಗಿದೆ. ಇದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿ ಹಾಗೇ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಪ್ರಧಾನಿ ಶ್ಲಾಘಿಸಿದರು.

Read More »

ರಾಜಧಾನಿಯಲ್ಲಿ 24,748 ಕೋವಿಡ್ ದೃಢ

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ 27 ಸಾವಿರ ಗಡಿ ದಾಟಿದ್ದ ಸೋಂಕಿತರ ಪ್ರಮಾಣ ನಿನ್ನೆ 26,790ಕ್ಕೆ ಇಳಿಕೆಯಾಗಿತ್ತು. ಇಂದು 24,748ಕ್ಕೆ ಬಂದು ನಿಂತಿದೆ. ನಿನ್ನೆಗಿಂತ ಇಂದು 2 ಸಾವಿರ ಪ್ರಕರಣಗಳು ಕಡಿಮೆ ದಾಖಲಾಗಿವೆ. ಬೊಮ್ಮನಹಳ್ಳಿ ವಲಯದಲ್ಲಿ 2824, ದಾಸರಹಳ್ಳಿ 639, ಬೆಂಗಳೂರು ಪೂರ್ವ 3714, ಮಹದೇವಪುರ 3983, ಆರ್‌ಆರ್ ನಗರ 1497, ದಕ್ಷಿಣ ವಲಯ 3139, ಪಶ್ಚಿಮ 1842, ಯಲಹಂಕ …

Read More »

ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ

ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು  ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್‌ಆರ್ಟಿಸಿ, ಮೆಟ್ರೋದಲ್ಲಿ …

Read More »

ದೂರವಾಣಿ ಕರೆ ಮೂಲಕ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡುವ ಮೂಲಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಆರೋಗ್ಯ ವಿಚಾರಿಸಿದರು. ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಗೌಡರ ಆರೋಗ್ಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Read More »