Breaking News

ಕರ್ನಾಟಕ

ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ದೃಢ

ಬೆಳಗಾವಿ: ನಗರದಲ್ಲಿ ಕೊರೋನಾ ತನ್ನ ಹಾವಳಿಯನ್ನು ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.  ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

Read More »

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು : ಮಹೇಶ ಜೋಶಿ

ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ …

Read More »

ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಸುಭಾಷ್ ಚಂದ್ರ ಬೋಸ್ ಆಚರಣೆ

ಬೆಂಗಳೂರು : ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಎಲ್ಲಾ ಶಾಲೆ – ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »

ಸೋಪ್ಪು ಬೀದಿಗೆ ಎಸೆದಿದ್ದ ರೆಬಲ್ ರೈತನಿಗೆ ಸಚಿವ ಮುನಿರತ್ನ ಪರಿಹಾರ

ವಿಜಯಪುರ: ತರಕಾರಿ ಮಾರಲು ಪೊಲೀಸರು ತಡೆಯೊಡ್ಡಿದ್ದರು ಎಂದು ಆರೋಪಿಸಿ ರಸ್ತೆ ಮೇಲೆ ಸೊಪ್ಪು ಎಸೆದು ಪ್ರತಿಭಟಿಸಿದ್ದ ಡೋಮನಾಳ ಗ್ರಾಮದ ರೈತ ಭೀಮನಗೌಡ ಬಿರಾದಾರಗೆ ತೋಟಗಾರಿಕೆ ಸಚಿವ ಮುನಿರತ್ನ ಸೋಮವಾರ ವಿಡಿಯೊ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಸಾಂದರ್ಭಿಕ ಚಿತ್ರ ಸಚಿವರು ನನ್ನೊಂದಿಗೆ ಮಾತನಾಡಿ ವಿಷಾದಿಸಿದಿರು. ಸರ್ಕಾರ ರೈತರ ಪರವಾಗಿದೆ. ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿ, ಪರಿಹಾರವಾಗಿ ₹ 5 ಸಾವಿರವನ್ನು ಫೋನ್‌ ಪೇ ಮೂಲಕ ನೀಡಿದರು’ ಎಂದು ರೈತ ಬಿರಾದಾರ …

Read More »

ಮೃತ ಸಮನ್ವಿ ಮನೆಗೆ ಭೇಟಿ : ಹೆತ್ತ ಕರಳಿಗೆ ಸಾಮಾಧಾನ ಹೇಳಿದ ಡಿಕೆಶಿ

ಬೆಂಗಳೂರು: : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ …

Read More »

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : 4 ಜನ ಸಾವು

ಗುಂಟೂರು : ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್‌ಜಿ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್‌ಜಿ ಯರ್ರಬಾಲೆಂನವರು ಎನ್ನಲಾಗಿದೆ.

Read More »

ಬಂಜಾರಾ ಆಸ್ಪತ್ರೆಗೆ ಭೇಟಿ : ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ

ವಿಜಯಪುರ: ಬಂಜಾರಾ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮಹಿಳೆಯೊಬ್ಬರು ಇತ್ತೀಚೆಗೆ ಸಾವಿಗೀಡಾದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಿಸಿ ಮತ್ತು ತಜ್ಞರು, ವಾರ್ಡ್‍ಗಳ ಐಸಿಯು ಬೆಡ್‍ಗಳನ್ನು ಪರಿಶೀಲಿಸಿ  ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ನೇತೃತ್ವದ ಕೋವಿಡ್‌ ವಿಶೇಷ ತಜ್ಞರನ್ನೊಳಗೊಂಡ ಸಮಿತಿ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಎಬಿ ಎಆರ್‌ಕೆ ಅಡಿಯಲ್ಲಿ ಅಥವಾ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಕುರಿತು ಪ್ರತಿ ರೋಗಿಯಿಂದ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು .ಎಬಿ ಎಆರ್‌ಕೆ ಅಡಿಯಲ್ಲಿ ನೀಡುವ ಚಿಕಿತ್ಸೆಗಳ …

Read More »

ಕೊರೋನಾ ನಿಯಂತ್ರಣ : ಇಂದು ಸಂಜೆ ಡಿಸಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಕೊರೋನಾ ನಿರ್ಬಂಧಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ‘ಕಾದು ನೋಡುವ ತಂತ್ರ’ ಅನುಸರಿಸಲು ಸರ್ಕಾರ ನಿರ್ಧರಿಸಿದ್ದಾರೆ. ಅದರ ಕುರಿತು  ಇಂದು ಡಿಸಿಗಳ  ಜೊತೆ ಸಿಎಂ ಬೊಮ್ಮಾಯಿ  ಸಂಜೆ 4 ಗಂಟೆಗೆ ಸಭೆ ನಡೆಸಲಿದ್ದಾರೆ. ಡಿಸಿಗಳಿಂದ ಕೊರೊನಾ ಸ್ಥಿತಿ ಬಗ್ಗೆ ವಿವರಣೆ ಪಡೆಯಲಿದ್ದಾರೆ. ಪಾಸಿಟಿವಿಟಿ ರೇಟ್, ವ್ಯಾಕ್ಸಿನೇಷನ್ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ಶುಕ್ರವಾರ ಮತ್ತೊಂದು ಸಭೆ ನಡೆಸಿ ವಾರಾಂತ್ಯದ …

Read More »

ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧ

ಬಾದಾಮಿ: ಸುಕ್ಷೇತ್ರ ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದೆ ದೇವರ ದರ್ಶನವನ್ನು ಜ. 21ರವರೆಗೆ ಬಂದ್‌ ಮಾಡಲಾಗಿದೆ. ಪೂಜಾ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಭಕ್ತರ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ. ಮತ್ತೇ ದರ್ಶನಕ್ಕೆ ಬರುವ ಭಕ್ತರಿಗೆ ಪೊಲೀಸ್ ರೂ ಬಂದು ಬಸ್ತ ಏರ್ಪಡಿಸಿದ್ದಾರೆ. ಬನಶಂಕರಿಯಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ನೇತ್ರಾವತಿ ಪಾಟೀಲ, ಪೊಲೀಸ್‌ ಬಂದೋಬಸ್ತ್ ಕೈಗೊಂಡಿದ್ದು, ಬೀಡುಬಿಟ್ಟಿದ್ದಾರೆ

Read More »

ವಿವಾದಾತ್ಮಕ ವಿಡಿಯೋ ವೈರೆಲ್ : ರಿಷಿ ಕುಮಾರ್ ಸ್ವಾಮೀಜಿ ಅರೆಸ್ಟ್

ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ  ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗ್ತಿದ್ದಾರೆ. ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು.ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು …

Read More »