Breaking News

ಕರ್ನಾಟಕ

ಕೋವಿಡ್ ಉಲ್ಬಣ : ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ವೇಗವಾಗಿ ಹರಡುತ್ತೀದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಮಹಾಮಾರಿಯನ್ನು ನಿಯಂತ್ರಣ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ  ಸಭೆ ನಡೆಸಲಿದ್ದು, ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Read More »

ವಾರಾಂತ್ಯ ಕರ್ಫ್ಯೂಗೆ ಸ್ಪಂದಿಸಿದ ಮೈಸೂರು ಜನ

ಮೈಸೂರು: ವಾರಾಂತ್ಯ ಕರ್ಫ್ಯೂನಿಂದಾಗಿ ರಸ್ತೆಗಳು, ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿದ್ದವು. ಕೊರೊನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಹಾಗೂ ವಾರಾಂತ್ಯ ಕರ್ಫ್ಯೂ ವಿಧಿಸಿರುವುದರಿಂದ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿತ್ತು.ಎಲ್ಲೆಡೆ ಬಿಕೋ ಎನ್ನವ ವಾತಾವರಣ ಸೃಷ್ಟಿಯಾಗಿತ್ತು ಪ್ರಮುಖ ವಾಣಿಜ್ಯ ಕೇಂದ್ರ ಕೆ.ಆರ್‌.ಸರ್ಕಲ್‌,ಡಿ.ದೇವರಾಜ ಅರಸು ರಸ್ತೆ, ಸಯ್ನಾಜಿರಾವ್‌ ರಸ್ತೆ, ಇರ್ವಿನ್‌ ರಸ್ತೆ, ಅಶೋಕ ರಸ್ತೆ, ಧನ್ವಂತರಿ ರಸ್ತೆ, ಕಾಳಿದಾಸ ರಸ್ತೆ, ಅಗ್ರಹಾರ ವೃತ್ತಗಳಲ್ಲಿ ಜನಸಂಚಾರ ವಿರಳವಾಗಿ ಬಿಕೋ ಎನ್ನುವ ವಾತಾವರಣ ಇತ್ತು. ಸಂಕ್ರಾಂತಿ ಹಬ್ಬವನ್ನು ಆಚರಿಸಿದ ಜನರು …

Read More »

ಶಾಸಕ ಕೆ.ಎಂ. ಶಿವಲಿಂಗೇಗೌಡ ಕೊರೊನಾ ದೃಢ

ಅರಸೀಕೆರೆ: ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಮತ್ತೇ ಕೊರೊನಾ ಪರೀಕ್ಷೆಯಿಂದ ಪಾಸಿಟಿವ್‌ ಕಂಡು ಬಂದಿದ್ದು  ಬೆಂಗಳೂರಿಗೆ ತೆರಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ನಗರದ ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಕೊರೊನಾ 3ನೇ ಅಲೆ ನಿಯಂತ್ರಣದ ಬಗ್ಗೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ರೋಗ ನಿಯಂತ್ರಣಕ್ಕೆ ಸಲಹೆ-ಸೂಚನೆ ನೀಡಿದ್ದರು.

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾಕಷ್ಟು ಬಾರಿ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಇದೀಗ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸಂಕ್ರಾಂತಿ ಹಬ್ಬದಂದು ವಿಶೇಷ ಸುದ್ದಿ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿ, ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. 11 ಸಾವಿರವಿದ್ದ ವೇತನವನ್ನ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ವಿದ್ಯಾರ್ಥಿ ವೇತನ ಇದ್ದವರಿಗೆ 32 ಸಾವಿರ ಮಾಡಲಾಗಿದೆ. ಇನ್ನು ಫುಲ್ ಟೈಮ್ …

Read More »

ವೇಗವಾಗಿ ಹರಡುತ್ತಿದೆ ಓಮಿಕ್ರಾನ್ ತಳಿ

ಬೆಂಗಳೂರು: ಓಮಿಕ್ರಾನ್ ತಳಿಯ ಕೊರೊನಾ ವೈರಾಣು ಗಂಭೀರ ಸಮಸ್ಯೆ ಉಂಟುಮಾಡದೇ ಇದ್ದರೂ ಕ್ಷಿಪ್ರಗತಿಯಲ್ಲಿ ಹೆಚ್ಚು ಜನರಿಗೆ ಹರಡಲಿದೆ. ಮೊದಲನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಲು 10-12 ದಿನಗಳು ತಗುಲಿದ್ದವು. ಎರಡನೇ ಅಲೆಯಲ್ಲಿ 8 ದಿನಗಳು ತಗುಲಿದ್ದವು. ಆದರೆ ಈ ಬಾರಿ ಎದುರಾಗಿರುವ ಮೂರನೇ ಅಲೆಯಲ್ಲಿ 2 ದಿನಗಳಲ್ಲೇ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ  ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದಿನ ಎರಡು ಕೊರೊನಾ ಅಲೆಗಳಿಗೆ ಹೋಲಿಸಿದರೆ …

Read More »

ಪಾದಯಾತ್ರೆ ಮುಂದುವರಿಯುವುದು ಖಚಿತ

ರಾಮನಗರ: ‘ಮೇಕೆದಾಟು ಪಾದಯಾತ್ರೆಯು ನಾಲ್ಕು ದಿನ ಕಾಲ ಯಶಸ್ವಿಯಾಗಿ ನಡೆದಿದ್ದು, ಗುರುವಾರ ಅನಿವಾರ್ಯ ಕಾರಣಗಳಿಂದ ಇದಕ್ಕೆ ವಿರಾಮ ಹೇಳುತ್ತಿದ್ದೇವೆ. ಕೋವಿಡ್ ಅಲೆ ಮುಗಿದ ಬಳಿಕ ಇಲ್ಲಿಂದಲೇ ಪಾದಯಾತ್ರೆ ಮುಂದುವರಿಯುವುದು ಖಚಿತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಗುರುವಾರ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ ಬಳಿಕ ಕಾಂಗ್ರೆಸ್ ಕಚೇರಿಯಿಂದ ಸಿದ್ದರಾಮಯ್ಯ ಜೊತೆಗೂಡಿ ಹೊರಬಂದ ಅವರು ನೆರೆದ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

Read More »

ಮೊದಲ ಮಗುವನ್ನು ಕಳೆದಕೊಂಡ ನೋವು ಅಮೃತಾಳಗೆ ಮರೆತ್ತೀಲ್ಲಾ.. ಇದೀಗ ಸಮನ್ವಿ?

ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಡರಾತ್ರಿಯ ಸಂಭವಿಸಿದ ಈ ದುರ್ಘಟನೆಯಿಂದಾಗಿ ಆ ನೋವಿನಿಂದ ಇನ್ನೂ ಹೊರ ಬಂದಿಲ್ಲ ಎಂದು ಮಗುವಿನ ದೊಡ್ಡಪ್ಪ ರುದ್ರಮಣಿ ಹೇಳಿದ್ದಾರೆ. ಮೊದಲೇ ಒಂದು ಮಗು ಕಳೆದುಕೊಂಡಿದ್ವಿ, ನೋವು ಹೇಳೊದಿಕ್ಕೆ ಆಗುತ್ತಿಲ್ಲ, ಇನ್ನೂ ತಾಯಿ ಅಮೃತಾಳ …

Read More »

ಜ. 16 ರಿಂದ ನೈಸ್ ರಸ್ತೆಯಲ್ಲಿ ದ್ವಿ ಚಕ್ರ ವಾಹನ ಸಂಚಾರ ಬಂದ್

ಬೆಂಗಳೂರು: ನೈಸ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವಿಗೀಡಾಗುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ರಾಜಧಾನಿ ಹೊರ ವಲಯದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶಿಸಿದ್ದಾರೆ. ಜ. 16 ರಿಂದ ಜಾರಿಗೆ ಬರುವಂತೆ ನೈಸ್ ರಸ್ತೆಯಲ್ಲಿ ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆ ವರೆಗೆ ಯಾವುದೇ …

Read More »

ಬೆಂಗಳೂರುನಲ್ಲಿ 20,121 ಜನರಲ್ಲಿ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡಾ ಏರಿಕೆ ಉಂಟಾಗುತ್ತಿದೆ. ರಾಜ್ಯದಲ್ಲಿ ಒಟ್ಟು 28,723 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 12.98 ಇದ್ದು, ಅಪಾಯದ ಹಂತ ಮುಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು.

Read More »

ಗ್ರಾ.ಪಂ ಸಭೆಯಲ್ಲಿ ಮಾತಿನ ಚಕಮಕಿ : ಕೈ ಕೈ ಮಿಲಾಯಿಸಿಕೊಂಡು ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ: ಇಂದು ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಣಂದೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ …

Read More »