Breaking News

ಕರ್ನಾಟಕ

ಹುಟ್ಟುಹಬ್ಬ ಆಚರಣೆ : ಕೋವಿಡ್ ನಿಯಮ ಉಲ್ಲಂಘಿಸಿದ ಜನಾರ್ದನರೆಡ್ಡಿ

ಬಳ್ಳಾರಿ: ನೂರಾರು ಸಂಖ್ಯೆಯಲ್ಲಿದ್ದ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರ ನಡುವೆ ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ಹುಟ್ಟುಹಬ್ಬದ ವೇಳೆ ಕೋವಿಡ್‌ ನಿಯಮಾವಳಿ ಉಲ್ಲಂಘಿಸಿದ್ದರೂ ಕಾನೂನು ಕ್ರಮ ಕೈಗೊಳ್ಳದೆ ಜಿಲ್ಲಾಡಳಿತ ‘ಕಣ್ಣಿದ್ದು ಕುರುಡುತನ’ ಪ್ರದರ್ಶಿಸುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಸಾರಿಗೆ ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ನಗರದ ಶಾಸಕ ಸೋಮಶೇಖರರೆಡ್ಡಿ, ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಾಲಣ್ಣ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಈ …

Read More »

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಪುಷ್ಪ‌ ನಮನ

ಧಾರವಾಡ : ಸ್ವಾಮಿ ವಿವೇಕಾನಂದ ಅವರ ಜಯಂತಿ ಅಂಗವಾಗಿ ಇಂದು ಧಾರವಾಡದ ವಿವೇಕಾನಂದ ವೃತ್ತದ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ‌ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಮಂಡಳ ಅಧ್ಯಕ್ಷ ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ ರವಿ ಎಲಿಗಾರ ಮಂಜುನಾಥ ಕಮ್ಮಾರ ರಜತ ನಗರ ಸೋಮಲಿಂಗ ಹಿರೇಮನಿ …

Read More »

ವಿದ್ಯಾಕಾಶಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಕ್ಷೇತ್ರ, ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಸೇರಿದಂತೆ 1 ರಿಂದ 8ನೇ ತರಗತಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ನಾಳೆಯಿಂದಲೇ ಈ ಆದೇಶ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೂ ಶಾಲೆಗಳನ್ನು ಪುನರಾರಂಭಿಸದಂತೆ ಸೂಚನೆ ನೀಡಲಾಗಿದೆ. ಈ ತಾಲೂಕಿನಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. …

Read More »

ರಾಜ್ಯದ ಶಾಲೆಗಳ ಸ್ಥಿತಿಗತಿ ಕುರಿತು ಮಹತ್ವದ ಸಭೆ

ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೀಟಿಂಗ್ ಮಾಡಲಾಗಿತ್ತು. ಬೆಂಗಳೂರಿನ ಕೆ ಆರ್ ಸರ್ಕಲ್ ನಲ್ಲಿರುವ ಸಮಗ್ರ ಶಿಕ್ಷಣದಲ್ಲಿ ಇಲಾಖೆಯಲ್ಲಿ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ನಡೆಸಲಾಗಿತ್ತು. ಇನ್ನೂ ಸಭೆಯಲ್ಲಿ ರಾಜ್ಯದ ಡಿಡಿಪಿಐ, ಬಿಇಓಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್ ಆಗಿವೆ. ಹೀಗಾಗಿ ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ …

Read More »

ಹುಟ್ಟು ಹಬ್ಬದ ದಿನವೇ ಬಿಜೆಪಿಗೆ ಟಾಂಗ್​ ಕೊಟ್ಟ ರೆಡ್ಡಿ

ಬಳ್ಳಾರಿ: ನಿನ್ನೆ ಜನಾರ್ದನರೆಡ್ಡಿ ಅವರು 55ನೇ ವಸತಂಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಹುಟ್ಟುಹಬ್ಬದ ದಿನವೇ ಮರು ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಗೆ ಬಳ್ಳಾರಿ ಮೇಲೆ ಋಣ ಇದೆ ಎನ್ನುವ ಮೂಲಕವೇ ಬಿಜೆಪಿಗೆ ಟಾಂಗ್​ ಕೊಟ್ಟ ರೆಡ್ಡಿ, ಹತ್ತು ವರ್ಷದಲ್ಲಿ ಆಗದ ಕೆಲಸಗಳನ್ನ ಒಂದೇ ವರ್ಷದಲ್ಲಿ ಮಾಡುವ ಉತ್ಸಾಹ ಬಂದಿದೆ ಎನ್ನುವ ಮೂಲಕ ಮತ್ತೆ ರಾಜಕೀಯದಲ್ಲಿ ಸಕ್ರೀಯರಾಗುವ ಸುಳಿವು ನೀಡಿದ್ದಾರೆ.

Read More »

ಮೇಕೆದಾಟು ಪಾದಯಾತ್ರೆ : ಜೋಲಿ ಹೊಡಿಯುತ್ತಲೇ ಸಾಗಿದ ಡಿಕೆಶಿ

ರಾಮನಗರ: ಮೇಕೆದಾಟು ಯೋಜನೆಪಾದಯಾತ್ರೆಯ ಮೂರನೇ ದಿನ ಯಶಸ್ವಿಯಾಗಿ ಮುಗಿದಿದೆ. ಸಾಕಷ್ಟು ಆರೋಪ ಮತ್ತು ಪ್ರತ್ಯಾರೋಪಗಳಿಂದ ನಡೆಯುತ್ತಿರುವ ಮೇಕೆದಾಟು ಯೋಜನೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇಂದಿನ ಪಾದಯಾತ್ರೆಯಲ್ಲಿ ಕೂಡ ಡಿ.ಕೆ.ಶಿವಕುಮಾರ್​ ಸಾಕಷ್ಟು ಸುಸ್ತಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಜಳಕ್ಕೆ ಬಳಲಿ ಬೆಂಡಾಗಿದ್ದಿ ಶಿವಕುಮಾರ್​ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದರು. ಇಂದು ಕೂಡ ಅವರು ಅಲ್ಪ ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದು ಕಾಲು ಭಾರವೇನಿಸಿ ಜೋಲಿ ಹೊಡಿಯುತ್ತಲೇ …

Read More »

ಶಾಲಾ ಮಕ್ಕಳಿಗೆ ಮತ್ತೇ ಆನ್ ಲೈನ್ ಕ್ಲಾಸ್

ಬೆಂಗಳೂರು: ಕೊರೋನಾ ದಿನ ದಿನೇ ಹೆಚ್ಚಳದಿಂದಾಗಿ ಎಲ್ಲರಲೂ ಆತಂಕ ಮನೆ ಮಾಡಿದ್ದು, ಶಾಲಾ ಕಾಲೇಜು ಬಂದ್ ಮಾಡಲಾಗಿದೆ. ಇದೇ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ. ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ.

Read More »

ಮಾಹಿತಿ ನೀಡದಿದ್ದರೂ ಸೈಬರ್ ವಂಚನೆ

ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಯಾವುದೇ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ವ್ಯಕ್ತಿಯೊಬ್ಬರ ಖಾತೆಯಿಂದ 97,500 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಕುರಿತು ಹು-ಧಾ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ತಾಲೂಕು ನಲವಡಿ ಗ್ರಾಮದ ನಾಗಪ್ಪ ನರಗುಂದ ವಂಚನೆಗೀಡಾದವರು. ತಾನು ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್‌ನ ಯಾವುದೇ ವಿವರವನ್ನು ಯಾರಿಗೂ ನೀಡಿರಲಿಲ್ಲ. ಯಾವುದೇ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನೂ ಹೊಂದಿಲ್ಲ. ಆದರೂ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಡಿ. …

Read More »

ಗೂಡ್ಸ್ ವಾಹನಕ್ಕೆ ಆಕಸ್ಮಿಕ ಬೆಂಕಿ

ಗದಗ: ನಿಂತಿದ್ದ ಗೂಡ್ಸ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವಾಹನ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸವೇಶ್ವರ ನಗರದಲ್ಲಿ ನಡೆದಿದೆ. ನಿಂತಿದ್ದ ಗೂಡ್ಸ್ ಗಾಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವಾಹನ ಸುಟ್ಟು ಕರಕಲಾಗಿದೆ. ರಬ್ಬಾನಿಸಾಬ್ ಮೀರಚ್ಚನೆ ಎಂಬುವರಿಗೆ ಸೇರಿದ ವಾಹನಕ್ಕೆ ಬೆಂಕಿ ತಗುಲಿದೆ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಓಣಿಯ ನಿವಾಸಿಗಳು ಅಗ್ನಿಶಾಮಕ ಇಲಾಖೆಗೆ ಫೋನ್ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು …

Read More »

ಮಣಿಪಾಲ್ ಆಸ್ಪತ್ರೆಗೆ ಸಿಎಂ ದಾಖಲು

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು …

Read More »