admin
January 11, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀಥಲೀಕರಣ ಘಟಕ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ.
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ. ಜೆಡಿಎಸ್ ಭದ್ರಕೋಟೆ ರಾಮನಗರಕ್ಕೆ ಎಂಟ್ರಿಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸ ಸಂದೇಶ ನೀಡಲಿದ್ದಾರೆ. ಮುಂದಿನ ಚುನಾವಣೆಗೆ ಸಿದ್ಧರಾಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪಾದಯಾತ್ರೆಯ ವೇಳೆ ನೈತಿಕ ಬೆಂಬಲ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಇಂದಿನ ಪಾದಯಾತ್ರೆ ವೇದಿಕೆಯಾಗಲಿದೆ. ಅಲ್ಲದೇ, ಇವತ್ತಿನಿಂದ ಮಾಜಿ ಸಿಎಂ …
Read More »
admin
January 11, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಅಧಿಕಾರಿಗಳ ಸಭೆಯ ನಂತರ …
Read More »
admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.ಇದರಿಂದ ಜನಸಾಮಾನ್ಯರಿಗೆ ಒಂದು ಕಾನೂನು, ರಾಜಕೀಯ ಮುಖಂಡರಿಗೆ ಒಂದು ಕಾನೂನು ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ.ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಇದನ್ನು ತಡೆಯಲು ಸರ್ಕಾರವೇನೂ ಅಸಮರ್ಥವಾಗಿಲ್ಲ. ಕಾನೂನಿನ ಪ್ರಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವನ್ನು ಗೃಹ ಸಚಿವರು ತೆಗೆದುಕೊಳ್ಳುತ್ತಾರೆ ಎಂದರು.
Read More »
BigTv News
January 10, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇಂದು ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ …
Read More »
admin
January 10, 2022
Breaking News, ಕರ್ನಾಟಕ
ರಾಮನಗರ: ಪಾದಯಾತ್ರೆ ಮಾಡಬಾರದು ಎಂದು ನೋಟೀಸ್ ನೀಡಿದ್ದು ನಿಜ. ಅದು ಕಾನೂನು ಬದ್ಧ ನೋಟೀಸ್ ಅಲ್ಲ. ಸೆಕ್ಷನ್ 144 ಅನ್ನು ಯಾವ ರೀತಿ ಜಾರಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆಸಿದ್ದರಾಮಯ್ಯ ಅವರು ಆರೋಗ್ಯ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಬರುವುದಾಗಿ ತಿಳಿಸಿದರು. ನಾನೇ ಅವರಿಗೆ ವಿಶ್ರಾಂತಿ ಪಡೆದು ನಾಳೆ ಬರುವಂತೆ ಹೇಳಿದೆ. ಉಳಿದ 9 ದಿನಗಳ ಪಾದಯಾತ್ರೆಗೆ ಸರ್ಕಾರ ಅವಕಾಶ ನೀಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರು …
Read More »
admin
January 10, 2022
Breaking News, ಕರ್ನಾಟಕ
ರಾಮನಗರ: ಪಾದಯಾತ್ರೆ ನಿಲ್ಲಿಸಲು ಸರ್ಕಾರ ದೊಡ್ಡ ಸಂಚು ರೂಪಿಸಿದೆ. ಇದರ ಭಾಗವಾಗಿ ಶಿವಕುಮಾರ್ ಗೆ ಕೋವಿಡ್ ಪಾಸಿಟಿವ್ ಮಾಡಿಸಲು ಬೇಕಂತಲೇ ಆ ಅಧಿಕಾರಿಯನ್ನು ಕಳುಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಪಾದಯಾತ್ರೆ ಮಾರ್ಗ ಮಧ್ಯೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ರಾಜ್ಯ ಸರ್ಕಾರ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದು, ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ಬೇಕಂತಲೇ ನನ್ನ ಪರೀಕ್ಷೆಗೆ ಕಳುಹಿಸಿದೆ. ಇದರ ಹಿಂದೆ ಆರೋಗ್ಯ ಹಾಗೂ ಗೃಹ ಸಚಿವರ …
Read More »
admin
January 10, 2022
Breaking News, ಕರ್ನಾಟಕ
ಶಿವಮೊಗ್ಗ: ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಪಾದಯಾತ್ರೆಯೂ ರಾಜ್ಯದಲ್ಲಿ ಜೋರಾಗಿ ಸದ್ದನ್ನು ಮಾಡುತ್ತಿದೆ. ನಿನ್ನೆ ವಿಕೆಂಡ್ ಲಾಕ್ ಇದ್ದರೂ ಕೂಡಾ ಪಾದಯಾತ್ರೆಯನ್ನು ಮುಂದುವರೆಸಲಾಗಿತ್ತು. ಆದರೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ. ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು.
Read More »