Breaking News

ಕರ್ನಾಟಕ

ಕರ್ಫ್ಯೂ ವೇಳೆ ಓಡಾಡಿದರೆ ವಾಹನ ಸೀಜ್

ಬೆಂಗಳೂರು: ಕೊರೋನಾ ಏರಿಕೆ ಕಾರಣಕ್ಕೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ವೀಕೆಂಡ್ ಕರ್ಫ್ಯೂ ವೇಳೆ ಸುಮ್ಮನೆ ಓಡಾಡಿದರೆ ವಾಹನವನ್ನು ಅಲ್ಲಿಯೇ ಸೀಜ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಜತೆ ಮತ್ತು ಸಂಸ್ಥೆಗಳ ಜತೆ ಸಹಕಾರ ನೀಡಬೇಕು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಕಾನೂನು ಮೀರಿದವರ ಮೇಲೆ ಕಟ್ಟು ನಿಟ್ಟಿನ ಕ್ರಮ ಇದ್ದು ಯಾವ ಪಾಸ್ ಕೊಡುವ ವ್ಯವಸ್ಥೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read More »

ಸರ್ಕಾರ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್‌ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ …

Read More »

ನ್ಯೂ ಲುಕ್ ನಲ್ಲಿ ಅಭಿಮಾನಿಗಳ ಗಮನ ಸೆಳೆದಿರುವ ಹ್ಯಾಟ್ರಿಕ್‌ ಹೀರೋ

“ಟಗರು’ ಚಿತ್ರದ ಸಕ್ಸಸ್‌ ಬಳಿಕ ಮತ್ತೂಮ್ಮೆ ನಟ ಶಿವರಾಜಕುಮಾರ್‌ ಹಾಗೂ ಡಾಲಿ ಧನಂಜಯ್‌ ಈ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು, ಇಬ್ಬರೂ ಕೂಡ ಎರಡು ವಿಭಿನ್ನ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ನಟ ಶಿವರಾಜಕುಮಾರ್‌ ಹುಟ್ಟುಹಬ್ಬದ ವೇಳೆ ಬೈರಾಗಿ ಬಿಡುಗಡೆಯಾಗಲಿದೆ. ತನ್ನ ಟೈಟಲ್‌ ಮತ್ತು ಫ‌ಸ್ಟ್‌ಲುಕ್‌ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ 123ನೇ ಚಿತ್ರ “ಬೈರಾಗಿ’ಯ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದೆ. ಈ ವಾರಾಂತ್ಯದಲ್ಲಿ “ಭೈರಾಗಿ’ಯ …

Read More »

ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಇಲ್ಲ : ಸುಧಾಕರ್

ಬೆಂಗಳೂರು : ‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ವಿಶ್ವವ್ಯಾಪಿಯಾಗಿ ಹರಡುತ್ತಿರುವ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ,ಅಂತರ್ ರಾಷ್ಟ್ರೀಯ ವಿಮಾನ ಬಂದ್ ಮಾಡಿಲ್ಲ, ಆದರೆ ನಿಯಂತ್ರಣ …

Read More »

ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟ ಅಗತ್ಯ ಇರುವವರಿಗೆ, ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್ ನೀಡಲಾಗುವುದು. 15-18 ವರ್ಷಗಳ ಮಕ್ಕಳ ಲಸಿಕಾ ಕಾರ್ಯಕ್ರಮವೂ ವೇಗವಾಗಿ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ಹೇಳಿದರು. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಭಾರತ 150 ಕೋಟಿ ಡೋಸ್ ಲಸಿಕೆ ನೀಡಿ ಮೈಲುಗಲ್ಲು ಸ್ಥಾಪಿಸಿದೆ. ಕೊರೊನಾ …

Read More »

ವಿದ್ಯಾರ್ಥಿಗಳ ಸ್ಕಾರ್ಫ್ ವಿವಾದ : ಕುಲಪತಿ ಅಸಮಾಧಾನ

ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.

Read More »

ರಾಜ್ಯದಲ್ಲಿ 8,449 ಕೇಸ್ ಕೊರೊನಾ ಮಹಾಸ್ಪೋಟ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

Read More »

ನೈಟ್‌ ಕರ್ಪ್ಯೂ 8 ರಿಂದ ಅಲ್ಲ ರಾತ್ರಿ 10 ರಿಂದ; ನೈಟ್ ಕರ್ಫ್ಯೂ ಟೈಮಿಂಗ್ಸ್ ನಲ್ಲಿ ಗೊಂದಲ;ಟೈಪಿಂಗ್‌ ಮಿಸ್ಟೇಕ್- ಸ್ಪಷ್ಟನೆ ನೀಡಿದ ಸಚಿವ ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಕರ್ಫ್ಯೂ ಸಮಯದ ಬಗ್ಗೆ ಸಾಕಷ್ಟು ಗೊಂದಲಗಳು ಆರಂಭವಾಗಿತ್ತು. ಆದರೆ ಈ ಗೊಂದಲಗಳಿಗೆ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಿರುವ ನೈಟ್ ಕರ್ಫ್ಯೂ ಜತೆಗೆ ಇಂದಿನಿಂದ ವೀಕೆಂಡ್ ಕರ್ಫ್ಯೂವನ್ನು ಕೂಡ ಜಾರಿಗೆ ತಂದಿದ್ದು, ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕರ್ಫ್ಯೂ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, …

Read More »

ಕಳೆದ ಒಂದೆ ದಿನದಲ್ಲಿ 377 ಒಮಿಕ್ರಾನ್ ಪ್ರಕರಣ ಪತ್ತೆ

ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ. ಕಳೆದ ಒಂದು ದಿನದಲ್ಲಿ 377 ಒಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3007ಕ್ಕೇರಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರ ಒಂದೇ ದಿನ 1199 ಸೋಂಕಿತರು ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Read More »

ಆರ್.ಅಶೋಕ ಗೆ ಕೋವಿಡ್ ದೃಢ

ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ.ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಶೀತ, ಜ್ವರದಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »