admin
January 7, 2022
Breaking News, ಕರ್ನಾಟಕ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋವಿಡ್ ಏರಿಕೆ ಆಗಿದ್ದು ಆತಂಕ ಸೃಷ್ಟಿಸಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೋವಿಡ್ ರೂಪಾಂತರಿ ಓಮಿಕ್ರಾನ್ ಮಣಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುತ್ತಿದೆ.ಕರ್ನಾಟಕದ ರಾಜಾಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ.. ಉದ್ಯೋಗ ಹಾಗೂ ಶಿಕ್ಷಣಕ್ಕೆ ಮೈಸೂರಿನ ಬಹುತೇಕರು ಬೆಂಗಳೂರನ್ನು ಆಶ್ರಯಿಸಿದ್ದಾರೆ. ಹೀಗಾಗಿ ರೋಗ ಲಕ್ಷಣ ರಹಿತರು ಏನಾದರೂ ನಗರದಲ್ಲಿ ಓಡಾಡಿದರೆ ಇದರಿಂದ ಸೋಂಕು ಮತ್ತಷ್ಟು ಜನರಿಗೆ ಹರಡುವ ಸಾಧ್ಯತೆ ಇದೆ.
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಕಂಟಕವಾಗಲಿದೆ,ಕೊರೊನಾ 3 ನೇ ಅಲೆಯಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ, ಮೈಸೂರು, ಮಂಡ್ಯ, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ …
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಜನವರಿ 11ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ, ಇನ್ನುಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಬಿಸಿಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 28.0 ಡಿಗ್ರಿ …
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆ ಮತ್ತು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು , ಜನವರಿ 26 ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ . ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು.
Read More »
admin
January 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು, ಒಮಿಕ್ರಾನ್ ಪ್ರಕರಣ ರಾಜ್ಯ ರಾಜಧಾನಿಯಲ್ಲಿ ಏರುತ್ತಲೇರಿವುದು ಜನರ ನಿದ್ದೆಗೆಡಸಿದೆ. ಸಿಲಕಾನ್ ಸಿಟಿ ಜನ ಭಯ ಬೀತರಾಗಿ ಊರು ಬಿಡುತ್ತಿದ್ದಾರೆ. ಈಗ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಆದರೆ ಮುಂದೆ ಲಾಕ್ ಡೌನ್ ಜಾರಿ ಮಾಡಿದರೆ ಹೇಗೆ ಬದುಕುವುದು ಎಂದು ರಾತ್ರೊ ರಾತ್ರಿ ತಮ್ಮ ಊರುಗಳತ್ತ ಗುಳೆ ಹೊರಟಿದ್ದಾರೆ. ಈಗಾಗಲೇ ರಾಜ್ಯ ಸರಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ, ಮುಂದೆ ಲಾಕ್ ಡೌನ್ ಮಾಡಿದರು …
Read More »
admin
January 6, 2022
Breaking News, News, ಕರ್ನಾಟಕ, ಬೆಂಗಳೂರು
ರಾಜ್ಯದಲ್ಲಿ ವೀಕೆಂಡ್ ಕರ್ಫೂ ಜಾರಿ ಹಿನ್ನೆಲೆ, ನಗರದ ಬಿಎಂಟಿಸಿ ಸಂಚಾರಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅಗತ್ಯ ಸೇವೆಗಳ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ಕಂಟೋನ್ಮೆಂಟ್ ಜೋನ್ ಹೊರತುಪಡಿಸಿ, ಶೇ 10 ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಚರಣೆ ನಡೆಸಲಾಗುವುದು ಎಂದು ತಿಳಿಸಿದೆ. ಇನ್ನೂ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸ್ ಗಳ ಕಾರ್ಯಚರಣೆ ಇರುತ್ತದೆ ಎಂದು ಹೇಳಲಾಗಿದೆ. ಇನ್ನೂ ಆಸ್ಪತ್ರೆಗೆ …
Read More »
admin
January 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಇಂದಿನಿಂದ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ. ಈ ಸಂಬಂಧನಗರದಾದ್ಯಂತ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಎರಡು ವಾರಗಳು ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
Read More »
admin
January 6, 2022
Breaking News, ಕರ್ನಾಟಕ, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ‘ಕೋವಿಡ್ ಮೂರನೇ ಅಲೆ ಒಂದೂವರೆ ತಿಂಗಳಲ್ಲಿ ಕಡಿಮೆ ಆಗುತ್ತದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ವರದಿ ಕೊಟ್ಟಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐದಾರು ವಾರ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ,ಮೂರನೇ ಅಲೆಯೇ ಅಂತಿಮವಾದುದು ಎಂದು ನಿರೀಕ್ಷಿಸಲಾಗಿದೆ’ ಎಂದರು.
Read More »
admin
January 6, 2022
Breaking News, ಕರ್ನಾಟಕ, ತುಮಕೂರು
ತುಮಕೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಗುಸುಗುಸು ಸ್ಫೋಟಗೊಂಡಿದ್ದು, ಭಾರೀ ಸಂಚಲನ ಮೂಡಿಸಿದೆ. ಈ ನನ್ ಮಗ, ನಮ್ ಮಂತ್ರಿ ಹೇಂಗೆ ಗೊತ್ತಾ? ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಅವನಂತೆ. ಕೆಟ್ಟ ನನ್ಮಗ. ಇವನಿಂದ ಜಿಲ್ಲೆಯಲ್ಲಿ ಒಂದು ಸೀಟ್ ಬರೋಲ್ಲ… ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ. ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ… ಎಂದು ಸುದ್ದಿಗೋಷ್ಠಿಯಲ್ಲೇ ಕುಳಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುಗೆ ಸಂಸದ ಜಿ.ಎಸ್.ಬಸವರಾಜು ಚಾಡಿ ಹೇಳುತ್ತಿದ್ದ ವಿಡಿಯೋ …
Read More »
admin
January 6, 2022
Breaking News, ಕರ್ನಾಟಕ
ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.
Read More »