admin
December 22, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಿಸಿದೆ, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಒಮೈಕ್ರಾನ್ ರೂಪಾಂತರದ ಗರಿಷ್ಠ 57 ಪ್ರಕರಣಗಳು …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ದೆಹಲಿ, ದೇಶ-ವಿದೇಶ, ಸುದ್ದಿ
ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ. ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ:– ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಿದ್ಧಾಂತಗಳಿಗೆ ಅಪಚಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12ನೆ ಶತಮಾನದಲ್ಲಿ ಎಲ್ಲ ಸಮುದಾಯಗಳಿಗೂ ಲಿಂಗಧಾರಣೆ ಮಾಡುವ ಮೂಲಕ ಬಸವಣ್ಣ ಸಮಾನತೆಯ ತತ್ವ ಸಾರಿದ್ದರು. ಅಂಬೇಡ್ಕರ್ ಅವರು ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡಿದ್ದರು. ಆದರೆ, ಬಿಜೆಪಿಯವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು …
Read More »
admin
December 21, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ – ಸಂಗಮ ಹಾಗೂ ಸಾಮಾಜಿಕ ಕಾರ್ಯಕರ್ತೆ ನಿಶಾ ಗೂಳೂರ್ ಪರ ಹಿರಿಯ ವಕೀಲ ಬಿಟಿ ವೆಂಕಟೇಶ್ …
Read More »
admin
December 21, 2021
Breaking News, World, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು : 2021ಕ್ಕೆ ಬೈ-ಬೈ ಹೇಳಿ 2022ಕ್ಕೆ ಹಾಯ್ ಹೇಳುತ್ತಾ ಅದ್ಧೂರಿಯಾಗಿ ಹೊಸ ವರ್ಷವನ್ನು ವೆಲ್‌ಕಮ್ ಮಾಡ್ಕೊಳ್ಳೋಕೆ ಸಾಕಷ್ಟು ಮಂದಿ ತುದಿಗಾಲಲ್ಲಿರುವ ಹೊತ್ತಿನಲ್ಲೇ, ಕೊರೊನಾ ಮತ್ತು ಒಮಿಕ್ರಾನ್ ವೈರಸ್ ತಡೆಗಟ್ಟುವ ಕಾರಣದಿಂದ ಸರ್ಕಾರ ಅದ್ಧೂರಿ ವರ್ಷಾಚರಣೆಗೆ ಬ್ರೇಕ್ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜೊತೆಗೆ ಕ್ರೀಸ್ಮಸ್ ಹಬ್ಬಕ್ಕೆ ಯಾವುದೇ ನಿರ್ಭಂದ ಹೇರಿಲ್ಲ. ರೆಸ್ಟೋರೆಂಟ್, ಕ್ಲಬ್‌ಗಳಿಗೆ ಶೇಕಡಾ 50ರಷ್ಟು ಜನರಿಗೆ ಪ್ರವೇಶಸೀಮಿತ ಪ್ರಮಾಣದಲ್ಲಿ ಮ್ಯೂಸಿಕ್, ಡಿ.ಜೆಗೆ ಅವಕಾಶಎಂಜಿ ರಸ್ತೆ, ಬ್ರಿಗೇಡ್ ರಸ್ತೆ …
Read More »
admin
December 21, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ರಾಜ್ಯ ರೈಲ್ವೆ ಪೊಲೀಸರು ವಾಸಿಸುವಂತಹ ಕ್ವಾಟರ್ಸ್ ಇದೀಗ ಕುಡುಕರ ಅಡ್ಡೆಯಾಗಿದೆ. ಇದರಿಂದ ಕ್ವಾಟರ್ಸ್ನಲ್ಲಿ ವಾಸಿಸುವಂತಹ 300ಕ್ಕೂ ಅಧಿಕ ಪೊಲೀಸ್ ಕುಟುಂಬಗಳು ಬಾಡಿಗೆ ಮನೆಯಲ್ಲಿ ಕಾಲ ಕಳೆಯುವಂತಾಗಿದೆ. ಕುಡುಕರ ಅಡ್ಡೆಯಾದ ಶತಮಾನದ ರೈಲ್ವೆ ಪೊಲೀಸ್ ಕ್ವಾಟರ್ಸ್.. ಶೀಘ್ರ ಕ್ರಮಕ್ಕೆ ಸ್ಥಳೀಯರ ಆಗ್ರಹಗದಗ ರಸ್ತೆಯ ನೆಹರು ನಗರದ ಪೊಲೀಸ್ ಕ್ವಾಟರ್ಸ್ನಲ್ಲಿ ಸುಮಾರು 300 ಕುಟುಂಬಗಳು ನಿಶ್ಚಿಂತವಾಗಿ ವಾಸಿಸುತ್ತಿದ್ದವು. ಆದರೆ, ಕಟ್ಟಡ ಬೀಳ್ಳುವ ಸ್ಥಿತಿಯಲ್ಲಿದ್ದರಿಂದ ಎಲ್ಲರೂ ಕ್ವಾಟರ್ಸ್ ಬಿಟ್ಟು ಬಾಡಿಗೆ ಮನೆಯಲ್ಲಿ …
Read More »
admin
December 21, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ
ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕು ಈಗ ವ್ಯಾಪಕವಾಗಿ ಹರಡುತ್ತಿದ್ದು, ಲಸಿಕೆ ಪಡೆದ ಹಾಗೂ ಸೋಂಕಿನಿಂದ ಚೇತರಿಸಿಕೊಂಡ ಮಂದಿಯಲ್ಲೂ ಸಹ ಕಂಡು ಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ತಿಳಿಸಿದ್ದಾರೆ. “ಡೆಲ್ಟಾ ರೂಪಾಂತರಿಗಿಂತಲೂ ಒಮಿಕ್ರಾನ್ ವ್ಯಾಪಕವಾಗಿ ಹರಡುತ್ತಿದೆ ಎಂಬ ಕುರಿತು ಈಗ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ,” ಎಂದ ಟೆಡ್ರೋಸ್, “ಮತ್ತು ಲಸಿಕೆ ಪಡೆದ ಮತ್ತು ಚೇತರಿಸಿಕೊಂಡ ಮಂದಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ,” ಎಂದಿದ್ದಾರೆ.
Read More »
admin
December 21, 2021
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಸುದ್ದಿ
ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿತರಣೆ ಮಾಡುತ್ತಿರುವ ಮೊಟ್ಟೆ ನೀಡುವ ಯೋಜನೆಯನ್ನು ಮುಂದುವರೆಸಬೇಕು ಎಂದು ಅಗ್ರಹಿಸಿ ಹಾಗೂ ಮೊಟ್ಟೆ ವಿರೋಧ ಮಾಡುತ್ತಿರುವುದನ್ನು ಖಂಡಿಸಿ, ಧಾರವಾಡದಲ್ಲಿ ವಿವಿಧ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಹಾಗೂ ವಿವಿಧ ದಲಿತ ಸಂಘಟನೆಯ ನೇತೃತ್ವದಲ್ಲಿ, ನಗರದ ನಗರದ ಜನರು ಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ, ಕಾರ್ಯಕರ್ತರು ಮೊಟ್ಟೆ ಹಿಡಿದು ವಿರೋಧಿಗಳ ವಿರುದ್ಧ ಧಿಕ್ಕಾರ …
Read More »
BigTv News
December 20, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜಿಲ್ಲೆಯಲ್ಲಿ ಒಂದು ಒಮಿಕ್ರಾನ್ ಕೇಸ್ ಪತ್ತೆ ಆಗಿದೆ.54 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಕೇಸ್ 19 ಕ್ಕೆ ಏರಿದಂತಾಗಿದೆ ಎಂದು ಟ್ವಿಟರ್ ನಲ್ಲಿಯೇ ಈ ಎಲ್ಲ ವಿಷಯ ಹಂಚಿಕೊಂಡಿದ್ದಾರೆ.
Read More »
BigTv News
December 20, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಒಬ್ಬರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನೆಡೆದಿದೆ. ರಂಗರಾಜು ಎಸ್ ಎ (59) ಸಾವಿಗೀಡಾದ ಇಂಜಿನೀಯರ್ ಆಗಿದ್ದು, ನಿನ್ನೆ ರಾತ್ರಿ 11.30 ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಬಿದ್ದು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು,ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದರೂ ಈ ವೇಳೆ ಬೇರೆ ರೈಲಿಗೆ ಹತ್ತಿದ್ದ ವಿಷಯ ತಿಳಿದು ಚಲಿಸುತ್ತಿದ್ದ ರೈಲು ಇಳಿಯುವಾಗ …
Read More »