ಧಾರವಾಡ : ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಢೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ,ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲ್ಲೂ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. …
Read More »ವಾಸನ್ ಐ ಕೇರ್ ಹತ್ತಿರ ಕಳ್ಳನಿಗೆ ಬಿತ್ತು ಸಾರ್ವಜನಿಕ ಗೂಸಾ
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ-ಪ್ರಭು ಚವ್ಹಾಣ್
ಮಿಲಿಟರಿ ಮ್ಯಾನ್ ಎಂದು ಹೆಸರು ಹೇಳಿ ಸೈಕಲ್ ಅಂಗಡಿಯವನಿಗೆ ವಂಚನೆ
ಹುಬ್ಬಳ್ಳಿ: ಮಿಲಿಟರಿ ಕ್ಯಾಂಟೀನ್‌ಗೆ 20 ಸೈಕಲ್ ಬೇಕಾಗಿದೆ ಎಂದು ನಂಬಿಸಿ, ಆನ್ಲೈನ್‌ಲ್ಲಿ 70 ಸಾವಿರ ರೂ . ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಿಕರ ರಸ್ತೆಯ ದೀಪಕ್ ಸೈಕಲ್ ಅಂಗಡಿಯ ವ್ಯವಸ್ಥಾಪಕ ಸುನೀಲ್ ವಕ್ಕುಂದ ವಂಚನೆಗೆ ಒಳಗಾದವರು. 20 ಸೈಕಲ್‌ಗೆ ಸುನೀಲ್ 1.36 ಲಕ್ಷ ರೂ.ಬಿಲ್‌ನ್ನು ವಂಚಕನ ವಾಟ್ಸ್ ಆ್ಯಪ್‌ಗೆ ಕಳುಹಿಸಿದ್ದರು. ನಂತರ ಸೈಕಲ್ ಗಳನ್ನು ಕ್ಯಾಂಟೀನ್ ಬಳಿ ಸಾಗಿಸಿದಾಗ, ಕ್ಯಾಂಟೀನ್ …
Read More »ಬಿಜೆಪಿಯಿಂದ ಮಲ್ಲಿಕಾರ್ಜುನ ಹಾವೇರಿಯನ್ನು 6 ವರ್ಷ ಉಚ್ಛಾಟನೆ
ಹುಬ್ಬಳ್ಳಿ:ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶ ಹೊರಿಡಿಸಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಲ್ಲಿಕಾರ್ಜುನ ಹಾವೇರಿಯನ್ನ ಉಚ್ಛಾಟಿಸಿದ್ದಾರೆ. ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. …
Read More »ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಇಲ್ಲಿದೆ ಖುಷಿ ಸುದ್ದಿ
ದೆಹಲಿ: ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು ರೈಲಿನಲ್ಲಿ ಸೀಟಿನ ಬಗ್ಗೆ ಚಿಂತಿಸಬೇಕಾಗಿಲ್ಲ. ಬಸ್ ಮತ್ತು ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಸೀಟುಗಳ ವ್ಯವಸ್ಥೆ ಇರುವಂತೆ ಭಾರತೀಯ ರೈಲ್ವೇ ಕೂಡ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಲಿದೆ. ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಬರ್ತ್‌ಗಳನ್ನು ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. …
Read More »ಆಟೋರಿಕ್ಷಾದ ಮೇಲೆ ಬಿದ್ದ ಕಂಟೇನರ್ ಟ್ರಕ್..! ನಾಲ್ವರ ದಾರುಣ ಸಾವು
ದೆಹಲಿ : ಚಲಿಸುತ್ತಿದ್ದ ಆಟೋ ಮೇಲೆ ಕಂಟೇನರ್ ಟ್ರಕ್ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆಯು ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಸಂಭವಿಸಿದೆ. ಇಂದು ಮುಂಜಾನೆ 6:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕಂಟೇನರ್ ಆಟೋರಿಕ್ಷಾದ ಮೇಲೆ ಬೀಳುತ್ತಿದ್ದಂತೆಯೇ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಂಟೇನರ್ ಟ್ರಕ್ ಚಲಾಯಿಸುತ್ತಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ …
Read More »ಆರ್’ಎಸ್‌ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಚಂದ್ರಶೇಖರ್ ನಿಂದ ಮತಾಂತರ ವಿಚಾರ ಪ್ರಸ್ತಾಪ; ಕಾಂಗ್ರೆಸ್
ಬೆಂಗಳೂರು: ಹಲವು ವರ್ಷಗಳ ಹಿಂದೆಯೇ ತಮ್ಮ ತಾಯಿ ಮತಾಂತರಗೊಂಡಿದ್ದರೂ ಈಗೇಕೆ ಗೂಳಿಹಟ್ಟಿ ಚಂದ್ರಶೇಖರ್ ಅವರು ಮತಾಂತರ ವಿಚಾರವನ್ನು ಪ್ರಸ್ತಾಪಿಸಿದರು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಧ್ರುವನಾರಾಯಣ್ ಅವರು, ಗೂಳಿಹಟ್ಟಿ ಚಂದ್ರಶೇಖರ್ ಅವರ ತಾಯಿ ಹಲವು ವರ್ಷಗಳ ಹಿಂದೆಯೇ ಮತಾಂತರಗೊಂಡಿದ್ದರು. ಆದರೆ, ಈಗ ಆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಆರ್’ಎಸ್‌ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಅವರು ಈ ವಿಚಾರವನ್ನು …
Read More »ಅಖಿಲ ಭಾರತ ರೈಲ್ವೆ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ : ನೈರುತ್ಯ ರೈಲ್ವೆಗೆ ದ್ವಿತೀಯ ಸ್ಥಾನ
ಹುಬ್ಬಳ್ಳಿ : ಪಶ್ಚಿಮ ರೈಲ್ವೆ ವತಿಯಿಂದ ಮುಂಬೈನಲ್ಲಿ ಇದೇ ತಿಂಗಳು 7 ರಿಂದ 10ರವರೆಗೆ 17ನೇ ಅಖಿಲ ಭಾರತ ರೈಲ್ವೆ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ನೈರುತ್ಯ ರೈಲ್ವೆಯು 1 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕವನ್ನು ಗೆದ್ದು ಚಾಂಪಿಯನ್‌ಷಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹುಬ್ಬಳ್ಳಿ ವಿಭಾಗದಲ್ಲಿ ಜ್ಯೂನಿಯರ್ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮುದಾಸರ್ ಖಾನ್ ಮತ್ತು ಶ್ರೀರಾಜ್ ಪಿ.ಎಸ್ ಅವರು ಕ್ರಮವಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





