Breaking News

ಕರ್ನಾಟಕ

ಕರ್ನಾಟಕದ ಮೂಲಕ ಭಾರತಕ್ಕೆ ಓಮಿಕ್ರಾನ ಎಂಟ್ರಿ

ಬೆಂಗಳೂರು: ರಾಜ್ಯದ ಇಬ್ಬರಲ್ಲಿ ಓಮಿಕ್ರಾನ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ.ದೇಶದಲ್ಲೇ ಮೊದಲ ಎರಡು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು.ರಾಜ್ಯದ ಮೂಲಕ ಭಾರತಕ್ಕೆ ಓಮಿಕ್ರಾನ ಪತ್ತೆಯಾಗಿದೆ.ಡೆಲ್ಟಾ ವೈರಸ್ ಗಿಂತ ಅತಿ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸಿಲಿಕಾನ್ ಸಿಟಿ ಬೆಂಗಳೂರಿಗೆ ಓಮಿಕ್ರಾನ ಡಬಲ್ ಶಾಕ್ ನೀಡಿದೆ.ಬೆಂಗಳೂರಿನ 64 ಹಾಗೂ 46 ವರ್ಷದ ವೃದ್ದರಲ್ಲಿ ಓಮಿಕ್ರನಾ ಪತ್ತೆಯಾಗಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಮೂಲಕ ಓಮಿಕ್ರಾಮಮನ …

Read More »

ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ-

ಹುಬ್ಬಳ್ಳಿ: ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಗೋಕುಲ ರಸ್ತೆ ಪೋಲೀಸ್ ಠಾಣೆ ಹಾಗೂ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹಿರಿಯ ಅಧಿಕಾರಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾಗಳ ಕಾರ್ಯವಿಧಾನ ಪರಿವೀಕ್ಷಿಸಿದರು. ಇನ್ನಿತರ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. …

Read More »

ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ-ನಟ ಚೇತನ್‌

ಮೈಸೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ ಎಂದು ನಟ ಚೇತನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದರು. ಪಿರಿಯಾಪಟ್ಟಣ …

Read More »

ಕೇರಳದಿಂದ ಬಂದ 13 ನರ್ಸಿಂಗ್​ ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ-ಮಲೆನಾಡಿನ ಹೆಬ್ಬಾಗಿಲಲ್ಲಿ ಕೊರೋನಾ ಭೀತಿ

ಶಿವಮೊಗ್ಗ: ನಂಜಪ್ಪ ನರ್ಸಿಂಗ್​ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್​ ಕೇರ್​ ಸೆಂಟರ್​ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್​ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಧಾರವಾಡ ಮತ್ತು ಮೈಸೂರು ಜಿಲ್ಲೆಗಳ ನರ್ಸಿಂಗ್​ ಕಾಲೇಜು ವಿದ್ಯಾರ್ಥಿಗಳಲ್ಲಿ ಮೊದಲು ಕೋವಿಡ್‌ ಕಂಡು ಬಂದಿತ್ತು. ಧಾರವಾಡ ಜಿಲ್ಲೆಯಲ್ಲಿ ಭಾನುವಾರದಿಂದ …

Read More »

ಶಾಸಕರೇ ಈ ಕಡೆ ಸ್ವಲ್ಪ ನೋಡ್ರಿ-ನೀವು ಮಾಡ್ಸೋ ಕೆಲ್ಸಾನಾ ನಾವ್‌ ಮಾಡ್ಸಾಕತ್ತವಿ !

ಧಾರವಾಡ : ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೆಸರಗೊಂಡ ಬಸೀರ್ ಎಮ್ ಹಾಳಭಾವಿ ಎನ್ನುವವರು ತಮ್ಮ ಸ್ವಂತ ಖರ್ಚಿನಲ್ಲಿ ಗಟ್ಟಿ ಮಣ್ಣು ತರಸಿ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡಿದ್ದಾರೆ. ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ : ಜನರೇ ಮುಂದೆ ನಿಂತು ತಗ್ಗು ಗುಂಡಿಗಳ ಮುಚ್ಚುವ ಕೆಲಸ ಧಾರವಾಡ ಕಮಲಾಪುರಕ್ಕೆ ಹೋಗುವ ರಸ್ತೆ ಇದಾಗಿದ್ದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರ ವ್ಯಾಪ್ತಿಯಲ್ಲಿ ಬರುವ ರಸ್ತೆ ಆಗಿದೆ.ಶಾಸಕರು ಹಾಗೂ ಸ್ಥಳೀಯ ಕಾರ್ಪೊರೇಟರ್ …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಮನೆಯಲ್ಲಿದ್ದಾಗ ಆಯಾಸವಾಗಿ ಕುಸಿದು ಬಿದ್ದಿರುವ ಸ್ಯಾಂಡಲ್​ವುಡ್ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಯಾಂಡಲ್​ವುಡ್‌ನ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Read More »

ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ – ಭಾನುವಾರದೊರೆಗೂ ಶಾಲೆಗೆ ರಜೆ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿಸಿದ್ದು ಶಾಲೆಗೆ ರಜೆ ಘೋಷಿಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ …

Read More »
Featured Video Play Icon

ಬಿಜೆಪಿ’ ಸಭೆಯಲ್ಲಿ ಕೈ ಕೈ ಮಿಲಾಯಿಸಿ ಗಲಾಟೆ-ಘಟಾನುಘಟಿಗಳ ಎದುರಲ್ಲೇ ಗಲಾಟೆ ಮಾಡಿಕೊಂಡ ಶಾಸಕ ಹಾಗೂ ಎಂಎಲ್‌ ಸಿ

Read More »

ಕೋವಿಡ್ ಹೆಚ್ಚಳದಿಂದ ಕಠಿಣ ಕ್ರಮ ಅನಿವಾರ್ಯ: ಲಾಕ್ ಡೌನ್ ಪ್ರಸ್ತಾಪವಿಲ್ಲ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೂ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಪ್ರಸ್ತಾಪ ಇಲ್ಲ. ಲಾಕ್ ಡೌನ್ ಮಾಡುವುದಿಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿರ್ಬಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಿಎಂ‌ ಬಸವರಾಜ ಬೊಮ್ಮಾಯಿ ಹೇಳಿದರು. ಬಸವರಾಜ್ ಬೊಮ್ಮಾಯಿ(ಮುಖ್ಯಮಂತ್ರಿಗಳು) ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಖಾಸಗಿ …

Read More »

ಹುಬ್ಬಳ್ಳಿ ಮೂಲದ ವ್ಯಕ್ತಿ ಅರಸಿಕೇರೆಯಲ್ಲಿ ನೇಣಿಗೆ ಶರಣು

ಬೆಂಗಳೂರು : ಹುಬ್ಬಳ್ಳಿ ಮೂಲದ ಲಾರಿ ಚಾಲನೊಬ್ಬ ಬೆಂಗಳೂರಿನ ಅರಸಿಕೇರಿಯಲ್ಲಿ ಭಾನುವಾರದಂದು ನೇಣಿಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಅರಸಿಕೇರಿ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಲ್ಲಸಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ, ಮೃತ ವ್ಯಕ್ತಿ ಲಾರಿ‌ಚಾಲಕನಾಗಿದ್ದು KA25 AA 7128 ನಂಬರ ಹೊಂದಿದ್ದು, ಹುಬ್ಬಳ್ಳಿ ಮೂಲದವನೆಂದು ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.ಈ ಕುರಿತು ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ‌.

Read More »