admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಮೂಲರಪಟ್ನ ಮುತ್ತೂರು ಸೇತುವೆ ಕುಸಿದು ಒಂದು ವರ್ಷ ಕಳೆದಿದೆ. ಆದರೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸೇತುವೆ ಪುನರ್ ನಿರ್ಮಾಣಕ್ಕೆ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಧರಣಿ ನಡೆಸಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ನಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಸೇತುವೆ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಸ್ಥಳೀಯರ ಜತೆ ಪ್ರತಿಭಟನೆ ನಡೆಸಿದ ಹೋರಾಟ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಿಶೇಷ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣದಲ್ಲಿ ಮಾಲೀಕ ಮೊಹಮದ್ ಮನ್ಸೂರ್ ಅಲಿ ಖಾನ್ ಈ ಹಿಂದೆ ವೀಡಿಯೋ ಬಿಡುಗಡೆ ಮಾಡಿ, ರೋಷನ್ ಬೇಗ್‌ಗೆ ಐದು ಕೋಟಿ ರೂಪಾಯಿ ನೀಡಿದ್ದೇ ಎಂದು ಹೇಳಿದ್ದರು.ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಆಗಮಿಸಲು ರೋಷನ್ ಬೇಗ್‌ಗೆ ಹಲವಾರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಗೈರು ಹಾಜರಾಗಿದ್ದರು.ಸೋಮವಾರ ರಾತ್ರಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಇಂದು ಗುರು ಪೌರ್ಣಿಮೆಯ ನಿಮಿತ್ತ ಚಳ್ಳಕೆರೆಯ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ‍್ಯ ಮಾಡಲಾಯಿತು.ಔದಂಬರಾ ಮರಕ್ಕೆ ವಂದಿಸಿ ನಂತರ ದತ್ತಾತ್ರೇಯ ದರ್ಶನ ಪಡೆದು ಭಕ್ತರು ಪುನೀತರಾದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು; ಇಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ವಿವಿಧ ಪ್ರಮುಖ ದೇಗುಲಗಳಲ್ಲಿ ಪೂಜಾ ಸಮಯ ವ್ಯತ್ಯಯವಾಗಲಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯ ವ್ಯತ್ಯಯ ಆಗಲಿದೆ . ಇಂದು ರಾತ್ರಿ 7ಕ್ಕೆ ನಡೆಯುವ ಮಹಾಪೂಜೆಯನ್ನು ಸಂಜೆ 6.30ಕ್ಕೆ ಮುಂಚಿತವಾಗಿ ನಡೆಸಲಾಗುತ್ತದೆ. ಬಳಿಕ 7ರಿಂದ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಸಂಜೆ ದೇವಸ್ಥಾನದಲ್ಲಿ ನಡೆಯುವ ಆಶ್ಲೇಷ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆ ಇರುವುದಿಲ್ಲ. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗಿನ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಮಂಡ್ಯ ಪಟ್ಟಣದ ಬೂಕನಕೆರೆ ಗ್ರಾಮದಲ್ಲಿಂದು ರಾಜ್ಯದಲ್ಲಿ ನಡೆಯುತ್ತಿರೊ ರಾಜಕೀಯ ಬೆಳವಣಿಗೆಯ ಹಿನ್ನಲೆಯಲ್ಲಿಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿ ಯಡಿಯೂರಪ್ಪ ಸ್ವಗ್ರಾಮದಲ್ಲಿಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಬೂಕನಕೆರೆಯಲ್ಲಿರುವ ಬಿ.ಎಸ್.ವೈ. ಸಂಬಂಧಿಗಳ ನೇತೃತ್ವದಲ್ಲಿ ಗ್ರಾಮಸ್ಥರಿಂದ ಪೂಜೆ ಕೈಂಕರ್ಯ ನೆರವೇರಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟೂರಾದ ಬೂಕನಕೆರೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಬೂಕನಕೆರೆ ಗ್ರಾಮ ದೇವತೆ ಗೋಗಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಗಣಪತಿ ಹೋಮ ನಡೆಸುವ ಮೂಲಕ ಪೂಜಾ ಕಾರ್ಯ ನೆರವೇರಿಸಲಾಯಿತು.ಯಡಿಯೂರಪ್ಪ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ: ದ್ವಾರಕೀಶ್ ಆರೋಗ್ಯದ ಕುರಿತು ಸಮಾಜಿಕ ಜಾಲತಾಣದಲ್ಲಿ ಹಲವಾರು ಊಹಾಪೋಹಗಳು ಹರಿದಾಡುತ್ತಿವೆ. ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂಬುದಾಗಿ ತಿಳಿಯಲಾಗಿತ್ತು. ಈ ಎಲ್ಲ ಸಂದೇಹಗಳಿಗೆ ದ್ವಾರಕೀಶ್ ಸ್ವತಃ ತೆರೆ ಎಳೆದಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಎಂದು ದ್ವಾರಕೀಶ್ ಅವರು ವಿಡಿಯೋ ಕಳುಹಿಸುವ ಮೂಲಕ ಎಲ್ಲ ಊಹಾಪೋಹಗಳನ್ನು ಹೋಗಲಾಡಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಮಂಗಳೂರಿನ ಸುರತ್ಕಲ್ ನ ಅಕ್ರಮ ಟೋಲ್‌ಗೇಟ್ ವಿರುದ್ಧ ಏಕಕಾಲದಲ್ಲಿ ಕಾಂಗ್ರೆಸ್ ಬೆಂಬಲಿತ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಮುಂಜಾನೆಯೇ ಟೋಲ್‌ಗೇಟ್ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಅಕ್ರಮ ಟೋಲ್ ವಸೂಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯು ಪ್ರತಿಭಟನೆ ನಡೆಸುವ ಸನಿಹದಲ್ಲೇ ಬಿಜೆಪಿಗರೂ ಕೂಡ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಈ ವೇಳೆ ಮಾತನಾಡಿದ ಹೋರಾಟ ಸಮಿತಿಯ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ತೆಕ್ಕೆಗೆ ಬೆಸ್ಕಾಂ ಅಧಿಕಾರಿಯೊಬ್ಬ ಬಿದ್ದಿರುವ ಪ್ರಕರಣ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುತ್ತನಲ್ಲೂರು ಬೆಸ್ಕಾಂ ಕಾರ್ಯ ವಿಭಾಗದಲ್ಲಿ ನಡೆದಿದೆ.ವಿನೋದ್ ಸಹಾಯಕ ಅಭಿಯಂತಕ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.ಚಿಂತಾಲಾಮಡಿವಾಳಾ ಗ್ರಾಮದ ನಿವಾಸಿಯೊಬ್ಬರು ಕಂಬವನ್ನು ಸ್ಥಳಾಂತರ ಮಾಡುವ ಬಗ್ಗೆ 45.000 ಅಧಿಕಾರಿ ವಿನೋದ ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ 20.000 ಮುಂಗಡ ಹಣ ನೀಡುವಾಗ ಪೋಲಿಸರು ವಶಕ್ಕೆ ಪಡೆದಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಶೀಳನೆರೆ ಹೋಬಳಿಯ ಟಿಬಿ ಮಂಚನಹಳ್ಳಿ ಬಳಿ ಕಾಲುವೆ ಪಕ್ಕದಲ್ಲಿ ಹನ್ನೊಂದು ಕೆವಿ ವಿದ್ಯುತ್ ತಂತಿ ಬಿದ್ದು ದರ್ಶನ್ (35) ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ .ತೆಂಡೇಕೆರೆ ಹೋಬಳಿಯಅಕ್ಕಿ ಮಂಚನಹಳ್ಳಿ ಗ್ರಾಮದವರಾಗಿದ್ದು ಸುಮಾರು ಮೂರು ಗಂಟೆಯಲ್ಲಿ ಟಿಬಿ ಮಂಚೇನಹಳ್ಳಿಗೆ ರೇಷನ್ ಕಾರ್ಡಿಗೆ ಹೆಬ್ಬೆಟ್ಟು ಕೊಡಲು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹನ್ನೊಂದು ಕೆವಿ ತಂತಿ ಅವರ ಮೇಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .ವಿಷಯ ತಿಳಿದರೂ ಸಹ ಯಾವುದೇ ಕೆಇಬಿ ಸ್ಥಳಕ್ಕೆ ಬಂದಿಲ್ಲ ಎಂದು …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಸುಳ್ಳೇರಿ ಗ್ರಾಮದ ಕೆರೆಯಲ್ಲಿ ಇದ್ದಕ್ಕಿದ್ದಂತೆ ಕಾಡಾನೆಗಳು ಪ್ರತ್ಯಕ್ಷವಾಗಿವೆ.7 ಕಾಡಾನೆಗಳು ಕೆರೆಯಲ್ಲೆ ಬೀಡು ಬಿಟ್ಟಿವೆ.ಅಲ್ಲದೇ ತಡ ರಾತ್ರಿ ಗ್ರಾಮದ ರೈತರ ಜಮೀನಿಗಳಲ್ಲಿನ ಫಸಲು ತಿಂದು ಹಾಕುತ್ತಿವೆ. ಮುಂಜಾನೆಯಾದ್ರು ಕಾಡಿಗೆ ಹೋಗದೆ ಕೆರೆಯಲ್ಲೆ ಬೀಡು ಬಿಟ್ಟಿರುವ ಆನೆಗಳನ್ನು ಕಂಡು ಒಂದೆಡೆ ಭಯಭೀತರಾದರೆ ಮತ್ತೊಂದೆಡೆ ಆನೆಗಳನ್ನು ನೋಡಲು ಸಾರ್ವಜನಿಕರು ಮುಗಿಬಿದ್ದಿದ್ದರು.ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದರು.
Read More »