Breaking News

ಕರ್ನಾಟಕ

ಭಂಡ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.

ಚಿತ್ರದುರ್ಗ: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಅಲ್ಪಮತ ದೊರೆತಿದ್ದರೂ ಸಹ ರಾಜ್ಯಭಾರ ಮಾಡುವ ಬಂಡತನ ತೋರಿಸುತ್ತಿರುವ ಮೈತ್ರಿ ಸರ್ಕಾರ ವಿರುದ್ದ ಇಂದು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಕ್ಷದ ನಾಯಕರು ಈಗಲಾದರೂ ಎಚ್ಚೆತ್ತು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

Read More »

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ರಾಮನಗರ: ಬಹುಮತವಿಲ್ಲದ ಸರ್ಕಾರವನ್ನು ನಡೆಸುತ್ತಿರುವ ಹೆಚ್ಡಿಕೆಗೆ ವಿರುದ್ಧ ಸಿಎಂ ಸ್ವ ಕ್ಷೇತ್ರ ರಾಮನಗರದಲ್ಲಿ ರಾಮನಗರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.೧೪ ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿ ಬಹುಮತ ಕಳೆದುಕೊಂಡ ಸರ್ಕಾರದಸಿಎಂ ಗೆ ನೈತಿಕತೆ ಇದ್ರೆ ರಾಜೀನಾಮೆ ನೀಡಬೇಕೆಂಬ ಒತ್ತಾಯಿಸಿದರು.

Read More »

ರಾಜ್ಯದ ಶಾಸಕರಿಗೆ ಅಂತ್ಯ ಸಂಸ್ಕಾರ ನಡೆಸಿ ವಿನೂತನ ಪ್ರತಿಭಟನೆ

ಕೋಲಾರ: ರಾಜ್ಯದಲ್ಲಿ ಕಳೆದ ಕೆಲ‌ ದಿನಗಳಿಂದ ಶಾಸಕರ ರಾಜೀನಾಮೆಯ ಹೈ ಡ್ರಾಮಾ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಕೋಲಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ಸರ್ಕಾರ ಅಂತ್ಯ ಸಂಸ್ಕಾರ ಮಾಡಿ ವಿನೂತನ ಪ್ರತಿಭಟನೆ ನಡೆಸಲಾಯಿತು.ರಾಜ್ಯದ ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ರಾಜ್ಯದ 224 ಶಾಸಕರುಗಳಿಗೆ ನಗರದ ಮೆಕ್ಕೆ ವೃತ್ತದಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳ ಅಣಕು ಪ್ರದರ್ಶನ ಮಾಡಲಾಯಿತು.ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡದೇ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಶಾಸಕರ ವಿರುದ್ಧ ಪ್ರತಿಭಟನಾನಿರತರು …

Read More »

ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ

ಕೋಲಾರ: ಸಿಎಂ ಕುಮಾರಸ್ಚಾಮಿ ರಾಜಿನಾಮೆಗೆ ಒತ್ತಾಯಿಸಿ ಕೋಲಾರದಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿನ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ಮಾಡಿ ಧರಣಿ ನಡೆಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಶಾಸಕರು ಈಗಾಗಲೇ ರಾಜೀನಾಮೆ ನೀಡಿ ಪಕ್ಷಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿದ್ದಾರೆ. ಹೀಗಾಗಿ ಸಿಎಂ ಕೂಡಲೇ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Read More »

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಚಿಕ್ಕೋಡಿ: ಸಿಎಂ ಹಾಗೂ ಡಿಸಿಎಂ ಸ್ಥಾನಕ್ಕೇ ರಾಜಿನಾಮೆ ಕೊಟ್ಟು ಪ್ರಜಾತಂತ್ರ ಗೌರವಿಸುವಂತೆ ಆಗ್ರಹಿಸಿ ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿಂದುವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ‌ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

Read More »

ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಗದಗ : ಸಿ ಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪದರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇನ್ನು ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ‌ ಧರಣಿಯಲ್ಲಿ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಿಟ್ಟು ಸರಕಾರ ಉಳಿಸಿಕೊಳ್ಳುವಲ್ಲಿ ಬಡಿದಾಡ್ತಿದೆ. ರಾಜ್ಯದ ಜನತೆಗೆ ಮೈತ್ರಿ ಸರಕಾರ ಅನ್ಯಾಯ ಎಸಗಿದೆ …

Read More »

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾಕಾರ್ಯಕರ್ತೆಯರ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ, ಆಶಾ ಕಾರ್ಯಕರ್ತೆಯರು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರು, ತಮ್ಮ ಕನಿಷ್ಠ ಬೇಡಿಕೆ ಗಳನ್ನ ಈಡೇರಿಸುವಂತೆ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನ ಒತ್ತಾಯಿಸಿದರು.ರಾಜ್ಯದ ಆರೋಗ್ಯ ಇಲಾಖೆಯಡಿಯಲ್ಲಿ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಗರ್ಭಿಣಿ …

Read More »

ಕತ್ತು ಕೊಯ್ದು ಗೃಹಿಣಿಯ ಕೊಲೆ

ಚಾಮರಾಜನಗರ: ಜಿಲ್ಲೆಯಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತದ ಬಳಿ ಕತ್ತು ಕೊಯ್ದು ಗೃಹಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಭರಚುಕ್ಕಿ ಜಲಪಾತ ಬಳಿಯ ಮಯೂರ ಪ್ರವಾಸಿ ಮಂದಿರದ ಕಾವೇರಿ ನದಿ ದಂಡೆ ಮೇಲೆ ಗೃಹಿಣಿಯ ಕೊಲೆ ಮಾಡಲಾಗಿದೆ. ಬಂಡೆ ಮೇಲೆ ಕತ್ತು ಸೀಳಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದರು. ಶವದ ಪಕ್ಕದಲ್ಲಿ ಪುರುಷನ ಪ್ಯಾಂಟ್, ಗೃಹಿಣಿಯ ಚಪ್ಪಲಿ, ಜ್ಯೂಸ್ ಬಾಟಲಿ, ಬಟ್ಟೆಸೋಪು ಮತ್ತು …

Read More »

ಖಾಲಿ ಕೊಡಗಳೊಂದಿಗೆ ಗ್ರಾ.ಪಂ ಮುಂದೆ ಪ್ರತಿಭಟನೆ

ಮಂಡ್ಯ: ಜಿಲ್ಲೆಯ ಮಂಡ್ಯ ಬೂಕನಕೆರೆ ಐಚನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಐಚನಹಳ್ಳಿ ಗ್ರಾಮದ ನೂರಾರು ಮಹಿಳೆಯರು ಕುಡಿಯುವ ನೀರು ಸರಬರಾಜು ಮಾಡಲು ವಿಫಲರಾಗಿರುವ ಅಧ್ಯಕ್ಷ ಮತ್ತು ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡರುಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ಮಹಿಳೆಯರು ಒಂದು ಕಿ.ಮೀ ದೂರದಿಂದ ಬಿಂದಿಗೆಗಳನ್ನು ತಲೆಯ ಮೇಲೆ ಹೊತ್ತುಕೊಂಡು ಭಾರೀ ಸಾಹಸದಿಂದ ಕುಡಿಯಲು ನೀರು ತರುತ್ತಿದ್ದೇವೆ. ಪಿಡಿಓ ರಮೇಶಮೂರ್ತಿ ಮತ್ತು ಅಧ್ಯಕ್ಷ …

Read More »

ಎಸ್.ಡಿ.ಪಿ.ಐ, ಪಿ.ಎಫ್ ಐ ಸಂಘಟನೆ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಎಸ್.ಡಿ.ಪಿ.ಐ ಹಾಗೂ ಪಿ.ಎಫ್ ಐ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿ ಜೆ ಪಿ ಕಾರ್ಯಕರ್ತರು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಡಳಿತ ಭವನದ ಮುಂಭಾಗ ಕೆಲಕಾಲ ಧರಣಿ ನಡೆಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನಪ್ಪ, ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ಸಂಘಟನೆಗಳು ನಮ್ಮ ಪಕ್ಷವನ್ನು ಬಹಳ ಕೀಳು ಮಟ್ಟದಿಂದ ಕಂಡು ಸಮಾಜದಲ್ಲಿ …

Read More »