admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಕೆಲವರು ತಮ್ಮ ನೌಕರಿಯಿಂದ ನಿವೃತ್ತಿಯಾದರೆ ಸಾಕು ಕೈತುಂಭಾ ಪೆನ್ಷೆನ್ ತಗೊಂಡು ಹಾಯಾಗಿ ಕಾಲ ಕಳೆಯಬೇಕು ಅಂತ ಇಚ್ಚೆ ಪಡುತ್ತಾರೆ.ಆದರೆ ಇಲ್ಲಿ ನಾವೊಬ್ಬರು ಬದುಕಿದರೆ ಸಾಲದು. ನಮ್ಮ ಸುತ್ತಮುತ್ತ ಇರುವ ಜನರಿಗೂ ಬದಕು ರೂಪಿಸಿಕೊಡಬೇಕು ಎಂಬ ಸಂಕಲ್ಪದಿಂದ ಉದ್ದಮೆ ಪ್ರಾರಂಭಿಸಿ ಬಡ ಕುಟುಂಬಗಳಿಗೆ ಆಸರೆಯಾಗಿದ್ದಾರೆ ಹಾಗು ತಮ್ಮ ಉದ್ದಿಮೆಯಲ್ಲಿ ಯಶಸ್ಸು ಕಂಡಿದ್ದಾರೆ,ಇಷ್ಷಕ್ಕೂ ಅವರು ಯಾರು,ಎಲ್ಲಿಯವರು ಏನು ಉದ್ದಿಮೆ ಮಾಡಿದ್ದರೆ ಅನ್ನೋದನ್ನ ಈ ವರದಿಯಲ್ಲಿ ನೊಡೋಣಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಲಕ್ಕವ್ವನಹಳ್ಳಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ವಿಶ್ವ ಹಿಂದುಪರಿಷತ್ ಸಂಚಾಲಕ ರುದ್ರೇಶ್ ಮತ್ತು ಕಾರ್ಯಕರ್ತರು ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದರು.ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಳ್ಳಿಯಿಂದ ಆಂದ್ರದ ಹಿಂದುಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತಿದ್ದ 100 ಜಾನುವಾರುಗಳು ಎಮ್ಮೆ ಮತ್ತು ಹಸುಗಳನ್ನು ರಕ್ಷಿಸಲಾಯಿತು.ಸರಿಯಾದ ಮಾಹಿತಿ ನೀಡಲು ವಿಫಲವಾದ ಹಿನ್ನಲೆಯಲ್ಲಿ ಜಾನುವಾರುಗಳನ್ನು ಚಳ್ಳಕೆರೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.ಜಾನುವಾರುಗಳನ್ನು ಗೋಶಾಲೆಗೆ ಒಪ್ಪಿಸಲಾಗಿದ್ದು, ಲಾರಿ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೃಷ್ಣರಾಜಸಾಗರ ಮತ್ತು ಗೊರೂರು ಅಣೆಕಟ್ಟೆಗಳಿಂದ ಒಣಗುತ್ತಿರುವ ಕಬ್ಬಿನ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ ಕೆ.ಆರ್.ಪೇಟೆ ಪಟ್ಟಣದ ಮಿನಿವಿಧಾನಸೌಧಕ್ಕೆ ತಮ್ಮ ಸಾಕು ಪ್ರಾಣಿಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತನಾಯಕರಾದ ನಂದಿನಿಜಯರಾಮ್, ಮುದುಗೆರೆ ರಾಜೇಗೌಡ, ಮರುವನಹಳ್ಳಿ ಶಂಕರ್, ಲಕ್ಷ್ಮೀಪುರ ಜಗಧೀಶ್, ಮುದ್ದುಕುಮಾರ್, ನಾರಾಯಣಸ್ವಾಮಿ, ಬೂಕನಕೆರೆ ನಾಗರಾಜು, ಕರೋಟಿತಮ್ಮಯ್ಯ, ಕಾರಿಗನಹಳ್ಳಿ ಕುಮಾರ್, ಜಿ.ಪಂ ಮಾಜಿಸದಸ್ಯರಾದ ಡಾ.ಎಸ್.ಕೃಷ್ಣಮೂರ್ತಿ, ಎ.ಎಲ್.ಕೆಂಪೂಗೌಡ ಸೇರಿದಂತೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಟಿ ಜೆ ಅಬ್ರಾಹಂ ವಿರುದ್ದ ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ .ಉಡುಪಿ: ಕಳೆದ ವಿಧಾನಸಭಾ ಚುನಾವಣಾ ಸಂಧರ್ಭ ಬೆಂಗಳೂರಿನ ಸಮಾಜಿಕ ಕಾರ್ಯಕರ್ತ ಟಿಜಿ ಅಬ್ರಾಹಂ, ಪ್ರಮೋದ್ ಮಧ್ವರಾಜ್ ವಿರುದ್ದ 193 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಭಂಧಿಸಿ ಪ್ರಮೋದ್ ಮಧ್ವರಾಜ್ ಉಡುಪಿ ನ್ಯಾಯಲಯದಲ್ಲಿ ಟಿಜೆ ಅಬ್ರಾಹಂ ವಿರುದ್ದ ಹತ್ತು ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.ಪ್ರಕರಣಕ್ಕೆ ಸಂಭಂಧಿಸಿದಂತೆ ಇಂದು ವಿಚಾರಣೆ ಪ್ರರಾಂಭವಾಗಿದೆ.ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ನ್ಯಾಯಲಕ್ಕ ಹಾಜರಾಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಮೈತ್ರಿ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ರಾಜೀನಾಮೆ ಸಲ್ಲಿಸಿದರೆ ಸ್ಪೀಕರ್ ಅಂಗೀಕಾರ ಮಾಡಬೇಕಾಗುತ್ತದೆ.ಮುಂದೆ ಗವರ್ನರ್ ಯಾವ ರೀತಿ ಕ್ರಮ ವಹಿಸ್ತಾರೆ ಕಾದು ನೋಡೋಣ ಎಂದು ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಡಿ.ಪಾಳ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ಮಟ್ಟದಲ್ಲಿ ರಾಜೀನಾಮೆ ನನಗೆ ಆಶ್ಚರ್ಯ ಆಗುತ್ತಿದೆ.ರಾಜಕಾರಣದಲ್ಲಿ ಯಾವ ರೀತಿಯ ಪರಿಸ್ಥಿತಿ ಬಂದರೂ ನಾವು ಎದುರಿಸಬೇಕಾಗುತ್ತದೆ ಎಂದರು.ಮತ್ತೊಂದು ಸರ್ಕಾರ ರಚನೆ ಮಾಡೋಕೆ ಆಹ್ವಾನ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಗ್ರಾಮ ಪಂಚಾಯತಿ ಸದಸ್ಯರ ಪತಿರಾಯರ ದರ್ಬಾರ್ ನಿಂದ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸೇರಿದಂತೆ ಇಬ್ಬರು ಸದಸ್ಯರನ್ನು ವಜಾಗೊಳಿಸುವ ಮೂಲಕ ಇಂದು ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಿದ್ದ ಉಪಾಧ್ಯಕ್ಷರ ಚುನಾವಣಾಗೆ ಮೂವರ ಸದಸ್ಯರನ್ನು ವಜಾಗಿಳಿಸಿ ಆದೇಶ ಹೊರಡಿಸಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.ಹೌದು ಕೆಲ ದಿನಗಳ ಹಿಂದೆ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಕಛೇರಿಗೆ ಬೀಗ ಹಾಕಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಧಿಕಾರಿಗಳಿಗೆ ಜೀವ ಬೆದರಿಕೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ದೂಧಗಂಗಾ ನದಿಗಳ ಒಳ ಹರಿವು ಹೆಚ್ಚಳವಾಗಿದೆ. ಕೃಷ್ಣಾ ನದಿಗೆ ಸುಮಾರು ೨೨೦೦೦ ಸಾವಿರ ಕ್ಯೂಸೆಕ್ಸ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೆಳ ಹಂತದ ಬೋಜ- ಕಾರದಗಾ, ಭೋಜವಾಡಿ- ಕಣ್ಣೂರ- ಮಲಿಕವಾಡ ದತವಾಡ ಸೇತುವೆಗಳು ಜಲಾವೃತಗೊಂಡಿವೆ. ೩ ಸೇತುವೆಗಳು ಸಹ ದೂಧಗಂಗಾ ನದಿಗೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಕಳೆದ ಎರಡು ಮೂರು ದಿನಗಳಿಂದ ಕೃಷ್ಣಾ ನದಿಯ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ಎರಡು ಎತ್ತುಗಳು ಮೃತಪಟ್ಟ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ. ಗುಂಡು ಲಾಲಸಿಂಗೆ ಎಂಬುವರಿಗೆ ಸೇರಿದ ಎತ್ತುಗಳು ಇವಾಗಿದ್ದು ನದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಅಥಣಿ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ : ರಮೇಶ ಜಾರಕಿಹೊಳಿ ಕಾಂಗ್ರೆಸ್ ನವರು. ಕಾಂಗ್ರೆಸ್ ನಲ್ಲಿಯೇ ಅವರು ಮುಂದುವರೆಯಲಿದ್ದಾರೆ ಎಂದು ಸಕ್ಕರೆ ಸಚೀವ ಆರ್ ಬಿ ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ನನ್ನ ಒಳ್ಳೆಯ ಸ್ನೇಹಿತ. ಅವರು ಪಕ್ಷ ಬಿಟ್ಟು ಹೋಗುತ್ತಿಲ್ಲ. ಹಾಗೂ ಅವರ ಮನವೊಲಿಸುವ ಅಗತ್ಯವಿಲ್ಲ. ರಮೇಶ ಅವರ ರಾಜೀನಾಮೆ ಅಧಿಕೃತವಲ್ಲ ಎಂದು ಸಭಾಪತಿ ಸ್ಪಷ್ಟಪಡಿಸಿದ್ದಾರೆ ಎಂದರು. ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಿನಾಮೆ ಪರ್ವ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ; ಜಮೀನಿನಲ್ಲಿದ್ದ ಟ್ರಾನ್ಸ್ ಫಾರ್ಮರ್ ವಿದ್ಯುತ್ ಕಂಬ ಬಿದ್ದು ಎತ್ತುಗಳು ತೀವ್ರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ನಡೆದಿದೆ.ಇಂದು ಬೆಳಿಗ್ಗೆ ರೈತ ಈಶಪ್ಪ ಎತ್ತಿನಗಾಡಿ ಸಮೇತ ಬೇಸಾಯಕ್ಕೆ ಹೊರಟ್ಟಿದ್ದ ಇದೇ ಸಮಯದಲ್ಲೆ ಟಿಸಿ ಇದ್ದ ಕಂಬ ಕುಸಿದು ಬಿದ್ದಿದೆ. ಪರಿಣಾಮ ಎತ್ತುಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ರೈತ ಹಾಗೂ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರೆಲ್ಲ ಸೇರಿ ಕಂಬದ ಕೆಳಗೆ ಸಿಲುಕಿದ್ದ ಎತ್ತುಗಳನ್ನು ಹೊರಕ್ಕೆ ತೆಗೆದಿದ್ದು, ಬೆಸ್ಕಾಂ …
Read More »