Breaking News

ಕರ್ನಾಟಕ

ಜಾನುವಾರದೊಂದಿಗೆ ಕಚೇರಿಗೆ ಮುತ್ತಿಗೆ ಹಾಕಿ ವಿಶಿಷ್ಟ ರೀತಿಯ ಪ್ರತಿಭಟನೆ.

ಕೋಲಾರ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರೈತಸಂಘದ ಕಾರ್ಯಕರ್ತರುಕೋಲಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.‌ಜಾನುವಾರುಗಳ ಸಹಿತ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಅಧಿಕಾರಿಗಳು ಕಚೇರಿಯ ಒಳ ಪ್ರವೇಶ ಮಾಡದಂತೆ ಮುಳ್ಳುಗಿಡ ಅಡ್ಡಹಾಕಿ ಕಚೇರಿಗೆ ಪ್ರವೇಶ ನಿರ್ಬಂಧಿಸಿದರು.

Read More »

ನವಭಾರತಕ್ಕೆ ಪೂರಕವಾದ ಬಜೆಟ್

ಮಂಗಳೂರು: ಪ್ರಧಾನಿ ಮೋದಿ ಅವರ ನವ ಭಾರತ ನಿರ್ಮಾಣದ ಆಶಯಕ್ಕೆ ಪೂರಕವಾದ ಐತಿಹಾಸಿಕ ಬಜೆಟ್ ಇದಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಪಾಶ್ಚಾತ್ಯ ಸಂಸ್ಕೃತಿಯ ಸೂಟ್ಕೇಸ್ ಬದಿಗಿರಿಸಿ ಭಾರತೀಯತೆಯಂತೆ ಕೆಂಪು ವಸ್ತ್ರದಲ್ಲಿ ಬಜೆಟ್ ಪ್ರತಿಗಳ ಕಟ್ಟನ್ನು ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರದ ನಮ್ಮ ಪರಂಪರೆಯನ್ನು ಉಳಿಸುವತ್ತ ಹೆಜ್ಜೆಯಿರಿಸುತ್ತಿದೆ ಎಂದರು.ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 30 ಸಾವಿರ ಕಿ.ಮೀ. ರಸ್ತೆ ನಿರ್ಮಾಣ …

Read More »

ಮೆಟ್ಟುಪಾಳ್ಯಂ ರೈಲ್ವೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ : ಮೆಟ್ಟುಪಾಳ್ಯಂ ರೈಲ್ವೆ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕನ್ನಡ ಪರ ಹೋರಾಟಗಾರರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ರೈಲ್ವೆ ನಿಲ್ದಾಣದಲ್ಲಿ ತಮಟೆ ಚಳುವಳಿ ನಡೆಸುವುದರ ಮೂಲಕ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಚಾಮರಾಜನಗರ- ಮೇಟುಪಾಳ್ಯಂ ರೈಲ್ವೆ ಯೋಜನೆಯನ್ನು ನಾಳಿನ ಬಜೆಟ್ನಲ್ಲಿ ಜಾರಿಗೊಳಿಸಬೇಕು. ರಾಜ್ಯದವರೇ ಆದ ರೈಲ್ವೆ ಸಚಿವ ಸುರೇಶ್ ಅಂಗಡಿರವರು, ನಮ್ಮ‌ ಈ ನಿರೀಕ್ಷೆಯನ್ನ ಪೂರೈಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಜೊತೆಗೆ ರೈಲ್ವೆಯ ದಕ್ಷಿಣದ ಕೊನೆಯ …

Read More »

ರಮೇಶ ಜಾರಕಿಹೊಳಿ ರಾಜೀನಾಮೆ ಅಧಿಕೃತವಲ್ಲ

ಚಿಕ್ಕೋಡಿ : ರಮೇಶ ಜಾರಕಿಹೊಳಿ ಕಾಂಗ್ರೆಸ್ ನವರು. ಕಾಂಗ್ರೆಸ್ ನಲ್ಲಿಯೇ ಅವರು ಮುಂದುವರೆಯಲಿದ್ದಾರೆ ಎಂದು ಸಕ್ಕರೆ ಸಚೀವ ಆರ್ ಬಿ ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ನನ್ನ ಒಳ್ಳೆಯ ಸ್ನೇಹಿತ. ‌ಅವರು ಪಕ್ಷ ಬಿಟ್ಟು ಹೋಗುತ್ತಿಲ್ಲ. ಹಾಗೂ ಅವರ ಮನವೊಲಿಸುವ ಅಗತ್ಯವಿಲ್ಲ.‌ ರಮೇಶ ಅವರ ರಾಜೀನಾಮೆ ಅಧಿಕೃತವಲ್ಲ ಎಂದು ಸಭಾಪತಿ ಸ್ಪಷ್ಟಪಡಿಸಿದ್ದಾರೆ ಎಂದರು. ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಿನಾಮೆ ಪರ್ವ …

Read More »

ಟ್ರಾನ್ಸ್ ಫಾರ್ಮರ್ ಬಿದ್ದು ಎತ್ತುಗಳಿಗೆ ಗಾಯ ರೈತ ಬಚಾವ್

ದಾವಣಗೆರೆ; ಜಮೀನಿನಲ್ಲಿದ್ದ ಟ್ರಾನ್ಸ್ ಫಾರ್ಮರ್ ವಿದ್ಯುತ್ ಕಂಬ ಬಿದ್ದು ಎತ್ತುಗಳು ತೀವ್ರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ನಡೆದಿದೆ.ಇಂದು ಬೆಳಿಗ್ಗೆ‌ ರೈತ ಈಶಪ್ಪ ಎತ್ತಿನಗಾಡಿ‌ ಸಮೇತ ಬೇಸಾಯಕ್ಕೆ ಹೊರಟ್ಟಿದ್ದ ಇದೇ ಸಮಯದಲ್ಲೆ ಟಿಸಿ ಇದ್ದ ಕಂಬ ಕುಸಿದು‌ ಬಿದ್ದಿದೆ. ಪರಿಣಾಮ ಎತ್ತುಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ರೈತ ಹಾಗೂ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರೆಲ್ಲ ಸೇರಿ ಕಂಬದ ಕೆಳಗೆ ಸಿಲುಕಿದ್ದ ಎತ್ತುಗಳನ್ನು ಹೊರಕ್ಕೆ ತೆಗೆದಿದ್ದು, ಬೆಸ್ಕಾಂ‌ …

Read More »

ಗ್ರಾ.ಪಂ. ದುರಾಡಳಿತಕ್ಕೆ ಬೇಸತ್ತು ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ.

ಆನೇಕಲ್ :ಗ್ರಾಮ ಪಂಚಾಯಿತಿಯಲ್ಲಿ‌ ನಡೆಯುತ್ತಿರುವ ದುರಾಡಳಿತ ಹಾಗು ಅಕ್ರಮಗಳಿಗೆ ಬೇಸತ್ತು ಗ್ರಾಮಸ್ಥರು ಹಾಗು ಪಂಚಾಯಿತಿ‌ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್‌ ತಾಲ್ಲೂಕಿನ ಕರ್ಪೂರು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಕರ್ಪೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಹಾಗು ಪಿಡಿಓ ಬಸವರಾಜ್ ದುರಾಡಳಿತ ‌ದಿಂದ ಗ್ರಾಮಸ್ಥರು ಹಾಗು ಸದಸ್ಯರು ಬೇಸತ್ತು ಹೋಗಿದ್ದು ಇಂದು ಉಪವಾಸ ಸತ್ಯಾಗ್ರಹ ನಡೆಸಿ‌ ಪಂಚಾಯತಿ ಕಚೇರಿ ಮುಂಬಾಗ ಧರಣಿಯನ್ನು ಹಮ್ಮಿಕೊಂಡಿದ್ದರು. ಇನ್ನು ಇದೆ ಕರ್ಪೂರ …

Read More »

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಒತ್ತಾಯ

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇ ಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ .ಮಂಗಳೂರು ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ .ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ .ಕೆಲವೇ ತಿಂಗಳುಗಳಲ್ಲಿ ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ .ಆ ಬಳಿಕ ಸಂಸತ್ತಿನಲ್ಲಿ ಈ …

Read More »

ಕಾರ್ಕಳ ಮಾಜಿ ಶಾಸಕರ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ.

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಬಸ್ ನಲ್ಲಿಯೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ‌ಇದೀಗ ವೆನ್ಲೋಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Read More »

ಕಾಮುಕ‌ ತಂದೆಯಿಂದ ಮಗಳ ಮೇಲೆ ಅತ್ಯಾಚಾರ. ‌

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ನಡೆದಿದೆ.ತಂದೆಯ ಹೇಯ ಕೃತ್ಯದಿಂದ 5 ವರ್ಷದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದು ಕುಡಿದ ಅಮಲಿನಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಮಾಡಿರುವುದಾಗಿ ತಿಳಿದು ಬಂದಿದೆ. ತಂದೆಯೇ ಅತ್ಯಾಚಾರ ನಡೆಸಿದ್ದಾನೆ ಎಂದು ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣೆಗೆ …

Read More »

ಬಡ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಗೆ ಆಗ್ರಹಿಸಿ ಪ್ರತಿಭಟನೆ.

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಬಡ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ ನಲ್ಲಿ ಉಚಿತ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ಮಾಡಿದರು. ‌ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಮತ್ತು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಯನ್ನು ಕೈಗೊಂಡು ಸರಕಾರದ ಗಮನ ಸೆಳೆದರು.ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗೆ ಮನವಿ ನೀಡುವ ಮೂಲಕ ಕೊನೆಗೊಂಡಿತು.

Read More »