admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಬಸ್ ಮತ್ತು ಟಾಟಾ ಮ್ಯಾಜಿಕ್ ನಡುವೆ ಭೀಕರ ಅಪಘಾತ ನಡೆದು ಟಾಟಾ ಮ್ಯಾಜಿಕ್ ನಲ್ಲಿದ್ದ ಹನ್ನೆರಡು ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಬಾರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಎಸ್ ಕೆ ಎಸ್ ಬಸ್ ಮುರಗಮಲ್ಲ ದಿಂದ ಚಿಂತಾಮಣಿಗೆ ಹೊಗುತ್ತಿದ್ದ ವೇಳೆ ಘಟನೆ ನಡೆದಿದ್ದು,ಅಪಘಾತದಲ್ಲಿ ಹನ್ನೆರಡು ಜನರ ದಾರುಣ ಸಾವನ್ನಪ್ಪಿದ್ದಾರೆ. ಎಂಟು ಜನ ಗಂಡಸರು ಹಾಗೂ ನಾಲ್ಕು ಜನ ಹೆಂಗಸರು ಸೇರಿದಂತೆ ಹನ್ನೆರಡು ಜನ ಮಾರಣಹೋಮ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಜಿಲ್ಲೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿಂದು ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಆರೋಗ್ಯ, ಆಶಾ ಕಾರ್ಯಕರ್ತೆಯರಿಗೆ ಮಲೇರಿಯ ರೋಗ ನಿಯಂತ್ರಣದ ಬಗ್ಗೆ ಮಾಹಿತಿ ಹಾಗೂ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಮಾತನಾಡಿ ಅನಾಫಿಲೀಸ್ ಎಂಬ ಸೊಳ್ಳೆಯು ಕಚ್ಚುವುದರಿಂದ ಮಲೇರಿಯಾ ರೋಗವು ಹರಡುತ್ತದೆ. ತಾಲ್ಲೂಕನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಸಹಾಯಕ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ: ಈ ಬಾರಿಯ ಅಧಿವೇಶನ ಪ್ರಾರಂಭವಾಗುವದರೊಳಗೆ ಸಮ್ಮಿಶ್ರ ಸರಕಾರ ಪತವಾಗುವದು ನಿಶ್ಚಿತ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದರು. ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಸಮ್ಮಿಶ್ರ ಸರ್ಕಾರದ ವೈಫಲ್ಯದ ವಿರುದ್ಧ ಶಾಸಕರು ಭುಗಿಲೆದ್ದಿದ್ದಾರೆ. ಹೀಗಾಗಿ ಜೆಡಿಎಸ್-ಕಾಂಗ್ರೆಸ್ ಶಾಸಕರೇ ಸಮ್ಮಿಶ್ರ ಸರ್ಕಾರ ಪತನ ಆಗತ್ತೆ ಎಂದು ಹೇಳುತ್ತಿದ್ದಾರೆ. ಅಧಿವೇಶನದೊಳಗೆ ಸರ್ಕಾರದ ಪತನ ಆಗೋದು ನಿಶ್ಚಿತ ಎಂದರು. ಆನಂದ್ ಸಿಂಗ್ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿ, ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಆನಂದ್ ಸಿಂಗ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಬಾಗಲೂರು: ಬೈಕ ನಲ್ಲಿ ಬಂದು ಸಾರ್ವಜನಿಕರ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡುತ್ತಿದ್ದ ಕಳ್ಳರ ತಂಡವೊಂದನ್ನು ಹಿಡಿಯುವಲ್ಲಿ ಬಾಗಲೂರು ಪೋಲೀಸರು ಯಶಸ್ವಿಯಾಗಿದ್ದಾರೆ.ಸಾಯಿಕೃಷ್ಣ, ರಾಜಶೇಖರ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು.ಜನರಿಗೆ ಚಳ್ಳೆ ಹಣ್ಣು ತಿನಿಸುವ ಕಳ್ಳರಿಗೆ ಪೋಲೀಸರೇ ಚಳ್ಳೆ ಹಣ್ಣು ತಿನಿಸಿದ್ದಾರೆ.ನಿತ್ಯ ಬೈಕ್ ನಲ್ಲಿ ಸಂಚರಿಸುತ್ತಾ ಕಳ್ಳತನದಲ್ಲಿ ತೊಡಗಿದ್ದು, ಸಮಯ ಸಾಧಿಸಿ ಮೊಬೈಲ್ ಗಳನ್ನು ಸುಲಿಗೆ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಪೋಲೀಸರುಬಂಧಿತರಿಂದ ಆರು ಆ್ಯಂಡ್ರಾಯ್ಡ ಮೊಬೈಲ್ ಫೋನ್ ಗಳನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಪ್ರಕೃತಿಯ ಜೊತೆಯಲ್ಲಿ ಅವಿನಾಭಾವ ಸಂಬಂಧ ಹೊಂದಿರುವ ಮಾನವರಾದ ನಾವು ಪರಿಸರದ ಮೇಲೆ ದೌರ್ಜನ್ಯ ನಡೆಸಿ ಮರಗಿಡಗಳನ್ನು ಕಡಿದು ಕಾಡನ್ನು ನಾಶಮಾಡುತ್ತಿದ್ದೇವೆ. ಗಿಡಗಳನ್ನು ಮಕ್ಕಳಂತೆ ಬೆಳೆಸಿ ಕಾಪಾಡೋಣ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ನಿರ್ದೇಶಕ ಗಂಗಾಧರ ರೈ ಕರೆ ನೀಡಿದರು.ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಳ್ಳಲಾದ ಪರಿಸರ ಜಾಗೃತಿ ಜಾಥಾ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ದಂಡಿಗಾನಹಳ್ಳಿ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿವೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ದಂಡಿಗಾನಹಳ್ಳಿಯ ಜಲಾಶಯದಲ್ಲಿ ನಿನ್ನೆ ಸಂಜೆ ಈಜಾಡಲು ಹೋಗಿ ಐವರಲ್ಲಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿಅಗ್ನಿಶಾಮಕದಳದ ಸಿಬ್ಬಂದಿ ಸತತವಾಗಿ ಬೆಳಿಗ್ಗೆಯಿಂದ ಶವಗಳಿಗಾಗಿ ಶೋಧ ನಡೆಸಿದ್ದರು. ಕೊನೆಗೂ ಕಾರ್ಯಾಚರಣೆ ಮಾಡಿ ಶವವನ್ನು ಹೊರತೆಗೆದಿದ್ದಾರೆ.ಬೆಂಗಳೂರು ಮೂಲದ ಸತೀಶ ಶಿವಕುಮಾರ್ (23), ಕೇರಳ ಮೂಲದ ಅಭಿಲಾಶ(23) ಎಂಬ ವಿದ್ಯಾರ್ಥಿಗಳ ಶವಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಚೇನಹಳ್ಳಿ ಪೊಲೀಸ್ ಠಾಣಾ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಕಾಲೇಜು ಪ್ರಾಂಶುಪಾಲರ ಮತ್ತು ಶಿಕ್ಷಕರ ವಿರುದ್ದ ಸುಳ್ಳು ಆಪಾದನೆ ಹೊರಿಸಿ ಅವಮಾನಿಸಿದ್ದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಕಾಲೇಜು ಪ್ರಾಂಶುಪಾಲರ ಮತ್ತು ಶಿಕ್ಷಕರ ವಿರುದ್ದ ಸುಳ್ಳು ಆಪಾದನೆ ಹೋರಿಸಿ ಅವಮಾನಿಸಿದ್ದನ್ನು ಖಂಡಿಸಿ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ಆಪಾದನೆ ಹೊರಸಿದ್ದ ನದಿ ಇಂಗಳಗಾಂವ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ; ಆಹಾರಕ್ಕಾಗಿ ಗ್ರಾಮದೊಳಗೆ ನುಗ್ಗಿದ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದ್ದು ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ.ಆಹಾರಕ್ಕಾಗಿ ಗ್ರಾಮದೊಳಗೆ ಚಿರತೆ ನುಗ್ಗಿದ್ದು, ಮನೆಯೊಂದರಲ್ಲಿ ಅವಿತು ಕುಳಿತಿದೆ. ಈ ವೇಳೆ ಮನೆಯಿಂದ ತಪ್ಪಿಸಿಕೊಂಡು ಹೋಗುವಾಗ ಮೂವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿಮೂವರು ಗಾಯಗೊಂಡಿದ್ದು ಗಾಯಗೊಂಡವರನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇದೀಗ ಚಿರತೆ ಪೊದೆಯೊಳಗೆ ಅವಿತು ಕುಳಿತಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಹರಿಹರ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸರ್ಕಾರದ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳಿಗೆ ಹಾಗೂ ರೈತರಿಗೆ ತಲುಪಿಸುವ ಕೆಲಸವನ್ನು ಕೃಷಿ, ತೋಟಗಾರಿಕೆ, ಎಪಿಎಂಸಿ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಸಮಾಜದ ಅಧ್ಯಕ್ಷ ಜಾನಕೀರಾಂ ಸೂಚನೆ ನೀಡಿದರು.ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆಯಲ್ಲಿ ಇಂದು ನಡೆದ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಸೇರಿದಂತೆ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಸೌಲಭ್ಯಗಳನ್ನು ರೈತರು …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಮೈತ್ರಿ ಸರ್ಕಾರದ ಇಬ್ಬರು ಶಾಸಕರು ರಾಜಿನಾಮೇ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಡಾ.ಎಂ.ಬಿ.ಪಾಟೀಲ ಅವರು ಜಿಲ್ಲೆಯ ಕಾಂಗ್ರೇಸ್‍ನ ಎಲ್ಲ ಶಾಸಕರು ಮತ್ತು ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದರು.ಆದರೆ ಸಭೆಯ ಬಳಿಕ ಹೊರ ಬಂದ ನಾಯಕರ ಮುಖವೂ ಸಹ ಗಂಭೀರತೆಯಿಂದ ಕೂಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಡಾ.ಎಂ.ಬಿ.ಪಾಟೀಲ ಅವರು ನಗರದ ಸಕ್ರ್ಯೂಟ್‍ಹೌಸ್‍ನಲ್ಲಿ ಜಿಲ್ಲೆಯ ಕಾಂಗ್ರೇಸ್‍ನ ಎಲ್ಲ ಶಾಸಕರು ಮತ್ತು ನಾಯಕರೊಂದಿಗೆ ಗೌಪ್ಯ …
Read More »