Breaking News

ಕರ್ನಾಟಕ

ಎಸ್​ಪಿ ವರ್ಗಾವಣೆ; ಚುನಾವಣಾ ಆಯೋಗ ಆದೇಶ..

ಹಾಸನ ಪೊಲೀಸ್ ಅಧೀಕ್ಷಕ(ಎಸ್​ಪಿ) ಎ.ಎನ್. ಪ್ರಕಾಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಗುರುವಾರ ಆದೇಶ ಹೊರಡಿಸಿದೆ. ಪ್ರಕಾಶ್ ಗೌಡ ಸ್ಥಾನಕ್ಕೆ ನೂತನವಾಗಿ ಚೇತನ್ ಸಿಂಗ್ ರಾಥೋರ್ ಅವರನ್ನು ನೇಮಕ ಮಾಡಿದೆ.ಕರ್ನಾಟಕ ರಾಜ್ಯ ಚುನಾವಣಾಧಿಕಾರಿಗಳ ಶಿಫಾರಸಿನ ಮೇರೆಗೆ ಭಾರತೀಯ ಚುನಾವಣಾ ಆಯೋಗವು ವರ್ಗಾವಣೆಯನ್ನು ಅನುಮೋದಿಸಿತು.ಕಳೆದ ವಾರ, ಚುನಾವಣಾ ಆಯೋಗವು ಹಾಸನ ಉಪ ಕಮೀಷನರ್ ಅಕ್ರಮ್ ಪಾಶಾವನ್ನು ವರ್ಗಾಯಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಆ ಜಾಗಕ್ಕೆ ಪೋಸ್ಟ್ ಮಾಡಿತ್ತು.ಅದಕ್ಕೂ …

Read More »

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ..?

ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು …

Read More »

ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ..

ಬೆಂಗಳೂರು: ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಏಪ್ರಿಲ್​ 4 ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ರಾಜ್ಯದ ಸುಮಾರು 2 ಸಾವಿರದ 800ಕ್ಕೂ ಅಧಿಕ ಪರೀಕ್ಷಾ ಕೇಂದ್ರದಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 9.30ರಿಂದ ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನವಾದ ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದೆ.ಮೊಬೈಲ್, ಸ್ಮಾರ್ಟ್‍ಪೋನ್, ಸ್ಮಾರ್ಟ್ ವಾಚ್‍ಗಳನ್ನು …

Read More »

ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಸುಮಲತಾ ಘೋಷಣೆ

ಬೆಂಗಳೂರು, ಮಾರ್ಚ್ 18: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಸಿನಿಮಾ ನಟರಾದ ದರ್ಶನ, ಯಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಉಪಸ್ಥಿತರಿದ್ದರು.ವಿಶ್ಲೇಷಣೆ : ಮಂಡ್ಯದಲ್ಲಿ ಮೈತ್ರಿಕೂಟದ ಆಟ ನಡೆಯೋದು ಬಲು ಕಷ್ಟ!ಇದೇ 20ರಂದು 10 ಗಂಟೆಗೆ ಮಂಡ್ಯಕ್ಕೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ …

Read More »

ರೈತರ ಹೆಸರಲ್ಲಿ ರಾಜಕೀಯ ಬಿಟ್ಟು ಅವರ ಕಷ್ಟಗಳಿಗೆ ಸ್ಪಂದಿಸಿ: ಸಿಎಂ ಕುಮಾರಸ್ವಾಮಿಗೆ ಸುಮಲತಾ ತಿರುಗೇಟು

ಬೆಂಗಳೂರು: ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಮೊದಲು ಬಿಡಿ. ಬಾಯಿ ಮಾತಿನಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಹೋಗುವುದು ಅನ್ನದಾತನಿಗೆ ಮಾಡಿದ ಅನ್ಯಾಯ. ಭರವಸೆಯ ಮಾತುಗಳನ್ನು ಬಿಟ್ಟು ಪ್ರಾಮಾಣಿಕವಾಗಿ ರೈತರ ಕಷ್ಟಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವರಿಗೆ ಸುಮಲತಾ ತಿರುಗೇಟು ನೀಡಿದ್ದಾರೆ.ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ಅವರು, ರೈತರು ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನಕ್ಕಿಂತ ಬರೀ ಮಾತನಾಡುವುದು ಅನ್ಯಾಯ. ಅದು ರೈತಾಪಿ ವರ್ಗಕ್ಕೆ ಮಾಡಿದ ಮೋಸ …

Read More »

ದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿ ಎಸ್ ಬಿ

ತುಮಕೂರು, ಮಾರ್ಚ್ 15: “ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಗೆ ನಾನೂ ಆಕಾಂಕ್ಷಿ. ದೇವೇಗೌಡರಲ್ಲ ಯಾರಾದರೂ ಸ್ಪರ್ಧೆ ಮಾಡಲಿ, ಹೆದರುವ ಪ್ರಶ್ನೆಯೇ ಇಲ್ಲ. ನಾವೇನೂ ಸೀರೆ ಉಟ್ಟುಕೊಂಡು ಕೂತಿಲ್ಲ. ನಮಗೂ ಕಾರ್ಯಕರ್ತರ ಬೆಂಬಲ ಇದೆ” ಎಂದು ತುಸು ಖಾರವಾಗಿಯೇ ಉತ್ತರ ನೀಡಿದರು ಮಾಜಿ ಸಂಸದರಾದ ಜಿ.ಎಸ್.ಬಸವರಾಜ್.ಈ ಸಲ ತುಮಕೂರಿನಿಂದ ಜೆಡಿಎಸ್ ಗೆ ದೇವೇಗೌಡರು ಅಭ್ಯರ್ಥಿಯಾದರೆ ಎಪ್ಪತ್ತೇಳು ವರ್ಷದ ಬಸವರಾಜ್ ತಾವು ಬಿಜೆಪಿಯಿಂದ ಸ್ಪರ್ಧಿಸುವುದಿಲ್ಲ ಎಂದಿರುವುದಾಗಿ ವದಂತಿ ಹರಿದಾಡುತ್ತಿದೆ. ಈ …

Read More »

ಸುಮಲತಾ ಬೆಂಬಲಕ್ಕೆ ನಿಂತ ಬಿಜೆಪಿ: ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಹಾಕದಿರಲು ನಿರ್ಧಾರ..

ಬೆಂಗಳೂರು: ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದೇ ಭಾವಿಸಲಾಗಿತ್ತು, ಆದರೆ ಮೈತ್ರಿ ಸರ್ಕಾರದ ಧರ್ಮದಂತೆ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.ಹೀಗಾಗಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ನಟಿ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಲು ನಿರ್ಧರಿಸಿರುವ ಕೇಂದ್ರ ಬಿಜೆಪಿ ನಾಯಕರು ಅಭ್ಯರ್ಥಿಯನ್ನು ಹಾಕದರಿಲು ನಿರ್ಧರಿಸಿದ್ದಾರೆ.ಮಂಡ್ಯ ಲೋಕಸಕ್ಷೇ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರ ಸ್ವಾಮಿ ಪುತ್ರ ನಿಖಿಲ್ …

Read More »

ಬಿಜೆಪಿಯದ್ದು ಸುಳ್ಳು ಪೊಳ್ಳು ಜೊಳ್ಳು ಭರವಸೆ: ಕಾಂಗ್ರೆಸ್ ನಿಂದ ಕಿರುಹೊತ್ತಿಗೆ ಬಿಡುಗಡೆ..

ಬೆಂಗಳೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಮಾಡಿರುವ ಸಾಧನೆಗಳು ಏನೂ ಇಲ್ಲದಿರುವಾಗ ಬಿಜೆಪಿ ಭಾವನಾತ್ಮಕ ಹೇಳಿಕೆಗಳ ಮೂಲಕ ಮತ ಯಾಚಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ `ಸುಳ್ಳು, ಪೊಳ್ಳು, ಜೊಳ್ಳು’ ಎಂಬ ಘೋಷಣೆಯಡಿಯಲ್ಲಿ ಕಾಂಗ್ರೆಸ್ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಯೋಜನೆ ದುರ್ಬಳಕೆ ಮಾಡುವ ಪ್ರಯತ್ನ ಮಾಡಿತ್ತು. ಭೂ ಸ್ವಾಧೀನ ಕಾಯ್ದೆ ಸಡಿಲ ಮಾಡುವ …

Read More »

ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ: ಶರದ್ ಪವಾರ್

2019 : ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ: ಶರದ್ ಪವಾರ್ಮುಂಬೈ, ಮಾರ್ಚ್ 13: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು. ಆದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ನಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖಂಡ ಶರದ್ ಪವಾರ್ ಹೇಳಿದ್ದಾರೆ.ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ 78 ವರ್ಷ ವಯಸ್ಸಿನ ಪವಾರ್, ‘ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದಾದರೂ ಅದಕ್ಕೆ ಇನ್ನಿತರ ಪಕ್ಷಗಳು ಬೆಂಬಲ ನೀಡುವುದಿಲ್ಲ. ಆ ಕಾರಣ ಬಹುಮತ …

Read More »

KSRTC ಬಸ್​, ಓಮಿನಿ ಕಾರ್ ​ಡಿಕ್ಕಿ: ಮೂವರ ದುರ್ಮರಣ

ಹಾಸನ: ಕೆಎಸ್ಆರ್​ಟಿಸಿ ಬಸ್​ ಮತ್ತು ಓಮಿನಿ ಕಾರಿನ ​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಸೀಕೆರೆ ತಾಲೂಕಿನ ಲಕ್ಷೀದೇವರಹಳ್ಳಿಯಲ್ಲಿ ನಿನ್ನೆ ತಡರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ. ಮುಜೀಬಾ(53) ಪುತ್ರ ಮಹಮದ್ ಸಾಧಿಖ್(22) ಹಾಗೂ ಮಗಳು ಮುಸ್ಕಾನ್(19) ಮೃತ ದುರ್ದೈವಿಗಳು. ಗಾಯಾಳುಗಳನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ …

Read More »