ಮಂಡ್ಯ: ಸುಮಲತಾ ಅಂಬರೀಶ್ಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡಲು ಸಾಧ್ಯವಿಲ್ಲ ಅಂತ ನಾನು ಮೊದಲೇ ಹೇಳಿದ್ದೇನೆ. ಯಾವ ಕಾಂಗ್ರೆಸ್ ನಾಯಕರೂ ಸುಮಲತಾ ಹಿಂದೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲಾ ನಾಯಕರ ಸಭೆ ಕರೆದಿರುವುದು ನನಗೆ ಗೊತ್ತಿಲ್ಲ. ಜೆಡಿಎಸ್ಗೆ ಹಂಚಿಕೆಯಾಗುವ ಕ್ಷೇತ್ರದಲ್ಲಿ ಇಂತವರನ್ನೇ ಅಭ್ಯರ್ಥಿ ಹಾಕಿ ಅಂತಾ ನಾವು ಹೇಳಲು ಸಾಧ್ಯವಿಲ್ಲ. ಹಾಗೆಯೇ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಜೆಡಿಎಸ್ ನವರು ನಮಗೆ …
Read More »ಸಿಇಟಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 23, 24 ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನ ಏಪ್ರಿಲ್ 29, 30ಕ್ಕೆ ಮುಂದೂಡಲಾಗಿದೆ. ಏಪ್ರಿಲ್ 23ಕ್ಕೆ ಮತದಾನ ಇರೋದ್ರಿಂದ ಪರೀಕ್ಷೆಗಳನ್ನ ಮುಂದೂಡಲಾಗಿದೆ ಅಂತಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.#CET #Exam #Karnataka #Postponed #Election
Read More »ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಎರಡು ಹಂತದ ಮತದಾನ, ಎಲ್ಲಿ ಯಾವಾಗ.?
ಬೆಂಗಳೂರು: 2019 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕೇಂದ್ರ ಚುನಾವಣಾ ಆಯೋಗ, ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಹುನಿರೀಕ್ಷಿತ ಚುನಾವಣೆಯ ಫಲಿತಾಂಶ ಮೇ 23ರಂದು ಹೊರ ಬೀಳಲಿದೆ.ರಾಜ್ಯದ 28 ಲೋಕಸಭಾ ಸ್ಥಾನಗಳ ಚುನಾವಣೆಗೆ ಎರಡನೇ ಹಂತದಲ್ಲಿ (ರಾಜ್ಯದಲ್ಲಿ ಮೊದಲ ಹಂತ) ಏಪ್ರಿಲ್ 18ರಂದು ದಕ್ಷಿಣ ಕರ್ನಾಟಕ ಭಾಗದ …
Read More »ಕಾಂಗ್ರೆಸ್ ಚುನಾವಣಾ ರಣಕಹಳೆ: ಇಂದು ಹಾವೇರಿಗೆ ರಾಹುಲ್ ಗಾಂಧಿ..
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ಇದಕ್ಕೆ ಮುನ್ನುಡಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಹಾವೇರಿಗೆ ಆಗಮಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಜನ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ …
Read More »ಲೋಕಸಭೆ ಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ. ಮಾರ್ಚ್ 13ರಂದು ದೆಹಲಿಗೆ ತೆರಳಲಿರುವ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 16 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ. ಉಳಿದಂತೆ ಹಾಲಿ ಸಂಸದರ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ನೀಡುವಂತೆಯೂ ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿ ಶಿಫಾರಸ್ಸು ಮಾಡಿದೆ …
Read More »ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಬದ್ಧ..
ಬೆಂಗಳೂರು : ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ರೇಷ್ಮೆ ಬೆಳೆಗಾರರ ಸಮಸ್ಯೆಗಳ ಕುರಿತು ಕರೆದಿದ್ದ ಸಭೆಯಲ್ಲಿ ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೈತರ ಸಮಿತಿ ರಚಿಸುವುದಾಗಿ ತಿಳಿಸಿದರು.ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಚೀನಾ ಮಾದರಿಯಲ್ಲಿ, ರಾಜ್ಯದಲ್ಲಿ ರೇಷ್ಮೆ …
Read More »ಬೆಂಗಳೂರು-ಮೈಸೂರು ನಡುವಿನ ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೌಲಭ್ಯ
ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿನಲ್ಲಿ ಉಚಿತ ವೈ-ಫೈ ಸೌಲಭ್ಯ ಕಲ್ಪಿಸಲಾಗಿದ್ದು, ಇನ್ನು ಮುಂದೆ ಮೈಸೂರು-ಬೆಂಗಳೂರು ಮಾರ್ಗದ ಎಲ್ಲಾ 17 ರೈಲು ನಿಲ್ದಾಣಗಳಲ್ಲೂ ಉಚಿತ ವೈ-ಫೈ ಸೌಲಭ್ಯ ದೊರೆಯಲಿದೆ ಎಂದು ರೈಲ್ವೆ ವಿಭಾಗೀಯ ವ್ಯವಸ್ಥಾಪಕರು ತಿಳಿಸಿದ್ದಾರೆ.ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಬರುವ ಬೆಂಗಳೂರು ನಗರ ನಿಲ್ದಾಣ, ಕೆಂಗೇರಿ,ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ನಾಯಂಡಹಳ್ಳಿ, ಹೆಜ್ಜಾಲ,ಶೆಟ್ಟಿಹಳ್ಳಿ, ಹನಕೆರೆ, ಯಲಿಯೂರು, ಬ್ಯಾಡರಹಳ್ಳಿ,ಪಾಂಡವಪುರ, ನಾಗನಹಳ್ಳಿ ಸೇರಿ ಈ ಮಾರ್ಗದ ಎಲ್ಲಾ 17 ನಿಲ್ದಾಣಗಳಲ್ಲೂ …
Read More »ಕಲಬುರಗಿಯಲ್ಲಿಂದು ಪ್ರಧಾನಿ ಮೋದಿ ಮೆಗಾ ರ್ಯಾಲಿ
ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಪಣ ತೊಟ್ಟಿರುವ ಬಿಜೆಪಿ ಕಲಬುರಗಿಯಲ್ಲಿಂದು ಮೆಗಾ ರ್ಯಾಲಿ ಆಯೋಜಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮೆಗಾ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.ಈ ಹಿಂದೆ ಗಂಡು ಮೆಟ್ಟಿದ ನಾಡಿನಲ್ಲಿ ಬೃಹತ್ ರ್ಯಾಲಿಯಲ್ಲಿ ಮೂಲಕ ಚುನಾವಣೆ ಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಮಾತನಾಡಿ, “ಈ ಭೂಮಿ, ತ್ಯಾಗ, ಸಾಹಸ, ಶೌರ್ಯ, ಇತಿಹಾಸ, ಸಂಸ್ಕೃತಿಗೆ ಹೆಸರು. ನನಗೆ ಈ ಪುಣ್ಯ, …
Read More »ಸೀಟಿಗಾಗಿ ದೋಸ್ತಿ ಕುಸ್ತಿ’ಕೈ ಬಗ್ಗಿಸುತ್ತಾ ‘ತೆನೆ?
ಬೆಂಗಳೂರು: ಲೋಕಸಭಾ ಚುನಾವಣೆಗೆ ದೋಸ್ತಿಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಶರಣಾಗದಿರಲು ತೀರ್ಮಾನಿಸಿದೆ. ಕಾಂಗ್ರೆಸ್, ಜೆಡಿಎಸ್ ಕೇಳಿರುವ 12 ಕ್ಷೇತ್ರಗಳನ್ನ ಬಿಟ್ಟುಕೊಡದಿರಲು ನಿರ್ಧರಿಸಿದೆ. ರಾಜ್ಯದಲ್ಲಿನ 28 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳನ್ನ ಜೆಡಿಎಸ್ಗೆ ಬಿಟ್ಟುಕೊಡುವುದು ಬೇಡವೆಂಬ ಅಭಿಪ್ರಾಯದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಸೀಟು ಹಂಚಿಕೆಯಲ್ಲಿ ಜೆಡಿಎಸ್ಗೆ ಶರಣಾಗದಿರಲು ಪಕ್ಷದೊಳಗೆ ಒತ್ತಡ ಹೆಚ್ಚಾಗಿದೆ ಎನ್ನಲಾಗುತ್ತಿದೆ.ನಮ್ಮ ಗುರಿ ಇರುವುದು ಬಿಜೆಪಿಯನ್ನ ಹೆಚ್ಚು ಸೀಟುಗಳ ಅಂತರದಿಂದ ಸೋಲಿಸುವುದು. ಹೀಗಿರುವಾಗ …
Read More »ಬಂಡೀಪುರದ 11 ಸಾವಿರ ಎಕರೆ ಅರಣ್ಯ ದಹಿಸಿದ್ದು ಆನೆ ಲದ್ದಿ..?
ಚಾಮರಾಜನಗರ: ಬಂಡೀಪುರ ಅಗ್ನಿದುರಂತದಿಂದ ಸಹಜವಾಗೇ ಜನರು ಬೆಚ್ಚಿಬಿದ್ದಿದ್ದಾರೆ. ಅರಣ್ಯದಲ್ಲಿದ್ದ ಪ್ರಾಣಿಗಳು ಬದುಕಿದ್ರೆ ಸಾಕು ಅಂತಾ ಎತ್ತೆಂದರತ್ತ ದಿಕ್ಕೆಟ್ಟು ಓಡಾಡ್ತಿವೆ. ಈ ಮಧ್ಯೆ ಕಾಡ್ಗಿಚ್ಚಿಗೆ ಕಾರಣವೇನು ಅಂತಾ ಜನರ ಮನಸಲ್ಲಿ ಪ್ರಶ್ನೆ ಮಾಡಿದೆ. ಮೂಲಗಳ ಪ್ರಕಾರ, ಅರಣ್ಯ ಇಲಾಖೆ ಹಾಗೂ ಸ್ಥಳೀಯರ ನಡುವೆ ಹಲವು ವಿಚಾರಗಳ ಕುರಿತು ಸಂಘರ್ಷ ನಡೆಯುತ್ತಿದೆ. ಒಣಗಿದ ಆನೆಯ ಲದ್ದಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂಬ ಶಂಕೆಗಳು ವ್ಯಕ್ತವಾಗುತ್ತಿವೆ. ಒಣಗಿದ ಆನೆಯ ಲದ್ದಿಗೆ ಬೆಂಕಿ ಕೊಟ್ಟರೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





