Shaikh BIG TV NEWS, Hubballi
November 15, 2018
ಕರ್ನಾಟಕ, ಸುದ್ದಿ
ಸಾಗರ: ಸಾಗರ ತಾಳಗುಪ್ಪ ಮಧ್ಯೆ ಮುಂಡಿಗೆಹಳ್ಳಿಯ ಬಳಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ಧಾರುಣ ಘಟನೆ ಸಂಭವಿಸಿದೆ.ಸಾಗರದಿಂದ ಕಾರ್ಗಲ್ ಕಡೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಇಂಡಿಯನ್ ಗ್ಯಾಸ್ ಸಂಸ್ಥೆಗೆ ಸೇರಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದ್ದು, ರಭಸಕ್ಕೆ 20ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ಅವಘಡದಲ್ಲಿ ಚಾಲಕ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.ಮುಂಜಾನೆ ನಾಲ್ಕೂವರೆ ಗಂಟೆ ವೇಳೆ ಈ ಘಟನೆ …
Read More »
Shaikh BIG TV NEWS, Hubballi
November 14, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಒಂದನೇ ಎಸಿಎಂಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ನ್ಯಾಯಾಧಿಶ ಜಗದೀಶ್ ವಿಚಾರಣೆ ನಡೆಸಿ ಆದೇಶ ಹೊರಡಿಸಲಿದ್ದಾರೆ. ನಿನ್ನೆ ಜನಾರ್ದನ ರೆಡ್ಡಿ ಪರ ವಾದ ಆಲಿಸಿರುವ ನ್ಯಾಯಾಧೀಶರು ಆದೇಶವನ್ನ ಇಂದಿಗೆ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿಗೆ ಬೇಲಾ ಅಥವಾ ಜೈಲಾ ಅನ್ನೋದರ ನಿರ್ಧಾರವಾಗಲಿದೆ. ಸದ್ಯ ಜನಾರ್ದನ ರೆಡ್ಡಿ …
Read More »
Shaikh BIG TV NEWS, Hubballi
November 14, 2018
ಕರ್ನಾಟಕ, ಸುದ್ದಿ
ಬೆಂಗಳೂರು : ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ಬಹುತೇಕ ಸಂದರ್ಭದಲ್ಲಿ ರೈತರಿಗಿಂತ ದುಸ್ತರವಾಗಿದೆ. ಹಲವಾರು ಕುಟುಂಬಗಳ ಸದಸ್ಯರು ಆತ್ಮಹತ್ಯೆಯಂತಹ ಕ್ರಮಕ್ಕೂ ಮುಂದಾಗಿದ್ದಾರೆ. ಇದೀಗ ನೇಕಾರರ ಬವಣೆಗಳನ್ನು ನಿವಾರಿಸಲು ಸರ್ಕಾರ ಮುಂದಾಗಿದೆ.ರಾಜ್ಯ ನೇಕಾರರ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಜರುಗಿತು.ನೇಕಾರರ ಅಭಿವೃದ್ಧಿಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಯೋಜನೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸಂಬಂಧಿಸಿದ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಶೀಘ್ರವೇ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಮತ್ತು ನೇಕಾರರ …
Read More »
Shaikh BIG TV NEWS, Hubballi
November 13, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರಕ್ಕೆ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ನಿಗದಿಯಂತೆ ಇಂದು ಮಧ್ಯಾಹ್ನ ಅನಂತ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎನ್ನಲಾಗಿತ್ತು. ಆದರೆ 2.50 ರಿಂದ 4.20 ವರೆಗೆ ರಾಹುಕಾಲ ಇದೆ. ಈ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಅಂದ್ರೆ ರಾಹುಕಾಲ ಮುಗಿದ ಬಳಿಕ ಅನಂತ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.ರಾಹುಕಾಲ ಮುಗಿದ ಬಳಿಕ ಚಾಮರಾಜಪೇಟೆಯ ಟಿಆರ್ ಮಿಲ್ನ ಚಿತಾಗಾರದಲ್ಲಿ ಅಂತ್ಯ …
Read More »
Shaikh BIG TV NEWS, Hubballi
November 12, 2018
ಕರ್ನಾಟಕ, ಸುದ್ದಿ
ಬೆಂಗಳೂರು:ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿರುವ ಹಿನ್ನೆಲೆ ಇಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ಮಾಹಿತಿ ನೀಡಿದ್ದಾರೆ. ಇನ್ನು, ಸರ್ಕಾರಿ ಕಚೇರಿಗಳಿಗೂ ಇಂದು ರಜೆ ಘೋಷಣೆ ಮಾಡಲಾಗಿದೆ.
Read More »
Shaikh BIG TV NEWS, Hubballi
November 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಸಂಸದೀಯ ವ್ಯವಹಾರಗಳು ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ರಾಜ್ಯದಲ್ಲಿ ಬಿಜೆಪಿಯನ್ನು ಬಲಾಢ್ಯಗೊಳಿಸಿ ಕೇಂದ್ರದಲ್ಲಿ ಮೂರು ಬಾರಿ ಸಚಿವರಾದವರು. ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಜತೆಗೂಡಿ ರಾಜ್ಯದಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಅಡಿಗಲ್ಲು ಹಾಕಿದವರು.ಬಿಜೆಪಿ ರಾಜ್ಯ ನಾಯಕರೊಂದಿಗೆ ಅನ್ಯೋನ್ಯವಾಗಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ ಅನಂತ್ಕುಮಾರ್ ರಾಜಕೀಯವಾಗಿ ಅತ್ಯಂತ ಸಕ್ರಿಯರಾಗಿದ್ದರು. ಇತ್ತೀಚೆಗೆ ಗುಪ್ತಮಾರಿಯಂತೆ ಎರಗಿದ್ದ …
Read More »
Shaikh BIG TV NEWS, Hubballi
November 12, 2018
ಕರ್ನಾಟಕ, ಸುದ್ದಿ
ಹಣ ಬಲ, ಜಾತಿ ಬಲ ಇಲ್ಲದಿದ್ದರೂ ಕಿರಿಯ ವಯಸ್ಸಿನಲ್ಲಿಯೇ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಮೂಡಿಸಿಕೊಂಡ ವಿಶಿಷ್ಟ ವ್ಯಕ್ತಿತ್ವ ಅನಂತಕುಮಾರ್ ಅವರದು. ಕೇವಲ 36ರ ಹರೆಯದಲ್ಲಿಯೇ ಅಟಲ್ ಬಿಹಾರಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ(1998) ಸಂಪುಟದಲ್ಲಿ ಕ್ಯಾಬಿನೇಟ್ ದರ್ಜೆ ಮಂತ್ರಿ ಪದವಿ ಪಡೆದಿದ್ದ ಅನಂತ್ಕುಮಾರ್ ಅವರನ್ನು ವಿವಾದಗಳು ಮತ್ತು ಹಗರಣಗಳ ಆರೋಪ ಪೀಡಿಸದೇ ಇರಲಿಲ್ಲ. ಹಲವು ಹಗರಣಗಳಲ್ಲಿ ಅನಂತ್ ಕುಮಾರ್ ಹೆಸರು ತಳುಕು ಹಾಕಿಕೊಂಡಿತ್ತು. ಆದರೆ ಅದನ್ನೆಲ್ಲವನ್ನು ಎದುರಿಸಿ ದಿಟ್ಟವಾಗಿ …
Read More »
Shaikh BIG TV NEWS, Hubballi
November 12, 2018
ಕರ್ನಾಟಕ, ಸುದ್ದಿ
ತ್ರಿವಳಿ ತಲಾಖ್ ವಿಚಾರ ಸಾಕಷ್ಟು ರಾಜಕೀಯ ಜಗ್ಗಾಟಕ್ಕೆ ಕಾರಣವಾಗಿತ್ತು. ಅದ್ರಲ್ಲೂ ವಿರೋಧ ಪಕ್ಷಗಳು, ತ್ರಿವಳಿ ತಲಾಖೆ ಮಸೂದೆಯಲ್ಲಿ ಹಲವು ಬದಲಾವಣೆಗಳನ್ನ ಮಾಡಬೇಕು ಅಂತ ಪಟ್ಟು ಹಿಡಿದಿದ್ದವು. ಆದ್ರೆ, ಇದಕ್ಕೆ ಬಿಜೆಪಿ ಮಾತ್ರ ಜಗ್ಗಿರಲಿಲ್ಲ. ಇನ್ನು, ತ್ರಿವಳಿ ತಲಾಖ್ ವಿಚಾರವಾಗಿ ಕಳೆದ ಬಾರಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಂತಕುಮಾರ್ ಚಾಟಿ ಬೀಸಿದ್ದರು. ತ್ರಿವಳಿ ತಲಾಖ್ ವಿಧೇಯಕ ಅಂಗೀಕಾರಕ್ಕೆ ಅಸಹಕಾರ ನೀಡುವ ಮೂಲಕ ಮಹಿಳೆಯರಿಗೆ ಕಾಂಗ್ರೆಸ್ ಅನ್ಯಾಯ ಎಸಗುತ್ತಿದೆ ಎಂದು ಗುಡುಗಿದ್ದರು.
Read More »
Shaikh BIG TV NEWS, Hubballi
November 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಂತ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅನಂತ ಕುಮಾರ್ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.59 ವರ್ಷದ ಅನಂತ ಕುಮಾರ್, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸದ್ಯ ನರೇಂದ್ರ ಮೋದಿ ಸಂಪುಟದಲ್ಲಿ …
Read More »
Shaikh BIG TV NEWS, Hubballi
November 11, 2018
ಕರ್ನಾಟಕ, ಸುದ್ದಿ
ಬೆಂಗಳೂರು: 14 ದಿನಗಳ ನ್ಯಾಯಾಂಗ ಬಂಧನದ ಮೇಲೆ ಇಂದು ಸಂಜೆ 4.50 ನಿಮಿಷಕ್ಕೆ ಸರಿಯಾಗಿ ಪರಪ್ಪನ ಅಗ್ರಹಾರ ಜೈಲಿಗೆ ಎಂಟ್ರಿ ಕೊಟ್ಟ ಜನಾರ್ದನ ರೆಡ್ಡಿಗೆ ವಿಚಾರಣಾಧೀನ ಸಂಖ್ಯೆ ದೊರೆತಿದೆ. ತಕ್ಷಣವೇ, ಜೈಲಿನ ಪ್ರೊಸಿಜರ್ ಮುಗಿಸಿದ ಅಧಿಕಾರಿಗಳು ರೆಡ್ಡಿಗೆ ವಿಚಾರಣಾಧೀನ ಕೈದಿಯಾಗಿ 10902 ಸಂಖ್ಯೆಯನ್ನು ಕೊಟ್ಟಿದ್ದಾರೆ.ಆ್ಯಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಬಂಧಿಸಿದ್ದರು. ಇಂದು ರೆಡ್ಡಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಬಳಿಕ ಅವರನ್ನು 1ನೇ …
Read More »