Shaikh BIG TV NEWS, Hubballi
September 14, 2018
ಕರ್ನಾಟಕ, ಸುದ್ದಿ
ಕಲಬುರ್ಗಿ(ಸೆ. 14): ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದ ಬಿಜೆಪಿ ಮುಖಂಡ ರಾಹುಲ್ ಬೀಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 10 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವೆಡೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಬೊಲೆರೋ ವಾಹನ, ಒಂದು ಬೈಕ್, ಐದು ಮಾರಕಾಸ್ತ್ರ ಮತ್ತು ಐದು ಮೊಬೈಲ್ ಜಪ್ತಿ ಮಾಡಲಾಗಿದೆ. ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ತಿಳಿಸಿರುವ ಕಲಬುರ್ಗಿ …
Read More »
Shaikh BIG TV NEWS, Hubballi
September 14, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಆಂತರಿಕವಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ, ಕೆಲ ಗೊಂದಲವಿದ್ದರೂ ಸರ್ಕಾರ ಬೀಳುವ ಮಟ್ಟಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು. ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದ ಅವರು, ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಆಂತರಿಕವಾಗಿ ಪಕ್ಷದಲ್ಲಿ ಅಸಮಾಧಾನವೇನಿಲ್ಲ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರು ಹೇಳಿದ್ದಾರೆ. ಹೊಗೆ ಆಡಿದ ತಕ್ಷಣವೇ ದೊಡ್ಡ ಅನಾಹುತ ಅಂದರೆ ಹೇಗೆ? ತಾವೆಲ್ಲ ತಿಳಿದಿರುವಷ್ಟು ಗಂಭೀರವಾಗಿಲ್ಲ. …
Read More »
Shaikh BIG TV NEWS, Hubballi
September 14, 2018
ಕರ್ನಾಟಕ, ಸುದ್ದಿ
ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಹಲವು ವದಂತಿಗಳು ಹಬ್ಬಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೇವಾಲಯಕ್ಕೆ ಭೇಟಿ ನೀಡಿದ್ದಾಗಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಹಾಗಾಗಿ ಸಮ್ಮಿಶ್ರ ಸರ್ಕಾರ ಉಳಿಸಲು ದೇವರ ಅನುಗ್ರಹ, ಗುರುಗಳ ಅನುಗ್ರಹ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. …
Read More »
Shaikh BIG TV NEWS, Hubballi
September 14, 2018
ಕರ್ನಾಟಕ, ಸುದ್ದಿ
ಮಂಗಳೂರು: ಕರ್ನಾಟಕದ ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಪರಿಶೀಲಿಸಿ ವರದಿ ನೀಡಲು ಕೇಂದ್ರ ಸರ್ಕಾರ ಕಳುಹಿಸಿರುವ ಹಿರಿಯ ಅಧಿಕಾರಿಗಳ ತಂಡವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದರು. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಮೊದಲಿಗೆ ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಬಂಟ್ವಾಳದ ತುಂಬೆ ಡ್ಯಾಂ …
Read More »
Shaikh BIG TV NEWS, Hubballi
September 13, 2018
ಕರ್ನಾಟಕ, ಸುದ್ದಿ
ಬೆಳಗಾವಿ ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅಷ್ಟು ಸುಲಭಕ್ಕೆ ಬಿಜೆಪಿಗೆ ಬರುವವರಲ್ಲ. ಬೆಂಗಳೂರು: ಮರಳಿ ಮುಖ್ಯಮಂತ್ರಿ ಖುರ್ಚಿ ಹಿಡಿಯಲು ಬೆಂಬಿಡದೆ ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನಿಲುವಿಗ ಸಂಘ ಪರಿವಾರ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ. ಆಪರೇಷನ್ ಕಮಲ ನಡೆಸಲು ಆರ್ ಎಸ್ ಎಸ್ ತೀವ್ರ ವಿರೋಧ ಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಆಪರೇಷನ್ ಕಮಲದಿಂದ ಕೆಟ್ಟ ಹೆಸರು ಬರಲಿದೆ. ಆದುದರಿಂದ …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಮೈಸೂರು: ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತೆರೆಮರೆಯಲ್ಲಿ ಅಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸುವ ಮೂಲಕ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಕಮಲ ಪಾಳಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್ ‘ಹಲವು ವರ್ಷಗಳು ನಾನೂ ಬಿಜೆಪಿಯಲ್ಲಿ ಇದ್ದವನು. ಬಿಜೆಪಿಯ ಕೆಲ ನಾಯಕರಿಗೆ ಈಗ ಅಧಿಕಾರದ ಆಸೆ ಹಿಡಿದಿದೆ. …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಈಗ ಕಾಂಗ್ರೆಸ್ ಪಕ್ಷ ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ಹೂಡುತ್ತಿದೆ. ಈಗ ಈ ತಂತ್ರಕ್ಕೆ ವಿಚಿತ್ರವಾದ ಹೆಸರನ್ನು ನಾಮಕಾರಣ ಮಾಡಿದೆ,ಅದೇನಪ್ಪಾ ಅಂದರೆ ಸೂಸೈಡ್ ಸ್ಕ್ವಾಡ್. ಹೌದು, ಈ ಹೆಸರು ನಿಮಗೆ ಅಚ್ಚರಿ ಮೂಡಿಸಬಹುದು.ಹಾಗಂತ ಈ ಸ್ಕ್ವಾಡ್ ಯಾವುದೋ ಸೈನ್ಯವಿರಬಹುದೋ ಎಂದು ತಿಳಿದುಕೊಳ್ಳಬೇಡಿ.ಈಗ ಈ ಹೆಸರನ್ನು ಬಿಜೆಪಿ ಹೆಣೆದಿರುವ ಆಪರೇಷನ್ ಕಾರ್ಯಕ್ಕೆ ಪ್ರತಿತಂತ್ರವಾಗಿ ಕಾಂಗ್ರೆಸ್ ಈ ಹೆಸರನ್ನಿಟ್ಟಿದೆ. ಏನಿದು ಸುಸೈಡ್ ಸ್ಕ್ವಾಡ್ ? ಈಗ ಪುನಃ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಗಣೇಶ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಆಯಾ ವಲಯದ ಡಿಸಿಪಿ ಹಾಗೂ ಎಸಿಪಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಮೇಲ್ಮಟ್ಟ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಗಣೇಶ ಹಬ್ಬಕ್ಕೆ ಈಗಾಗಲೇ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ. ಶಿವಕುಮಾರ್, ‘ಒಂದೇ ಒಂದು ಪಾನ್ ಅಲ್ಲಾಡಿಸಲಿ ನೋಡೋಣ’ ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ. ರಾಜಕೀಯ ಚೆಸ್ ಆಟವಿದ್ದಂತೆ. ಬಿಜೆಪಿಯವರು ಒಂದೇ ಒಂದು ಪಾನ್ ಜರುಗಿಸಲಿ ನೋಡೋಣ. ಆಮೇಲೆ ಎಂಥ ನಡೆ ನಡೆಸಬೇಕು ಅನ್ನೋದನ್ನು ನಾವು ನಿರ್ಧರಿಸುತ್ತೇವೆ ಎಂದಿರುವ ಡಿಕೆಶಿ, ‘ರಾಜಕೀಯ ಅಂದ್ರೆ ಹಾಗೇನೆ. ಒಂದು ಸ್ಥಾನ ಖಾಲಿಯಾದರೂ ಆ ಸ್ಥಾನಕ್ಕೆ …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೆಪ್ಟೆಂಬರ್15 ರಂದು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ. ಸೆಪ್ಟೆಂಬರ್15 ರಂದು ಬೆಳಿಗ್ಗೆ ಬೆಳಗಾವಿಯಲ್ಲಿ ರಾಷ್ಟ್ರಪತಿಗಳೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.00 …
Read More »