Breaking News

ಕರ್ನಾಟಕ

ಬಿಜೆಪಿಗೆ ಜಗದೀಶ ಶೆಟ್ಟರ ಸೇರಿದ್ದು ಖುಷಿ: ಲಾಡ್‌..

ಜಗದೀಶ ಶೆಟ್ಟರ ಅವರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ಬಹಳ ಖುಷಿಯಾಗಿದೆ. ಯಾಕೆ ಕಾಂಗ್ರೆಸ್‌ಗೆ ಬಂದರು, ಬಿಜೆಪಿಗೆ ಯಾಕೆ ವಾಪಸ್‌ ಹೋದರು ಎಂದು ಅವರನ್ನೇ ಕೇಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಪ್ರತಿಕ್ರಿಯಿಸಿದರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತೊರೆದಾಗ ಏನೋ ಹೇಳಿದ್ದರು, ಈಗ ವಾಪಸ್‌ ಹೋಗುವಾಗ ಏನು ಹೇಳುತ್ತಾರೆ. ರಾಜಕಾರಣದಲಿ ಇದೆಲ್ಲ ಸಾಮಾನ್ಯ’ ಎಂದು ಹೇಳಿದರು. ‘ಕಾಂಗ್ರೆಸ್‌ ಅವರಿಗೆ ಗೌರವ ನೀಡಿ, ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿತ್ತು. …

Read More »

OLD PENSION SCHEME IMPLEMENTED STATE GOVERNMENT: ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: 13 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ

ಬೆಂಗಳೂರು : ಸುಮಾರು 13,000 ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅವರ ಒತ್ತಾಸೆಯಂತೆ ಹಳೆ ಪಿಂಚಣಿ ಯೋಜನೆಯನ್ನೇ ಮನಂದುವರೆಸಲು ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಇದನ್ನು ತಮ್ಮ ಸಾಮಾಜಿಕ ಜಾರಿಗೊಳಿಸಿ ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಕೆ ನುಡಿದಂತೆ ನಡೆದಿದ್ದೇನೆ ಎಂದು ಹೇಳಿದ್ದಾರೆ. ಅವರು ಮಾಡಿರುವ ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 …

Read More »

ಮಾಜಿ ಸಿಎಂ ʻಜಗದೀಶ್ ಶೆಟ್ಟರ್ʼ ಕಾಂಗ್ರೆಸ್ ಗೆ ಗುಡ್ ಬೈ : ಬಿಜೆಪಿ ಮರು ಸೇರ್ಪಡೆ..

ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾಗಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಜೊತೆಗೆ ಮಹತ್ವದ ಸಭೆ ನಡೆಸಿರುವ ಅಮಿತ್ ಶಾ ಬಿಜೆಪಿ ಮರು ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಳಿಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.ಅಮಿತ್ ಶಾ ಜೊತೆಗೆ ಮಾತುಕತೆಯಲ್ಲಿ ಬಿಜೆಪಿ ಸೇರಲು ಜಗದೀಶ್ ಶೆಟ್ಟರ್ ಗ್ರೀನ್ …

Read More »

ನ್ಯಾಯಾಲಯದಲ್ಲಿರುವ‌ ಪ್ರಕರಣ ವಾಪಸ್ ಪಡೆಯಲು ನಿರಾಕರಣೆ: ಗೃಹಿಣಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ….

ಹುಬ್ಬಳ್ಳಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೀದಿಯಲ್ಲಿ ಎರಡು ಗುಂಪುಗಳು ಕಟ್ಟಿಗೆ , ಕಲ್ಲುಗಳಿಂದ ಹೊಡೆದಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಶಿವಶಂಕರ ಕಾಲನಿಯಲ್ಲಿ ನಡೆದಿದೆ. ಜ್ಯೋತಿ ಹನೀಫ ಅಂಚಿಟಗೇರಿ ಎಂಬುವವರು ಈ ಹಿಂದೆ ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನಾದ ಹನೀಫ ಈತನ ವಿರುದ್ಧ ದೂರು ಸಲ್ಲಿಸಿದ್ದರು. ಇದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇದ್ದು. ಈ ಕೇಸನ್ನು ನೀನು ಹಿಂದೆ ತೆಗೆದುಕೊ ಅಂತ ಹೇಳಿದ್ದರು‌. ಅದಕ್ಕೆ ಜ್ಯೋತಿ ಒಪ್ಪದಿದ್ದಕ್ಕೆ ಆರೋಪಿತರಾದ ಮೊಹಮ್ಮದ …

Read More »

ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ..

ಮೈಸೂರು:ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. …

Read More »

ಸುರ್ಜೇವಾಲಾ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಚಿಂತನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ

ಹುಬ್ಬಳ್ಳಿಯಲ್ಲಿ ಇಲ್ಲಿನ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆರೋಪಿಸಿರುವುದು ಅಪ್ಪಟ ಬಾಲಿಶತನದ ಹೇಳಿಕೆ. ತಮ್ಮ ಹೇಳಿಕೆಗೆ ಸೂಕ್ತ ಪುರಾವೆ ನೀಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.ನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ರೈಲ್ವೆ ಇಲಾಖೆಯ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ …

Read More »

PM ಮೋದಿ ಅವರಿಂದ ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆ.!

ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್​ನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು…ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್​ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್​ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ ಬಿಐಇಟಿಸಿ ಕೇಂದ್ರದಿಂದ ಜಾಗತಿಕ …

Read More »

ಅಯೋಧ್ಯೆ ಶ್ರೀ ರಾಮಚಂದ್ರನಿಗೆ ವಿಶೇಷ ಅಭಿಮಾನ ತೋರಿದ ಹುಬ್ಬಳ್ಳಿ ಯುವಕ..

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೇ ಆರಂಭ ಆಗುತ್ತಿದ್ದಂತೆ, ದೇಶದಲ್ಲಿ ಎಲ್ಲಿಲ್ಲದ ಸಡಗರ ಸಂಭ್ರಮ ಮನೆಮಾಡಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತನ್ನ ಕಾರಿಗೆ ಸಂಪೂರ್ಣವಾಗಿ ರಾಮ, ಹನುಮಂತನ ಸ್ಟೀಕರ್ ಮಾಡಿಸಿ, ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದಾನೆ. ಹೌದು, ನಗರದ ಹೊಸೂರಿನ ನಿವಾಸಿಯಾಗಿರುವ ಸಚಿನ್ ಮಿಸ್ಕಿನ್ ರಾಮಭಕ್ತನಾಗಿದ್ದು, ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಿದ್ದ. ಈತ ಇದೀಗ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ತನ್ನ …

Read More »

ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ..

ವಿಜಯನಗರ: ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಮದುವೆಯಾಗಲು ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಮಾಡಿಕೊಂಡ ಯುವಕ ಗುಡೇಕೋಟೆ ಗ್ರಾಮದ ಬಿ.‌ ಮಧುಸೂದನ್ (26) ಎಂದು ತಿಳಿದುಬಂದಿದೆ. ಅರೆ ಹುಚ್ಚನಂತೆ ಯುವಕನ ತಂದೆ ವರ್ತಿಸುತ್ತಾರೆಂಬ ಕಾರಣಕ್ಕೆ ಯುವಕನಿಗೆ ಕನ್ಯೆ ಕೊಡಲು ನಿರಾಕರಿಸುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದ …

Read More »

ಒಳ್ಳೆಯ ಸಮಾಜಕ್ಕೆ ಒಳ್ಳೆಯ ಕರ್ತವ್ಯ ನಿರ್ವಹಿಸುವ ಪೊಲೀಸರು ಬೇಕು…

ಬೆಂಗಳೂರು: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದು ಹೇಳಿದರು. ದೇಶವನ್ನು, ಸಾಮಾನ್ಯ ಜನರನ್ನು …

Read More »