Breaking News

ಕರ್ನಾಟಕ

ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ? ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ. ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ ಈ ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ. ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌ ವಿರುದ್ಧ ಕ್ರಮ …

Read More »

ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು……..

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಸರ್ಕಾರ ಈ ಕುರಿತು ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸೋಮವಾರ ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು” ಎಂದು ಹೇಳಿದ್ದಾರೆ. 2024-25ನೇ ಸಾಲಿನ ಬಜೆಟ್‌ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸುವ …

Read More »

ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು: ಡಿ ಕೆ ಶಿವಕುಮಾರ್‌

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್‌ ಪಾಳಯದಲ್ಲಿ ಕೇಳಿ ಬಂದಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವ ಕ್ಷಣದಲ್ಲಿ …

Read More »
Featured Video Play Icon

ನಕಲಿ ವೈದ್ಯನ ಪರ ವಕಾಲತ್ತು ವಹಿಸಿದ ಕೈ ನಾಯಕನ ಚಳಿ ಬಿಡಿಸಿ ಸಚಿವ ಸ್ಥಾನದ ಘನತೆ ಹೆಚ್ಚಿಸಿದ ಸಂತೋಷ್ ಲಾಡ್…

ಧಾರವಾಡ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವ ವೇಳೆ ಕೈ ನಾಯಕ ಕಕ್ಕಾಬಿಕ್ಕಿ ಯಾದ ಘಟನೆ ನಡೆದಿದೆ.ಧಾರವಾಡದ ನಕಲಿ ವೈದ್ಯ ತರುಣಕುಮಾರ ರಾಯ್ ಸೀಜ್ ಆಗಿರುವ ಕ್ಲಿನಿಕ್ ಓಪನ್ ಮಾಡಿಸಿಕೊಂಡುವಂತೆಮನವಿ ಸಲ್ಲಿಸಲು ಹಾಗು ಲಾಭಿ ಮಾಡಲು ಕೈ ನಾಯಕನ ಜೊತೆ ಬಂದು ದವಾಖಾನೆಯನ್ನ ಓಪನ್ ಮಾಡಿಸಿಕೊಡುವಂತೆ ಸಚಿವರ ಬಳಿ ತರುಣಕುಮಾರರನ್ನನ್ನು ಕರೆದುಕೊಂಡು ಬಂದಿದ್ದ ಮುತ್ತುರಾಜ್ ಮಾಖಡವಾಲೆ ಮೇಲೂ ಸಂತೋಷ್ ಲಾಡ್ ಗರಂ ಆಗಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ತರುಣಕುಮಾರ್ ರಾಯ್ ಕ್ಲಿನಿಕ್ …

Read More »

ಲೋಕಸಭೆ ಚುನಾವಣೆಗೆ ಬಿಜೆಪಿಯಲ್ಲಿ ಗರಿಗೆದರಿದ ತಯಾರಿ…..

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. …

Read More »

ರಾಜ್ಯ ನರಳುತ್ತಿದೆ. ನಿದ್ದೆಯಲ್ಲಿರುವ ಸರ್ಕಾರ ಎದ್ದು ಎಳಲಿ‌ ಎಂದ ರಾಜ್ಯ ಬಿಜೆಪಿ…

ಬೆಂಗಳೂರು: ರಾಜ್ಯ ನರಳುತ್ತಿದೆ. ನಿದ್ದೆಯಲ್ಲಿರುವ ಸರ್ಕಾರ ಎದ್ದು ರೈತರಿಗೆ ಬೆಳೆ ಪರಿಹಾರ ನೀಡಲಿ ಎಂದು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಮಕ್ಕಳ ಮೇಲಿನ ದೌರ್ಜನ್ಯದ ಘಟನೆ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿರುವುದು ನೋಡಿದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಹಳಿತಪ್ಪಿದ ಆಡಳಿತದಲ್ಲಿ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದು ಬಿಂಬಿತವಾಗುತ್ತಿದೆ. ಅದರಲ್ಲೂ ಪರಿಶಿಷ್ಟ ಸಮುದಾಯಕ್ಕೆ …

Read More »

ಪ್ರಧಾನಿ ನರೇಂದ್ರ ಮೋದಿಗೆ ಎಲ್ಲಿ‌ ನಿಮ್ಮ ಉದ್ಯೊಗ ಎಂದ ರಣದೀಪ್ ಸಿಂಗ್ ಸುರ್ಜೆವಾಲ….

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದಾರೆ.ಕೆಳಿದರೆ ನಾವು ಹಾಗೆ ಮಾಡುತ್ತೆವೆ ಹಿಗೆ ಮಾಡುತ್ತೆವೆ ಎಂದ ಇಗ ಉದ್ಯೊಗ ಎಲ್ಲಿ ಎಂದರು. ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. …

Read More »

ಕಾಂಗ್ರೆಸ್‌ನ ಮಹಿಳಾ ನಾಯಕಿಯೊಬ್ಬರು ಚಾಮರಾಜನಗರ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ….

ಚಾಮರಾಜನಗರ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್‌ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ. ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. …

Read More »

ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು….

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಪತ್ನಿ ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ದಂಪತಿಯಾಗಿದ್ದಾರೆ. ಕೇವಲ ಉದ್ಯಮ ವಿಚಾರವಾಗಿ ಮಾತ್ರವಲ್ಲ ಸಮಾಜ ಸೇವೆ, ದೇಣಿಗೆ ಹೀಗೆ ಹತ್ತಾರು ಕೆಲಸಗಳಿಂದಲೂ ಎಲ್ಲರ ಗಮನ ಸೆಳೆಯುತ್ತಾರೆ. ಆದರೆ ಇತ್ತೀಚಿಗೆ ಅವರು ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು. ಸುಧಾ ಮೂರ್ತಿ ಅವರನ್ನು ಡ್ರಾಪ್ ಮಾಡಲು ಟಿಕೆಟ್ ಇಲ್ಲದೆ 11 ಗಂಟೆಗಳ ಕಾಲ ರೈಲಿನಲ್ಲಿ ಪ್ರಯಾಣಿಸಿದ್ದ ದಿನವನ್ನು ಇತ್ತೀಚೆಗೆ ನೆನಪಿಸಿಕೊಂಡಿದ್ದಾರೆ. …

Read More »

ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ….

ಬೆಂಗಳೂರು: ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ( ಜನವರಿ 9) ಬೆಳಗ್ಗೆಯೇ ದಾಳಿ ನಡೆಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ಆರು ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ …

Read More »