BigTv News
December 14, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …
Read More »
BigTv News
December 14, 2023
ಕರ್ನಾಟಕ, ಬೆಂಗಳೂರು
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಲು ಪೋಷಕರು ತಯಾರಿ ನಡೆಸುತ್ತಿದ್ದಾರೆ. ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಎಂಬ ಕುರಿತು ಪೋಷಕರಿಗೆ ಮಾಹಿತಿ ನೀಡಲು ಪ್ರಕಟಣೆ ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಆನ್‌ಲೈನ್ ಮೂಲಕ 31/12/2023ರ ತನಕ ಅರ್ಜಿ ಸಲ್ಲಿಕೆ ಮಾಡಬಹುದು. ಪ್ರವೇಶ ಪತರ ಡೌನ್‌ಲೋಡ್ 1/2/2024ರಂದು ಮಾಡಿಕೊಳ್ಳಬೇಕು. …
Read More »
BigTv News
December 14, 2023
ಕರ್ನಾಟಕ, ಬೆಂಗಳೂರು, ಸುದ್ದಿ
ನಮಸ್ಕಾರ ದೇವ್ರು ಅಂತ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಗಗನ್ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ. ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ. ಸಾಮಾನ್ಯವಾಗಿ ಅವರು ವಾರದಲ್ಲಿ ಎರಡು ಮೂರು ವಿಡಿಯೋ ಹಂಚಿಕೊಳ್ಳುತ್ತಿದ್ದರು. ಆದರೆ ಕಳೆದೊಂದು ತಿಂಗಳಿಂದ ಅವರ …
Read More »
BigTv News
December 14, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಸಿಲಿಕಾನ್ ಸಿಟಿ ಬೆಂಗಳೂರು ದಿನಿದಿಂದ ದಿನಕ್ಕೆ ಬೃಹದ್ಧಾಕಾರವಾಗಿ ಬೆಳೆಯುತ್ತಲಿದ್ದು, ಅಷ್ಟೇ ಪ್ರಮಾಣದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದರಿಂದ ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ. ಇನ್ನು ಸರ್ಕಾರ ರಸ್ತೆಗಳಿಗೆ ವೈಟ್ ಟಾಪಿಂಗ್ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿದೆ. ಹಾಗಾದರೆ ಇದಕ್ಕೆ ಮೀಸಲಿಟ್ಟ ಅನುದಾನ ಎಷ್ಟು…? ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ …
Read More »
BigTv News
December 13, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪತಿ ದರ್ಶನ್ ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಳಸ ಪಟ್ಟಣದಲ್ಲಿ ಶ್ವೇತಾ ಅಂತ್ಯ ಸಂಸ್ಕಾರ ನಡೆದಿದೆ. 31 ವರ್ಷದ ಶ್ವೇತಾ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದರು. ಈ ಸಾವಿನ ಕುರಿತು ಹಲವು ಅನುಮಾನ ವ್ಯಕ್ತವಾಗಿದೆ. ಆಕೆಯ ಪತಿ ದರ್ಶನ್ ಕೊಲೆ ಮಾಡಿದ್ದಾರೆ ಎಂದು ಶ್ವೇತಾ …
Read More »
BigTv News
December 13, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ವಿಪಕ್ಷಗಳು ಸದನದ ಹೊರಗೆ ಹಾಗೂ ಸದನದ ಒಳಗೆ ಸರ್ಕಾರದ ಕಿಡಿಕಾರಿವೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ …
Read More »
BigTv News
December 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡಿಎ ವ್ಯಾಪ್ತಿಯಲ್ಲಿರುವ ಉದ್ಯಾನವನಗಳ ಸಂಖ್ಯೆ ಮತ್ತು ಅವುಗಳ ಅತಿಕ್ರಮಣ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉತ್ತರಿಸಿದ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾವು ಬೆಂಗಳೂರಿನಲ್ಲಿ …
Read More »
BigTv News
December 13, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ ನೀಡುವುದರ ಜೊತೆಗೆ ಮಾಹಿತಿ ನೀಡುವವರ ಗೋಪ್ಯತೆಯನ್ನು ಕಾಪಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಮಂಗಳವಾರ ವಿಧಾನಪರಿಷತ್‌ನಲ್ಲಿ ನಡೆದ ಗಮನ ಸೆಳೆಯುವ ಸೂಚನೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕಾನೂನು ಬಾಹಿರವಾಗಿ …
Read More »
BigTv News
December 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಕನ್ನಡ ಸೀಸನ್ 10 ಒಂದಲ್ಲ ಒಂದು ರೀತಿ ವೀಕ್ಷಕರನ್ನು ಸೆಳೆಯುತ್ತಿದೆ. ಮನೆಯ ಸದಸ್ಯರು ಕೂಡ ಬಿಗ್ ಬಾಸ್ ಕೊಡುವ ಟಾಸ್ಕ್‌ಗಳಲ್ಲಿ ಸಖತ್ ಆಕ್ಟಿವ್ ಆಗಿಯೇ ಭಾಗವಹಿಸುತ್ತಿದ್ದಾರೆ. ಬಿಗ್ ಬಾಸ್ ಶೋ ವೀಕ್ಷಕರಿಗೆ ಸಖತ್ ಎಂಟರ್‌ಟೈನ್ಮೆಂಟ್ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯೊಳಗೆ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಲಾಗಿತ್ತು. ಈ ಟಾಸ್ಕ್‌ನಲ್ಲಿ ವಿದ್ಯಾರ್ಥಿಗಳು ಅವರೇ.. ಶಿಕ್ಷಕರು ಕೂಡ ಅವರೇ.. ಹೀಗಾಗಿ ಪ್ರತಿ ಬಾರಿ ಪಾಠ …
Read More »
BigTv News
December 13, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಈರುಳ್ಳಿ, ಬೆಳ್ಳುಳ್ಳಿ ಪ್ರತಿ ಮನೆಯ ಅಡುಗೆಮನೆಯಲ್ಲಿ ಲಭ್ಯವಿರುವ ಮಸಾಲೆ ಸಾಮಾಗ್ರಿಯಾಗಿದೆ. ಇವು ಅಡುಗೆಗೆ ಅತೀ ಅವಶ್ಯಕ ಪದಾರ್ಥಗಳಾಗಿವೆ. ಆದರೆ ಟೊಮೆಟೋ ಬೆಲೆ ಏರಿಕೆ ಬಳಿಕ ಈಗ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಬೆಳ್ಳುಳ್ಳಿ ಬೆಲೆ ಕೇಳಿದರೆ ದಾಂಗಾಗುವುದು ಗ್ಯಾರಂಟಿ. ಅಷ್ಟರ ಮಟ್ಟಿಗೆ ಜವಾರಿ ಮತ್ತು ಹೈಬ್ರೀಡ್ ಬೆಳ್ಳುಳ್ಳಿ ಬೆಲೆ ಏರಿಕೆ ಆಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಒಂದು ಕೆ.ಜಿ ಬೆಳ್ಳುಳ್ಳಿಗೆ 80-ರಿಂದ 90 ರೂಪಾಯಿ ಮೊದಲಿತ್ತು. ಇದೀಗ ಬೆಳ್ಳುಳ್ಳಿ ದರ …
Read More »