Breaking News

ಕರ್ನಾಟಕ

ಮಂಗಳೂರಿನಲ್ಲಿ ವ್ಯಾಪಾರದಲ್ಲಿ ಧರ್ಮ ದಂಗಲ್ ಮತ್ತೆ ಮುನ್ನಲೆಗೆ ಬಂದಿದೆ….

ಮಂಗಳೂರು: ಮಂಗಳೂರಿನಲ್ಲಿ ವ್ಯಾಪಾರದಲ್ಲಿ ಧರ್ಮ ದಂಗಲ್ ಮತ್ತೆ ಮುನ್ನಲೆಗೆ ಬಂದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಠಿ ಮಹೋತ್ಸವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಈ ಷಷ್ಟಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಕರ್ನಾಟಕ …

Read More »

ಸದನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್‌ ವಿತರಣೆ ಕುರಿತು ಚರ್ಚೆ….

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಾಕಷ್ಟು ವಿಚಾರಗಳ ಕುರಿತು ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಗುರುವಾರ ಸದನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್‌ ವಿತರಣೆ ಕುರಿತು ಚರ್ಚೆ ನಡೆಯಿತು. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ …

Read More »

ಬಿಜೆಪಿ ಅಧ್ಯಕ್ಷನಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ ಕರ್ತವ್ಯ: ಬಿ ವೈ ವಿಜಯೇಂದ್ರ.

ಬೆಳಗಾವಿ: ಬಿಜೆಪಿ ಅಧ್ಯಕ್ಷನಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ ಕರ್ತವ್ಯವಾಗಿದೆ. ಇದು ನನ್ನ ಪ್ರಥಮ ಆದ್ಯತೆ. ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ. ರಾಜ್ಯಾಧ್ಯಕ್ಷನಾಗಿಯೂ ಹೆದರುವುದಿಲ್ಲ. ಇವೆಲ್ಲವನ್ನೂ ನಾವು ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಈ ಕುರಿತು ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಲ್ಬರ್ಗದಲ್ಲಿ ಮಣಿಕಂಠ ರಾಠೋಡ್ ವಿಚಾರದಲ್ಲಿ ಮತ್ತೊಂದೆಡೆ ಪ್ರಿಯಾಂಕ್ ಖರ್ಗೆಯವರು ಪೊಲೀಸ್ ವರದಿ ಆಧಾರದಲ್ಲಿ …

Read More »

ಸದನ ಆರಂಭವಾಗುತ್ತಿದ್ದಂತೆ ಸಮಯಕ್ಕೆ ಸರಿಯಾಗಿ ಬಂದ ಸದಸ್ಯರ ಹೆಸರನ್ನು ಸ್ಪೀಕರ್ ಯು.ಟಿ ಖಾದರ್ ಓದಿದರು….

ಬೆಳಗಾವಿ: ಗುರುವಾರ ಸದನ ಆರಂಭ ಆಗುತ್ತಿದ್ದಂತೆ ಸದನಕ್ಕೆ ಸರಿಯಾದ ಸಮಯಕ್ಕೆ ಬಂದ ಸದಸ್ಯರ ಹೆಸರನ್ನು ಸ್ಪೀಕರ್ ಯು ಟಿ ಖಾದರ್‌ ಓದಿ ಹೇಳಿದರು. ಆದರೆ ಇದಕ್ಕೆ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸದನಕ್ಕೆ ನಾವೂ ಬೇಗ ಬಂದಿದ್ದೇವೆ, ನಮ್ಮನ್ನೇಕೆ ಗುರುತಿಸಲ್ಲ ? ಎಂದು ಪ್ರಶ್ನಿಸಿದರು. ನಾವೂ ಟೈಂಗೆ ಸರಿಯಾಗಿ‌ ಬಂದಿದ್ದೇವೆ ನಮ್ಮ ಹೆಸರು ಏಕಿಲ್ಲ? ಎಂದು ಆರಗ ಜ್ಞಾನೇಂದ್ರ ಸೇರಿದಂತೆ ಇತರ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸ್ಪೀಕರ್ ಖಾದರ್ …

Read More »

ರಾಜ್ಯ ಸರ್ಕಾರ ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ ಸಿಹಿಸುದ್ದಿ…

ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಆ ಸಿಹಿಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್‌ ವಿತರಣೆಗೆ ಚಾಲನೆ ನೀಡಿದ್ದಾರೆ. ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಆರೋಗ್ಯ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್‌ …

Read More »

ಎರಡು ವರ್ಷಗಳಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು 94 ಮಾರಣಾಂತಿಕ ಮತ್ತು 233 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ….

ಬೆಂಗಳೂರು: ಸಾರಿಗೆ ಇಲಾಖೆಯ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳನ್ನು ಒಳಗೊಂಡ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. 2022 ಮತ್ತು 2023 ರಲ್ಲಿ ನಡುವಿನ ಅವಧಿಯಲ್ಲಿ ಬಿಎಂಟಿಸಿ ಬಸ್ ಅಪಘಾತಗಳಿಂದ 71 ಜನರು ಮತ್ತು ಕೆಎಸ್ಆರ್‌ಟಿಸಿ ಬಸ್ ಅಪಘಾತಗಳಿಂದ 23 ಜನರು ಸಾವನ್ನಪ್ಪಿದ್ದಾರೆ. ಇಲಾಖೆ ಮಾಹಿತಿ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಬಿಎಂಟಿಸಿ …

Read More »

ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಯತ್ನಾಳ್‌ ವಿರುದ್ಧ ಟಾಂಗ್‌…

ಬೆಂಗಳೂರು: ಆಡಳಿತ ಪಕ್ಷ ಅದ ವಿರುದ್ಧ ಸಂಘರ್ಷ ಮಾಡಬೇಕು. ಯಡಿಯೂರಪ್ಪ ಮೇಲೆ, ರಾಜ್ಯಾಧ್ಯಕ್ಷ ಮೇಲೆ ಸಂಘರ್ಷ ಮಾಡಿದ್ರೆ ಪಕ್ಷ ವಿರೋಧಿ ಚಟುವಟಿಕೆ ಆಗುತ್ತೆ, ಹಾಗೆಯೇ ಬಿಜಾಪುರದಲ್ಲಿ ಟಿಕೆಟ್ ಕೊಡುವುದು ಯಡಿಯೂರಪ್ಪನ್ನೋದು ಮರಿಬಾರದು ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಯತ್ನಾಳ್‌ ವಿರುದ್ಧ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂ ಪಿ ರೇಣುಕಾಚಾರ್ಯ, ಯತ್ನಾಳ್ ಬಗ್ಗೆ ನನಗೆ ಗೌರವ ಇದೆ. ವಾಜಪೇಯಿ ಸಚಿವ ಸಂಪುಟಗಳಲ್ಲಿ ಸಚಿವರಾಗಿದ್ದೆ …

Read More »

ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ.

ಬೆಳಗಾವಿ: ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ. ಇದೇನಾ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.‌ ನಗರದಲ್ಲಿ ಗುರುವಾರ ಖಾಸಗಿ ಹೊಟೆಲ್‌ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ, ಆದರೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಒಣಮೇವು, ಹಸಿ ಮೇವಿನ ಅಭಾವ ಉಂಟಾಗಿದ್ದು, …

Read More »

ಚಿಗುರಿ ಬಸಲ್ಲಿ ಬೆಂಕಿ ತಪ್ಪಿದ ದೊಡ್ಡ ಅನಾಹುತ…

ಹುಬ್ಬಳ್ಳಿ: ಹು – ಧಾ ಚಿಗರಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಬಾರಿ ಅನಾಹುತ. ಹೌದು ಧಾರವಾಡದಿಂದ ಹುಬ್ಬಳ್ಳಿಗೆ ಹೋಗುವ ಬಿಆರ್‌ಟಿಎಸ್ ಬಸ್ಸನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಬೆಚ್ಚಿಬಿದ್ದ ಪ್ರಯಾಣಿಕರು.ನವನಗರ ಹೆಚ್-ಡಿ ಬಿ‌ಆರ್‌ಟಿಎಸ್ ಎಪಿಎಂಸಿ ಸ್ಟಾಫ್ ಬಳಿ ಈ ಘಟನೆ ನಡೆದಿದೆ.ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್ಸ.ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಹೋಗುತಿತ್ತು. ಚಾಲಕ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ. ಹಿಂದೆ ಹೋಗೆ ನೋಡಿ ಚಿಗರಿ …

Read More »

ದೇಶದ ಸಂಪತ್ತಿನ ವಿಚಾರ & ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಭಾರಿ ಆಕ್ರೋಶ….

ದೇಶದ ಸಂಪತ್ತಿನ ವಿಚಾರ & ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಭಾರಿ ಆಕ್ರೋಶ ಮೊಳಗುತ್ತಿದೆ. ಅದರಲ್ಲೂ ಬಿಜೆಪಿ ಸೇರಿದಂತೆ ವಿರೋಧ ಪಕ್ಷ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಆರೋಪವನ್ನ ಮಾಡುತ್ತಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಫುಲ್ ಗರಂ ಆಗಿದ್ದಾರೆ. ಅರೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದು ಏಕೆ? ಅಂದಹಾಗೆ ಕಳೆದ ಕೆಲವು ದಿನದಿಂದ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ …

Read More »