Breaking News

ಕರ್ನಾಟಕ

ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯ….

ಮೈಸೂರು: ಗತ್ತು, ಗೈರತ್ತು, ಗಾಂಭೀರ್ಯದ ನಡಿಗೆ ಮೂಲಕ ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯವಾಗಿದೆ. ಇಡೀ ನಾಡು ಆತನ ಸಾವಿಗೆ ಕಣ್ಣೀರಿಟ್ಟಿದೆ. ಅದರಲ್ಲೂ ವಾಸಸ್ಥಾನವಾದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರದಲ್ಲಂತೂ ದುಃಖ ಮಡುಗಟ್ಟಿದೆ. ಈ ಆನೆ ಶಿಬಿರದಿಂದ ಅರ್ಜುನನ ನೆನಪು ಮಾಸಲು ಸಾಧ್ಯವೇ ಇಲ್ಲದಂತಾಗಿದೆ. ಬಳ್ಳೆ ಆನೆ ಶಿಬಿರ ದೈತ್ಯ ಗಜರಾಜರ ತಾಣ ಎಂದರೂ ತಪ್ಪಾಗುವುದಿಲ್ಲ. ಇವತ್ತಿಗೂ ಅರ್ಜುನ ಸೇರಿದಂತೆ ಈ ಹಿಂದೆ ಅಂಬಾರಿ ಹೊತ್ತಿದ್ದ ದ್ರೋಣ ಮತ್ತು …

Read More »

ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪ…

ಬೆಳಗಾವಿ : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ …

Read More »

ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆ…..

ಅಭಿವೃದ್ಧಿ ವೇಗವಾಗಿ ಸಾಗುತ್ತಿರುವಂತೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ನೋಡೋಕೆ ಆರೋಗ್ಯವಂತೆ ಕಾಣುವ ವ್ಯಕ್ತಿ ಕೂಡ ಮಾನಸಿಕವಾಗಿ ಜಠಿಲ ಸಮಸ್ಯೆಗಳನ್ನು ಹೊಂದಿರಬಹುದು. ಖಿನ್ನತೆಗೆ ಒಳಗಾಗಬಹುದು. ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆಗಳನ್ನು ತರುತ್ತವೆ. ಈಗ ಇಂತಹದ್ದೇ ಘಟನೆಯೊಂದು ಮಹಾನಗರದಲ್ಲಿ ನಡೆದುಹೋಗಿದೆ. ಅದೂ ಕೂಡ ಡಾಕ್ಟರ್ ಒಬ್ಬರ ಮನೆಯಲ್ಲಿ ಎನ್ನುವುದು ಮತ್ತಷ್ಟು ಆತಂಕ ಹೆಚ್ಚಿಸುವ ಅಂಶವಾಗಿದೆ. ರೈಲ್ವೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ತಮ್ಮ ಪತ್ನಿ ಮತ್ತು ಇಬ್ಬರು ಕೊಲೆ ಮಾಡಿದ್ದಲ್ಲದೆ, ತಾವೂ …

Read More »

ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ…

ಮಂಡ್ಯ: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ …

Read More »

ದಕ್ಷಿಣ ರೈಲ್ವೆಯು “ಅಮೃತ್ ಭಾರತ್ ಸ್ಟೇಷನ್” ಯೋಜನೆಯಡಿ ₹10.58 ಕೋಟಿ ಅಂದಾಜು ವೆಚ್ಚದಲ್ಲಿ ಈ ಪುನರಾಭಿವೃದ್ಧಿ ಕಾರ್ಯ….

ಮಂಗಳೂರು: ಮಂಗಳೂರು ಜಂಕ್ಷನ್‌ನ ಪುನರಾಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದ್ದು, ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಫೆಬ್ರವರಿ ಅಂತ್ಯದ ವೇಳೆಗೆ ಈ ಕಾರ್ಯವನ್ನು ಮುಗಿಸುವ ಭರವಸೆಯನ್ನು ನೀಡಿದೆ. ದಕ್ಷಿಣ ರೈಲ್ವೆಯು “ಅಮೃತ್ ಭಾರತ್ ಸ್ಟೇಷನ್” ಯೋಜನೆಯಡಿ ₹10.58 ಕೋಟಿ ಅಂದಾಜು ವೆಚ್ಚದಲ್ಲಿ ಈ ಪುನರಾಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇದು ಮುಂದಿನ ವರ್ಷದ ಅಂದರೆ 2024 ಫೆಬ್ರವರಿ ವೇಳೆಗೆ ಸಂಪೂರ್ಣವಾಗಿದೆ ಮುಕ್ತಯಾವಾಗಲಿದೆ. ಈ ವಿಭಾಗದ ಅಡಿಯಲ್ಲಿ ಇನ್ನೂ 15 ನಿಲ್ದಾಣಗಳು ಪುನರಾಭಿವೃದ್ಧಿ ಪ್ರಕ್ರಿಯೆಯ …

Read More »

ಪೂಜಾ ಗಾಂಧಿ ಅವರಿಗೆ ಕುವೆಂಪು ಅವರ ಮೇಲಿರುವ ಅಭಿಮಾನ ತಿಳಿದುಬಂದಿದೆ….

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಪೂಜಾ ಗಾಂಧಿ ಅವರ ಕನ್ನಡ ಪ್ರೀತಿಗೆ ಮನಸೋಲದವರಿಲ್ಲ. ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಅನ್ನ ನೀಡಿದ ಭಾಷೆ ಕನ್ನಡದ ಮೇಲಿನ ಅಭಿಮಾನದಿಂದ ಓದಲು ಹಾಗೂ ಬರೆಯಲು ಕಲಿತಿದ್ದಾರೆ. ಪೂಜಾ ಗಾಂಧಿ ಅವರಿಗೆ ಕನ್ನಡ ಮಾತ್ರವಲ್ಲ, ರಾಷ್ಟ್ರಕವಿ ಕುವೆಂಪು ಅವರ ಮೇಲೂ ಅಪಾರವಾದ ಗೌರವ ಹೊಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವ ಪೂಜಾ ಗಾಂಧಿ ಇತ್ತೀಚಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. …

Read More »

ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ…..

ನಟನೆ, ಸಿನಿಮಾ ನಿರ್ಮಾಣ, ಸಿನಿಮಾ ಬರವಣಿಗೆ ಎಂದು ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ ಆಗಿದ್ದಾರೆ. ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಧನಂಜಯ ಅವರನ್ನು ಸರ್ಕಾರ ಇತ್ತೀಚೆಗೆ ಆಯ್ಕೆ ಮಾಡಿತ್ತು. ವಿಧಾನಸೌಧ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಧನಂಜಯ್ ರಾಯಭಾರಿಯಾಗಿದ್ದು ಉತ್ಪನ್ನಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಮೊದಲ ಬಾರಿಗೆ …

Read More »

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ….

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದರ ಜೊತೆ ಈಗ ಮುಸ್ಲಿಂ ಸಮುದಾಯದ ಮುಖಂಡರು ಕೂಡ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಬಿಜೆಪಿ ನಾಯಕ ಎಡವಟ್ಟು ಮಾಡಿಕೊಂಡ್ರ? ಅನ್ನೋ ಅನುಮಾನ ಕೂಡ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಸ್ಲಿಂ ಸಮುದಾಯದ ಮುಖಂಡರು, ಈಗ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೊಚ್ಚಿಗೆದ್ದಿದ್ದು ಯಾಕೆ? ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ವರ್ತನೆ …

Read More »

ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ….

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಈ ಭಾಗದ ಜನರಿಗೆ ಸಂಜೀವಿನಿಯಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬೆಂಗಳೂರು ಹಾಗೂ ಮೈಸೂರು ಭಾಗದ ಆಸ್ಪತ್ರೆಗಳಿಗೆ ನೀಡುವ ಅನುದಾನದಂತೆ ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ ಎಂದು ಕಿಮ್ಸ್ ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ …

Read More »

ಸೊಂಟದಲ್ಲಿ ಚಾಕು ಇಟ್ಟುಕೊಂಡು ಕುಡುಕನೊಬ್ಬನ ಪುಂಡಾಟ…

ಧಾರವಾಡ : ಸೊಂಟದಲ್ಲಿ ಚಾಕು ಇಟ್ಟುಕೊಂಡು ಕುಡುಕನೊಬ್ಬ ಪುಂಡಾಟ ನಡೆಸಿ, ಬಾಳೆಹಣ್ಣು ವ್ಯಾಪಾರಸ್ಥರಿಂದ ಸಾರ್ವಜನಿಕವಾಗಿಯೇ ಗೂಸಾ ತಿಂದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹಣ್ಣಿನ ಮಾರುಕಟ್ಟೆಯಲ್ಲಿ ಕುಡುಕನೊಬ್ಬ ವಿಪರೀತ ಮದ್ಯ ಕುಡಿದು ಬಾಳೆಹಣ್ಣಿನ ವ್ಯಾಪಾರಿಯೊಂದಿಗೆ ಜಗಳ ತೆಗೆದಿದ್ದ. ಬಾಳೆಹಣ್ಣು ವ್ಯಾಪಾರಿಗಳು ಆತನಿಗೆ ಸಾರ್ವಜನಿಕವಾಗಿಯೇ ಗೂಸಾ ಸಹ ಕೊಟ್ಟಿದ್ದಾರೆ. ಇಷ್ಟಕ್ಕೇ ಸುಮ್ಮನಾಗದ ಕುಡುಕ ಅಲ್ಲೇ ನಿಂತು ಅವಾಚ್ಯ ಶಬ್ದಗಳಿಂದ ಬಾಳೆಹಣ್ಣು ವ್ಯಾಪಾರಿಯೊಬ್ಬನನ್ನು ಬೈಯುತ್ತಿದ್ದ. ಅಲ್ಲದೇ ಸೊಂಟದಲ್ಲಿ ಚಾಕು ಸಹ ಇಟ್ಟುಕೊಂಡಿದ್ದ. ಆತ …

Read More »