Breaking News

ಕರ್ನಾಟಕ

ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ….

ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಎಂದೇ ಕರೆಯಲ್ಪಡುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಇದೀಗ ಹಂತ-ಹಂತವಾಗಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಇದರ ಮಧ್ಯೆ ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಂದಹಾಗೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸುವ ಯೋಜನೆ, ಚಳ್ಳಕೆರೆಯ ನಾಯಕನಹಟ್ಟಿ ಬಳಿ ಡಿಆರ್‌ಡಿಓ ಪ್ರಾಜೆಕ್ಟ್, ಚಿತ್ರದುರ್ಗ ಮೂಲಕ (ತುಮಕೂರು- ಚಿತ್ರದುರ್ಗ- …

Read More »

ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಾಗ್ದಾಳಿ….

ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಂಶಾಡಳಿತ ರಾಜ್ಯ ಹಾಗೂ ರಾಷ್ಟ್ರವನ್ನೇ ಸರ್ವನಾಶ ಮಾಡಲಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಒಬ್ಬ ನಾಯಕನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನೀಡುಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದರು. ಹೊಸದಾಗಿ ನೇಮಕಗೊಂಡಿರುವ …

Read More »

ಕಾರು ಹಾಗೂ ಬಿಎಂಟಿಸಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ನಡೆದಿದೆ….

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಬಿಎಂಟಿಸಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ.ಬಿಎಂಟಿಸಿ ಬಸ್‌ ರಿಂಗ್‌ರೋಡ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಈ ವೇಳೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ i20 ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ಹೊರ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

Read More »

ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ: ಪ್ರಿಯಾಂಕ್ ಖರ್ಗೆ.

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ತೆಲಂಗಾಣದಲ್ಲಿ ಬಿಆರ್ ಎಸ್ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆ ಆಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಜಾತಿ ಜಾತಿಗಳ ಮಧ್ಯೆ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ನಮ್ಮದು …

Read More »

ಎರಡೂ ಸರ್ಕಾರಗಳು ರೈತರು ಆತ್ಮಹತ್ಯೆ ಮಾಡಿಕೊಳ್ಳಲಿ ಎನ್ನುವ ಆಲೋಚನೆಯಲ್ಲಿರುವ ಹಾಗೆ ಕಾಣುತ್ತಿದೆ…

ಬೆಂಗಳೂರು: ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಡಿಸೆಂಬರ್‌ 4ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ತುರ್ತು ಬರ ಪರಿಹಾರವೆಂದು ಭಿಕ್ಷೆಯ ರೂಪದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ರಾಜ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 2,000 ರೂ. ಕೊಡುವುದಾಗಿ ಹೇಳಿದ್ದಾರೆ. ಆದರೆ, ಕಂದಾಯ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ…..

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಜಿಎಸ್‌ಟಿ ಬಾಕಿ ಕೊಡಿ ಎಂದು ಕೇಳಿದ್ದಾರೆ. ಐಜಿಎಸ್‌ಟಿ ತಾತ್ಕಾಲಿಕ ಪರಿಹಾರದ ಬಗ್ಗೆ ಸ್ಪಷ್ಟೀಕರಣ ಮತ್ತು ಪರಿಷ್ಕೃತ ಕಾರ್ಯವಿಧಾನವನ್ನು ಕೋರಿದ್ದಾರೆ.ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಳೆದ ವರ್ಷ ಡಿಸೆಂಬರ್ 26 ರಂದು ಐಜಿಎಸ್‌ಟಿ ಬಾಕಿಯಲ್ಲಿನ ಕೊರತೆಯನ್ನು ಸರಿದೂಗಿಸಲು ಐಜಿಎಸ್‌ಟಿ ಇತ್ಯರ್ಥದ 798 ಕೋಟಿ ರೂ.ಗಳನ್ನು ಮುಂಗಡ ಹಂಚಿಕೆಯಿಂದ ಹೊಂದಿಸಲಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.ಇಲ್ಲಿಯವರೆಗೆ …

Read More »

ಕೆ ಎಸ್‌ ಈಶ್ವರಪ್ಪ ಅವರು ಮತ್ತೆ ಬಿಜೆಪಿ ಜಗದೀಶ್‌ ಶೆಟ್ಟರ್‌ ಬರುತ್ತಾರೆ ಎಂದು ಹೇಳಿದ್ದಾರೆ….

ವಿಜಯಪುರ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೆ ಎಸ್‌ ಈಶ್ವರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್‌ ಈಶ್ವರಪ್ಪ ಅವರು ಮತ್ತೆ …

Read More »

ಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭ….

ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆ ಮೇಲ್ ಬಂದ ಬೆಂಗಳೂರು ನಗರದ 48 ಶಾಲೆಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿವೆ. ಈ ಸಂಬಂಧ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಮೇಲ್‌ಗಳನ್ನು ವಿದೇಶದಿಂದ ‘khharijites@beeble.com’ ಎಂಬ ಇಮೇಲ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಬೀಬಲ್ ಥರ್ಡ್‌ ಪಾರ್ಟಿ ಆಕ್ಸೆಸ್‌ ಇಲ್ಲದ ಖಾಸಗಿ ಸುರಕ್ಷಿತ ಇಮೇಲ್ ಸೇವೆಯಾಗಿದೆ. ಆದ್ದರಿಂದ ಬೆದರಿಕೆ ಮೇಲ್ …

Read More »

ಹಣವಿಲ್ಲದೆ ಇದ್ದರೆ ಪಾಪರ್ ಆಗಿದ್ದೇವೆ ಎಂದು ಘೋಷಿಸಲಿ: ಆರ್.ಅಶೋಕ್.

ಚಿಕ್ಕಬಳ್ಳಾಪುರ: ಹಿಂದೆ ನಮ್ಮ ಬಿಜೆಪಿ ಸರಕಾರ ಇದ್ದಾಗ ಕೇಂದ್ರ ಸರಕಾರದ ಹಣಕ್ಕಾಗಿ ಕಾಯದೇ ಒಂದೇ ತಿಂಗಳಲ್ಲಿ ಬರ ಪರಿಹಾರಕ್ಕಾಗಿ ಹಣ ಬಿಡುಗಡೆ ಮಾಡಿದ್ದೆವು. ಆದರೆ ಈಗಿನ ಸರಕಾರ ಹಣ ಬಿಡುಗಡೆ ಮಾಡದೇ ಕೇವಲ ಮೊಸಳೆ ಕಣ್ಣೀರು ಹಾಕುತ್ತಿದೆ. ಹಣವಿಲ್ಲದೆ ಇದ್ದರೆ ಪಾಪರ್ ಆಗಿದ್ದೇವೆ ಎಂದು ಘೋಷಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು. ಬರ ವೀಕ್ಷಣೆಗೆ ಆಗಮಿಸಿದ್ದ ಅವರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೇವಲ ಒಂದು ಸಾವಿರ …

Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು..

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ (ಡಿಸೆಂಬರ್‌ 01) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 23 ದಿನಗಳ ಅವಧಿಯಲ್ಲಿ 2 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ (ಡಿಸೆಂಬರ್‌ 01) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ …

Read More »