Breaking News

ಕರ್ನಾಟಕ

ಸುವರ್ಣ ವಿಧಾನಸೌಧ ಚಳಿಗಾಲದ ಅಧಿವೇಶನಕ್ಕೆ ರೆಡಿ….

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 4ರಿಂದ 15ರ ತನಕ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಚಳಿಗಾಲದ ಅಧಿವೇಶನದ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಡಿಸೆಂಬರ್ 4ರಂದು ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ನಾಯಕರು ಆಯ್ಕೆಯಾದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಬೆಳಗಾವಿ …

Read More »

ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು….

ಬಾಗಲಕೋಟೆ: ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ …

Read More »

ಅವಳಿ ನಗರ ವ್ಯಾಪ್ತಿಯಲ್ಲಿ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ ದಾಳಿ….

ಹುಬ್ಬಳ್ಳಿ: ಅವಳಿ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಸತತವಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವುಗಳಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ …

Read More »

ವೃದ್ಧೆಯೋರ್ವಳಿಗೆ ಬೈಕ್ ನಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಒಳಪಡಿಸಿ ಪರಾರಿಯಾಗಿದ್ದ ನೋಂದಣಿ ಸಂಖೆ ಇಲ್ಲದ ಬೈಕ್ ಸವಾರನನ್ನು ಪತ್ತೆ ಹಚ್ಚಿ -ಆರೋಪಿಗಳು ಪೊಲೀಸ್ ವಶಕ್ಕೆ….

ಧಾರವಾಡ : ವೃದ್ಧೆಯೋರ್ವಳಿಗೆ ಬೈಕ್ ನಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಒಳಪಡಿಸಿ ಪರಾರಿಯಾಗಿದ್ದ ನೋಂದಣಿ ಸಂಖೆ ಇಲ್ಲದ ಬೈಕ್ ಸವಾರನನ್ನು ಪತ್ತೆ ಹಚ್ಚಿ ಬೈಕ್ ಹಾಗೂ ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಸಂಚಾರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ತೇಜಸ್ವಿನಗರ ಹಾಗೂ ಗಾಂಧಿನಗರ ಹೋಗುವ ರಸ್ತೆಯಲ್ಲಿ ಬರುವ ಬಂಡೆಮ್ಮ ಗುಡಿ ಹತ್ತಿರ ನವೆಂಬರ್ 15 ರಂದು ವೃದ್ಧೆಗೆ ಬೈಕ್ ಸವಾರ ಡಿಕ್ಕಿ ಹೊಡೆದು ಪರಾರಿಯಾಗಿದ್ದು ವೃದ್ಧರ ತೀವೃ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು …

Read More »

ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ…..

ಚಿಕ್ಕಮಗಳೂರು: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದರೆ, ಹಾಲಿ ಸಂಸದರಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಟಿಕೆಟ್‌ ಗಾಗಿ ಕಮಲ ಪಾಳಯದಲ್ಲೇ ತೀವ್ರ ಪೈಪೋಟಿ ಶುರುವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮಧ್ವರಾಜ್ ಪ್ರಚಾರ ಆರಂಭಿಸಿದ್ದು, ಟಿಕೆಟ್ …

Read More »

ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ: ಬಿ.ವೈ ವಿಜಯೇಂದ್ರ.

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ‌ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪರಶುರಾಮ ಸೃಷ್ಟಿಯ ನಾಡು, ಕಂಬಳದ ಬೀಡು ಮಂಗಳೂರಿನ ಜನರಿಗೆ ನಮಸ್ಕಾರಗಳು. ನನಗೆ ಯಡಿಯೂರಪ್ಪ ಮಗ ಅಂತ ಜವಾಬ್ದಾರಿ ಕೊಟ್ಟಿಲ್ಲ. ಹೈಕಮಾಂಡ್ ಕೆಲಸ ಗುರುತಿಸಿ ಈ ಜವಾಬ್ದಾರಿ ಕೊಟ್ಟಿದೆ. …

Read More »

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ತಾವು ಕೂಡ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ…

ಕಾರವಾರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಹಂಚಿಕೆಯಾಗುವ ಟಿಕೆಟ್‌ಗಾಗಿ ಬಾರಿ ಪೈಪೋಟಿ ಕೂಡ ಶುರುವಾಗಿದೆ. ಆದರೆ ಉತ್ತರ ಕನ್ನಡದಲ್ಲಿ ಅಸ್ತಿತ್ವಕ್ಕೂ ಪರದಾಡುತ್ತಿರುವ ಜೆಡಿಎಸ್ ಪಕ್ಷದ ಮೂಲಕ ಮೈತ್ರಿ ಟಿಕೆಟ್ ಗಿಟ್ಟಿಸಿಕ್ಕೊಳ್ಳಲು ಪಕ್ಷದ ನಾಯಕರುಗಳಲ್ಲಿ ಭಾರೀ ಪೈಪೋಟಿ ಶುರುವಾಗಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾದಂತೆ ಉತ್ತರಕನ್ನಡದಲ್ಲಿಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್ಚಾಗಿ ಕಾಣಿಸಿಕ್ಕೊಳ್ಳುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ …

Read More »

ಈ ವರ್ಷ ಕನ್ನಡ ಸಿನಿಮಾಗಳಿಗೆ ನಿರಾಸೆ ಮೂಡಿಸಿದ ವರ್ಷ….

ಇನ್ನೇನು 2023 ಮುಗೀತಾ ಬಂತು. ಇನ್ನೊಂದು 40 ದಿನ ಕಳೆದರೆ, ಹೊಸ ವರ್ಷಕ್ಕೆ ಕಾಲಿಡುತ್ತೇವೆ. 2024 ಅನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳುತ್ತೇವೆ. ಆದರೆ, ಈ ವರ್ಷ ಕನ್ನಡ ಸಿನಿಮಾಗಳಿಗೆ ನಿರಾಸೆ ಮೂಡಿಸಿದ ವರ್ಷ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಒಂದೇ ಒಂದು ಸಿನಿಮಾ ದೊಡ್ಡ ಮಟ್ಟಕ್ಕೆ ಸದ್ದು ಮಾಡಲಿಲ್ಲ.ಕಳೆದ ವರ್ಷ ಹೀನಾಯ ಸ್ಥಿತಿಯಲ್ಲಿ ಬಾಲಿವುಡ್ ಮಂದಿಗೆ 2023 ಲಕ್ಕಿ ಅಂತ ಸಾಬೀತಾಗಿದೆ. ಆದರೆ, ದಕ್ಷಿಣ ಭಾರತದ ಯಾವುದೇ ಭಾಷೆಯ ಸಿನಿಮಾಗಳು ಪ್ಯಾನ್ …

Read More »

ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ….

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇಕಡಾ 80ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಇನ್ನು ತಾಲೂಕಿನ 48 ಗ್ರಾಮಗಳು ಪ್ಲೋರೈಡ್‌ನಿಂದ ಕೂಡಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭರವಸೆ …

Read More »

ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ…

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲಿ ಕಾಂಗ್ರೆಸ್‌ ಪಾಳಯದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.ಈ ಕುರಿತು ಸಿದ್ದರಾಮಯ್ಯ ಅವರ ಜೊತೆಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕದ ಕುರಿತು ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್‌, ನಿಗಮ ಮಂಡಳಿ ನೇಮಕ …

Read More »