Breaking News

ಕರ್ನಾಟಕ

ಕೆಎಸ್‌ಆರ್‌ಟಿಸಿ ಬಸ್‌ ಜಮೀನಿಗೆ ನುಗ್ಗಿದೆ…..

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಒಂದು ಹವಾ ಇಟ್ಟಿವೆ, ಹಾಗೇ ಹೊರ ರಾಜದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಅಂದ್ರೆ ಒಂದು ಬೆಲೆ ಇದೆ. ಆ ಲೆಕ್ಕಾಚಾರದಲ್ಲಿ ನೋಡುವುದಾದರೆ, ಕನ್ನಡಿಗರ ನಾಡಿನ ಬಸ್‌ಗಳು ಉತ್ತಮ ಗುಣಮಟ್ಟ ಕೂಡ ಕಾಯ್ದುಕೊಂಡಿವೆ. ಆದ್ರೆ ಹೀಗೆ ಉತ್ತಮ ಹೆಸರು ಪಡೆದಿರುವ ಕೆಎಸ್‌ಆರ್‌ಟಿಸಿ ಸಂಸ್ಥೆಗೆ, ಕೆಲವು ಚಾಲಕರು ಮಾತ್ರ ಸಮಸ್ಯೆ ಮಾಡುತ್ತಿದ್ದಾರೆ. ತಮ್ಮ ಮನಸ್ಸಿಗೆ ಬಂದಂತೆ ಬಸ್ ಓಡಿಸಿ, ಪ್ರಯಾಣಿಕರ ಜೀವ ಬಾಯಿಗೆ ಬರಿಸುತ್ತಿದ್ದಾರೆ. ಅಂದಹಾಗೆ ಇಂಥದ್ದೇ ಘಟನೆಯೊಂದು ಇಂದು …

Read More »

ಹುಬ್ಬಳ್ಳಿ ಧಾರವಾಡ ಪೋಲಿಸರ ನೋಟಿಸ್ ಕಥೆ…ಪೊಲೀಸರ ನೋಟಿಸ್ ಗೆ ಒಂದು ಬಲಿ .. ಇನ್ನಷ್ಟು ಬಲಿ ಕಮಿಷನರ್ ಮೇಡಂ…..? ಕುಟುಂಬದ ಆರೋಪ..! Big Exclusive

ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಪೋಲಿಸರ ಸಂಧಾನದಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.ನಿಖಲ್ 28 ಆತ್ಮಹತ್ಯೆ ಮಾಡಿಕೊಂಡ ಪತಿ ಆಗಿದ್ದಾನೆ.11 ತಿಂಗಳ ಹಿಂದೆ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದ.ಆದರೆ ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಮಾಡಲಾಗಿದೆ.ಇದರಿಂದಾಗಿ ತವರು ಮನೆಗೆ ಹೋಗಿದ್ದ ಪ್ರೀತಿ.ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ನಿನ್ನೆ ಕೇಶ್ವಾಪುರ ಠಾಣೆಗೆ …

Read More »

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಬುಕ್ಕಿಗಳ ಬಂಧನ…..

ಹುಬ್ಬಳ್ಳಿ: ಈಗ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂದೆ ಜೋರಾಗಿದೆ. ಆದರೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಮಿಂಚಿನ ವೇಗದಲ್ಲಿ ದಾಳಿ ಮಾಡಿ ಇಂದು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಕಮರಿಪೇಟ ಪೊಲೀಸ್ ಠಾಣೆಯ ವ್ಯಾಪ್ತಿಯ ತೋರವೀಹಕ್ಕಲ ಹತ್ತಿರ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಡ ದೇಶಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವವರ ಮೇಲೆ ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ಮಾಡಿ 03 …

Read More »

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ: ಯಡಿಯೂರಪ್ಪ.

ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಬಣಗಳ ಜಗ್ಗಾಟ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ.ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ಜಲ ನ್ಯಾಯಮಂಡಳಿ ಮುಂದೆ ನೀರಿನ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ …

Read More »

ಹುಬ್ಬಳ್ಳಿ: ಚಿರತೆ ಹಾವಳಿಗೆ ಕಲಘಟಗಿಯ ಕಾಡಂಚಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿರತೆಗಳ ಗುಂಪೊಂದು ನಡೆಸಿದ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬುವರಿಗೆ ಸೇರಿದ ಎತ್ತು ಚಿರತೆಗಳ ದಾಳಿಗೆ ಬಲಿಯಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಸೇರಿ ದಾಳಿ ನಡೆಸಿ ಎತ್ತಿನ್ನ ಬಲಿ ಪಡೆದಿವೆ. ರಾತ್ರಿ ಹೊಲದ ಮನೆಯಲ್ಲಿ ಕಟ್ಟಿ ಹಾಕಿದ್ದ ಎರಡು ಎತ್ತುಗಳಲ್ಲಿ …

Read More »

ಹಾಸನದ ಸೌದರ್ಯ ನೋಡಲು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ

ಹಾಸನ: ಅದಿ ದೇವತೆ ಹಾಸನಾಂಬೆ ದೇವಲಾಯವನ್ನು ಪ್ರತಿವರ್ಷದಂತೆ ಈವರ್ಷವು ಕೂಡ ನವೆಂಬರ್ ೨ರ ಗುರುವಾರದಂದು ಗರ್ಭಗುಡಿ ಬಾಗಿಲು ತೆಗೆಯುತ್ತಿದ್ದು, ಈಗಾಗಲೇ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಂತಿಮ ಸ್ಪರ್ಶ ನೀಡಿದ್ದಾರೆ. ಇನ್ನು ಹಾಸನ ನಗರದ ಉದ್ದಲಕ್ಕೂ ಬಣ್ಣ ಬಣ್ಣದ ಲೈಟಿಂಗ್ಸ್ ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ. ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಎಂದು ಕರೆಯುತ್ತೇವೆ. ಇದೆ ವೇಳೆ ಹಾಸನಾಂಬೆ ಬಾಗಿಲನ್ನು ವರ್ಷಕ್ಕೆ ಒಂದು ಬಾರಿ ಮಾತ್ರ ತೆಗೆದು ಭಕ್ತರಿಗೆ ದರ್ಶನ ನೀಡಲಿದೆ. …

Read More »

ಐದು ತಿಂಗಳಿನಲ್ಲಿ ಎಲ್ಲಾ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ….

ಶಿವಮೊಗ್ಗ: ಆ ರಮೇಶ್ ಜಾರಕಿಹೊಳಿ, ಸಿನಿಮಾ ನಟ ಸಿಪಿ ಯೋಗೀಶ್ವರ್ ಅಂಥವರು ಒಂದೆರಡು ಜನ ಸೇರಿಕೊಂಡು ಆಪರೇಷನ್ ಕಮಲ ಅಂತ ಹೊರಟಿದ್ದಾರೆ. ಅಂದು ಯಡಿಯೂರಪ್ಪ ಹಾಗೂ ಅವರ ಮಗ ಬಿ ವೈ ವಿಜಯೇಂದ್ರ ಹಡಬೆ ದುಡ್ಡಿತ್ತು ಆಪರೇಷನ್ ಕಮಲ ಮಾಡಿದರು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬುಧವಾರ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯವರಿಗೆ, ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು …

Read More »

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನಲ್ಲಿ ದಿನೇ ದಿನೇ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನದವು ರಾಜ್ಯ ಸರ್ಕಾರದ ಆಡಳಿತದ ಮೇಲೆ ತೀವ್ರ ಪರಿಣಾಯ ಬೀರುತ್ತಿದೆ. ಈಗಾಗಲೇ ಎರಡುವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ …

Read More »

ಜಗನ್ನಾಥ ಭವನದಲ್ಲಿ ಬಿಜೆಪಿ ಶಾಸಕರ ಸಭೆ….

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, …

Read More »

ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್…

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ …

Read More »