Breaking News

ಕರ್ನಾಟಕ

ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳು, ಮನವಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ವಿಲೇವಾರಿ: ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳು, ಮನವಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸ್ವೀಕೃತವಾದ ಮನವಿಗಳು, ಅರ್ಜಿಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಅಧಿಕಾರಿಗಳಿಗೆ ಮನವಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸುವಂತೆ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾ …

Read More »

ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಭೂಮಿಗಳು ಅಲ್ಲಲ್ಲಿ ಒತ್ತುವರಿ ಆಗಿದ್ದರ ವಿರುದ್ಧ ಸಮರ…

ಬೆಂಗಳೂರು: ಬೃಹದಾಕಾರವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಭೂಮಿಗಳು ಅಲ್ಲಲ್ಲಿ ಒತ್ತುವರಿ ಆಗಿದ್ದರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ಸಮರ ಮುಂದುವರಿಸಿದೆ. ಇದೀಗ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅತಿಕ್ರಮಣವಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಪ್ರಾಧಿಕಾರ ಮರಳಿ ಪಡೆದಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ₹25 ಕೋಟಿ ಮೌಲ್ಯದ 05 ಎಕರೆ ಭೂಮಿ ಒತ್ತುವರಿ ಆಗಿತ್ತು. ಮಂಗಳವಾರ ಒತ್ತುವರಿ ವಿರುದ್ಧ ಕ್ರಮ ಕೈಗೊಂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅತಿಕ್ರಮಣ ತೆರವುಗೊಳಿಸಿ …

Read More »

‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ….

ಪೋಷಕ ನಟರಾಗಿದ್ದ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ. ಲಿಂಗರಾಜ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್.ಇತ್ತೀಚೆಗಷ್ಟೇ ರಿಲೀಸಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.ಇದರ ಬೆನ್ನಲ್ಲೇ ಈಗ ‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ. ನಟ ಅಭಿಷೇಕ್ ಅಂಬರೀಶ್ ಅವರು ಈ ಹಾಡನ್ನು ರಿಲೀಸ್ ಮಾಡಿ ಮಾತನಾಡುತ್ತ ರಾಜಯೋಗ ಚಿತ್ರದ ಮೊದಲ ಹಾಡನ್ನು ನೋಡಿದೆ. ನನ್ನ ಕಡೆಯಿಂದ ಇಡೀ ಚಿತ್ರತಂಡಕ್ಕೆ ಶುಭ …

Read More »

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಗ್ರಸ್ಥಾನ..

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರು ತಿಂಗಳಿನಿಂದ ವಿಶ್ವದ ಅತ್ಯಂತ ಸಮಯದ ವಿಮಾನ ನಿಲ್ದಾಣವಾಗಿ ಅಗ್ರಸ್ಥಾನದಲ್ಲಿದೆ ಎಂದು ಸಿರಿಯಮ್‌ನ ‘ದಿ ಆನ್-ಟೈಮ್ ಪರ್ಮೆನ್ಸ್ ಮಾಸಿಕ ವರದಿ’ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸರಿಯಾಗಿ ನಿರ್ಗಮಿಸುವ ಅನುಭವವನ್ನು ಉಳಿಸಿಕೊಂಡಿದೆ, ಜುಲೈ ತಿಂಗಳಿನಲ್ಲಿ 87.51 ರಷ್ಟು ಸಮಯಪಾಲನೆ, ಆಗಸ್ಟ್‌ನಲ್ಲಿ 89.66 ಮತ್ತು ಸೆಪ್ಟೆಂಬರ್‌ನಲ್ಲಿ ಶೇಕಡಾ 88.51 ಸಮಯ ಪರಿಪಾಲನೆ ಮಾಡಿದೆ …

Read More »

ಅಂಗನವಾಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ….

ಕುಂದಗೋಳ : ಮತಕ್ಷೇತ್ರದ ಕೊಂಕಣಕುರಹಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 10 ಲಕ್ಷ ರೂಪಾಯಿ ಅನುದಾನದ ಅಡಿ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಇ‌.ಪಾಟೀಲ್ ನೆರವೇರಿಸಿದರು. ನಂತರ ಚಾಕಲಬ್ಬಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಖಾಸಗಿ ಕಂಪನಿಯ ಸಿ.ಎಸ್.ಆರ್ ಅನುದಾನದ 40 ಲಕ್ಷ ರೂಪಾಯಿ ವೆಚ್ಚದಲ್ಲಿ 3 ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಜನರನ್ನು …

Read More »

ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ…

ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ‘ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಕಾರ್ಯಕರ್ತರಿಗೆ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. ‘ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ’ ಎಂದು ತಿಳಿಸಿದ್ದಾರೆ.

Read More »

ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಟೆನಿಸ್ ಪಂದ್ಯಾವಳಿಗೆ ಚಾಲನೆ…..

ಧಾರವಾಡ : ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗೆ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.ಧಾರವಾಡ ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಪೆವಿಲಿಯನ್ ನಲ್ಲಿ ಅಂತರಾಷ್ಟ್ರೀಯ ಟೆನಿಸ್ ಫೆಡರೇಷನ್ ಹಾಗೂ ಧಾರವಾಡ ಲಾನ್ ಟೆನಿಸ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಸ್ವತಃ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಟೆನಿಸ್ ಆಟ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ …

Read More »

ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ ಅವರು ಮಾಡಿದ್ದೇ ಆಟ: ಸಂತೋಷ ಲಾಡ್

ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಮಾಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ …

Read More »

ಕೆಲವೊಂದಿಷ್ಟು ಪೊಲೀಸರು ಕ್ರಿಕೆಟ್ ಬುಕ್ಕಿಗಳಿಗೆ ಸಾತ್…! ಆದರೆ ಸಿಸಿಬಿ ಪೊಲೀಸರು ಹೆಡೆ ಮುರಿ ಕಟ್ಟುವಲ್ಲಿ ಯಶಸ್ವಿ…

ಹುಬ್ಬಳ್ಳಿ ಧಾರವಾಡ ದುರ್ಗಾ ಕಾಲೋನಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನ ಬಂದಿಸಿದ್ದು. ಈ ಕುರಿತು ಧಾರವಾಡ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಹುಬ್ಬಳ್ಳಿಯ ಅಲ್ತಾಪ ಪ್ಲಾಟ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂದಿಸಿದ್ದು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ.. ಈ ಎಲ್ಲ ಪ್ರಕರಣಗಳ ಪತ್ತೆ ಹಚ್ಚುವಲ್ಲಿ …

Read More »

ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಬಾಲಕ ಸಾವು…

ಧಾರವಾಡ: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ತಾಲೂಕಿನ ಸಲಕಿನಕೊಪ್ಪದ ಬಳಿ ಸಂಭವಿಸಿದೆ. ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಧಾರವಾಡ ತಾಲೂಕಿನ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೇಲ್ ಬಳಿ ಕಾರು ನಿಲ್ಲಿಸಿದ್ದರು. ಉಪಹಾರ ಮುಗಿಸಿ ಬಾಲಕ ಕಾರು ಬಳಿ ನಿಂತ ಸಮಯದಲ್ಲಿ, …

Read More »