Breaking News

ಕರ್ನಾಟಕ

ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲ ಆತ್ಮಹತ್ಯೆ..

ರಾಯಚೂರು: ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ. ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.

Read More »

ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ…..

ಕುಂದಗೋಳ : ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ ನಡೆಯಿತು. ಈ ವೇಳೆ ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ತಾಲೂಕಿನಾದ್ಯಂತ ದಲಿತರಿಗೆ ಎಲ್ಲಿಯಾದರೂ ಅವಮಾನ ಹಾಗೂ ಕುಂದು ಕೊರತೆಯಾದರೆತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು. ತಾಲೂಕಿನಲ್ಲಿ ದಲಿತರಿಗೆ ಸಮಸ್ಯೆ ಅಂತಾ ಬಂದಾಗ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಸವರಾಜ ರೇವಡೆಣ್ಣನ್ನವರ, ಮಂಜುನಾಥ ಸಣ್ಣಪ್ಪನವರ, …

Read More »

80 ಪ್ರಯಾಣಿಕರು ಅಪಾಯದಿಂದ ಪಾರು….

ಕಾರವಾರ: ಕಾರವಾರ ಸಾರಿಗೆ ಸಂಸ್ಥೆಯ ಬಸ್​ವೊಂದರ ಟಯರ್ ಸ್ಫೋಟಗೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 80 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರವಾರದ ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಬಳಿ ಇಂದು ಘಟನೆ ನಡೆಯಿತು.ಕೆಎ 31 ಎಫ್ 1252 ನೋಂದಣಿಯ ಬಸ್​ ಕಾರವಾರದಿಂದ ಮಲ್ಲಾಪುರ ಕದ್ರಾ ಮಾರ್ಗವಾಗಿ ಸಂಚರಿಸುತ್ತಿತ್ತು. ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಮೇಲೆ ಮುಂದಿನ ಟಯರ್ ಸ್ಪೋಟಗೊಂಡಿದೆ. ಚಾಲಕನ ಅಪಘಾತ ಸಂಭವಿಸುವ ಹಂತದಲ್ಲಿದ್ದ ಬಸ್ ಅನ್ನು ತಕ್ಷಣ ಮುಂದೆ ಹೋಗಿ ನಿಲ್ಲಿಸಿದ್ದಾರೆ. …

Read More »

ಬಿಜೆಪಿ ಬಿಡುವ ಸ್ಥಿತಿ ಬಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಬೈರತಿ ಬಸವರಾಜ..

ಬೆಂಗಳೂರು: ಬಿಜೆಪಿ ಬಿಡುವ ಸ್ಥಿತಿ ಬಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆಯೇ ಹೊರತು ಮರಳಿ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಶಾಸಕ ಬೈರತಿ ಬಸವರಾಜ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಹೋಗಲ್ಲ. ಯಾರೋ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಯಾವ ಕಾರಣಕ್ಕೂ ನಾನು ಪಕ್ಷ ಬಿಡಲ್ಲ. ಪಕ್ಷ ಬಿಡುವ ಸಂದರ್ಭ ಬಂದರೆ ನಾನು ನಿವೃತ್ತಿ ಆಗಿ ಮನೆಯಲ್ಲಿ‌ ಇರುತ್ತೇನೆಯೇ ಹೊರತು ಕಾಂಗ್ರೆಸ್ …

Read More »

ಮಳೆ ಮರೆಯಾಗಿ ಮತ್ತಷ್ಟು ಸಂಕಷ್ಟ….

ಶಿವಮೊಗ್ಗ :ಕಳೆದ 25 ದಿನಗಳಿಂದ ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಕಾಣೆಯಾಗಿದೆ. ಇದರಿಂದಾಗಿ ಈಗಾಗಲೇ ಬಿತ್ತನೆ ಮಾಡಿರುವ ಮೆಕ್ಕೆಜೋಳ, ಭತ್ತ ಬಾಡಿ ಹೋಗುತ್ತಿದೆ. ರೈತರು ಸ್ಪ್ರಿಂಕ್ಲರ್ ಜೆಟ್ ನೀರಿನ ಮೂಲಕ ಬೆಳೆಯನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಬಿತ್ತನೆ ಕಾರ್ಯ ಮಾಡಿರುವ ರೈತರಲ್ಲಿ ಆತಂಕದ ಛಾಯೆ ಮೂಡಿದೆ. ಅತಿ ಹೆಚ್ಚು ಮೆಕ್ಕೆಜೋಳ ಬೆಳೆದಿರುವ ಶಿಕಾರಿಪುರ, ಸೊರಬ, ಶಿವಮೊಗ್ಗ ಗ್ರಾಮಾಂತರ ತಾಲೂಕಿನ ರೈತರು ಬೆಳೆ ಬಾಡಿ ಹೋಗುತ್ತಿರುವುದನ್ನು ನೋಡಿ‌ ಕಣ್ಣೀರು ಹಾಕುತ್ತಿದ್ದಾರೆ. ಸರಿಸುಮಾರು …

Read More »

ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್…….

ಮೈಸೂರು: ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್ (African Spain fever) ಕಾಣಿಸಿಕೊಂಡ ಹಿನ್ನೆಲೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಟಿ ರವಿಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ ಪ್ರಸನ್ನ ಮತ್ತು ತಂಡ ಕೇರಳ ಮತ್ತು ಕರ್ನಾಟಕ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ …

Read More »

ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರ…

ಬೆಂಗಳೂರು: ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ಕೊಟ್ಟಿದ್ದಾರೆ. ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು …

Read More »

ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಅವರು ಗ್ರಾಮದಿಂದ ಹೊರಗಡೆ ಇರಿಸಲಾಗಿದ್ದ ಶಿಶು ಮತ್ತು ಬಾಣಂತಿಯನ್ನು ರಕ್ಷಣೆ…

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಬ್ಬ ಬಾಣಂತಿಯನ್ನು ಗ್ರಾಮದಿಂದ ಹೊರಗಿಡಲಾಗಿದ್ದು, ನ್ಯಾಯಾಧೀಶರು ಮಧ್ಯಪ್ರವೇಶಿಸಿ ಮೌಢ್ಯಾಚರಣೆಗೆ ತಡೆಯೊಡ್ಡಿದ ಘಟನೆ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾಣಂತಿಯನ್ನು ಹೊರಗಿಟ್ಟಿರುವ ಬಗ್ಗೆ ಬುಧವಾರ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ನ್ಯಾಯಾಲಯದ …

Read More »

ಮೀಸಲು ಅರಣ್ಯದೊಳಗೆ ಪರವಾನಗಿ ಪಡೆದ ಬಂದೂಕಿನಿಂದ ಕಡವೆ ಬೇಟೆ…

ಬೆಳ್ತಂಗಡಿ (ದಕ್ಷಿಣ ಕನ್ನಡ) : ಮೀಸಲು ಅರಣ್ಯದೊಳಗೆ ಪರವಾನಗಿ ಪಡೆದ ಬಂದೂಕಿನಿಂದ ಕಡವೆ ಬೇಟೆಯಾಡಿ ಸಾಗಿಸುವ ವೇಳೆ ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಆರೋಪಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಜಾರಪ್ಪ ಗೌಡರ ಮಗ ಎಸ್.ಜೆ ಸಂದೇಶ್(37), ಮಣಿಯೆರು ನಿವಾಸಿ ಸುಬ್ಬಣ್ಣ …

Read More »

ಹುಬ್ಬಳ್ಳಿಯ ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರು……

ನಾಳೆ ವರಮಾಲಕ್ಷ್ಮಿ ಹಬ್ಬ ಹಿನ್ನೆಲೆ ಹುಬ್ಬಳ್ಳಿಯ ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಜನ ಮಾರುಕಟ್ಟೆಯಲ್ಲಿ ಖರೀದಿಯಲ್ಲಿ ಮುಗಿಬಿದ್ದಿದ್ದಾರೆ. ಹೂವು, ಹಣ್ಣು ಬಾಳೆ ದಿಂಡು ಖರೀದಿ ಜೋರಾಗಿದೆ. ಶ್ರಾವಣ ಮಾಸದಲ್ಲಿ ದೊಡ್ಡ ಹಬ್ಬವೆಂದ್ರೆ ಅದು ವರಮಹಾಲಕ್ಷ್ಮಿ ಹಬ್ಬ. ಎಲ್ಲವೂ ದುಬಾರಿಯಾದರೂ ಖರೀದಿ ಜೋರಾಗಿದೆ, ಇನ್ನೂ ಕೆಲವರು ತಮ್ಮ ಅವಶ್ಯಕತೆಗೆ ತಕ್ಕಂತೆ ಖರೀದಿಸ್ಥಿದಾರೆ. ವ್ಯಾಪಾರಿಗಳಂತು ಭರ್ಜರಿ ವ್ಯಾಪಾರ ಮಾಡ್ತಿದಾರೆ. ಈ ಸಲವು ಸಂಭ್ರಮದ ವರಮಹಾಲಕ್ಷ್ಮಿ ಹಬ್ಬಕ್ಕೆ ಸಿದ್ದರಾಗಿದ್ದಾರೆ..

Read More »