BigTv News
August 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: “ನಾವು ಭೋವಿ ಜನಾಂಗ, ಕಲ್ಲು ಹೊಡೆಯುವ ಸಮಾಜ, ಸದಾ ಎಚ್ಚರವಾಗಿರುತ್ತೇವೆ ಎಂಬುದನ್ನು ಮರೆಯಬೇಡಿ. ಭೋವಿ, ಬಂಜಾರ ಅಲೆಮಾರಿಗಳ ಮೀಸಲಾತಿಗೆ ಕೈ ಹಾಕಿದರೆ ಪರಿಸ್ಥಿತಿ ನೆಟ್ಟಗಿರೊಲ್ಲ”ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ರಾಜ್ಯ ಮೀಸಲಾತಿ ಒಕ್ಕೂಟದಿಂದ ಆಯೋಜಿಸಿದ್ದ ಸಂವಿಧಾನದ ಸಾಧನೆ ಮತ್ತು ಸವಾಲುಗಳ ಪರಾಮರ್ಶೆಗಾಗಿ ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸನ್ಮಾನ …
Read More »
BigTv News
August 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಕಾವೇರಿ ಭಾಗದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವ ಮುನ್ನ ನಾಲೆಗಳಿಗೆ ನೀರು ಹರಿಸಿ, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರುಜಲದರ್ಶಿನಿ ಸರಕಾರಿ ಅತಿಥಿಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಕಾಲದಲ್ಲೂ ಸ್ಥಳೀಯ ರೈತರನ್ನು ನಿರ್ಲಕ್ಷಿಸಿ ಕಬಿನಿ, ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ, ಅಚ್ಚುಕಟ್ಟು ಭಾಗದ ರೈತರನ್ನು ಬಲಿ ಕೊಡುವುದು ಸರಿಯಲ್ಲ. ಜಲಾಶಯದ ಎಲ್ಲ …
Read More »
BigTv News
August 5, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿ ಸರ್ಕಾರ ಎನೇ ಮಾಡಿದರೂ ಈ ಬಾರಿ ಎನ್‌ಡಿಎ ಪಕ್ಷ ಮನೆಗೆ ಹೋಗುತ್ತದೆ. ಇಂಡಿಯಾ ಪಕ್ಷ ಅಧಿಕಾರಕ್ಕೆ ಬರುತ್ತದೆ. ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನು ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, …
Read More »
BigTv News
August 5, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಟೊಮೆಟೊ ಬೆಳೆ ಈ ಬಾರಿ ರೈತರ ಕೈ ಹಿಡಿದಿದ್ದು, ಅಧಿಕ ಲಾಭ ತಂದುಕೊಟ್ಟಿದೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ರೈತ ಕೇವಲ ಆರೇ ದಿನದಲ್ಲಿ ಒಂದು ಲಕ್ಷ ರೂಪಾಯಿ ಲಾಭವನ್ನು ಟೊಮೆಟೊವಿನಿಂದ ಗಳಿಸಿದ್ದಾರೆ. ರೇವಣಪ್ಪ ಲಾಭ ಗಳಿಸಿದ ರೈತ, ರೇವಣಪ್ಪ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಟೊಮೆಟೊ ದರ ದುಬಾರಿಯಾಗಿದ್ದರಿಂದ ರೇವಣಪ್ಪಗೆ ಒಳ್ಳೆ ಬೆಲೆಯೇ ಸಿಕ್ಕಿದೆ. ಟೊಮೆಟೊಗೆ ಚಿನ್ನದ ಬೆಲೆ ಬಂದಿದ್ದರಿಂದ …
Read More »
BigTv News
August 5, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …
Read More »
BigTv News
August 5, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ …
Read More »
BigTv News
August 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಭಿನ್ನ ರೀತಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ! ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ …
Read More »
BigTv News
August 5, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಪೋಸ್ಟ್ ಗೆ ದೊಡ್ಡಮಟ್ಟದ ಹರಾಜು ನಡೆಯುತ್ತಿದೆ. ಅನುಮಾನವೇ ಇಲ್ಲಾ. ಅತ್ಯಂತ ಭ್ರಷ್ಟ ಸರ್ಕಾರ ಇದು. ಇನ್ನು ಮೂರು ತಿಂಗಳು ಮುಗಿದಿಲ್ಲ. ರಾಜ್ಯ ಸರ್ಕಾರ ಮನೆ ಬಿದ್ದಲ್ಲಿಯೂ ಪರಿಹಾರ ಕೊಡ್ತಿಲ್ಲ. ಮಳೆ ಬಂದು ರಸ್ತೆ ಕೆಟ್ಟಿವೆ ಯಾವುದೇ ರೀತಿ ಅಭಿವೃದ್ಧಿ ಆಗ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಗ್ಯಾರಂಟಿ ಅನೌನ್ಸ್ ಮಾಡಿದ್ದರು. ಆ …
Read More »
BigTv News
August 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಪರಸ್ಪರ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮ ಪಂಚಾಯತಿ ಎರಡನೇಯ ಅವಧಿಯ ಚುನಾವಣೆಯ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಅವರು ಆಯ್ಕೆ ಆಗಿರುತ್ತಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಗ್ರಾಮದ ಗುರು …
Read More »