Breaking News

ಕರ್ನಾಟಕ

ಮನೆಗಳ ತೆರವು ವಿರೋಧಿಸಿ ಹುಬ್ಬಳ್ಳಿ ನಿವಾಸಿಗಳಿಂದ ಧಾರವಾಡದಲ್ಲಿ ಆಕ್ರೋಶ

ಧಾರವಾಡ : ಸರ್ಕಾರಿ ಬಯಲು ಹುಲ್ಲುಗಾವಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳ ಮನೆಗಳನ್ನು ತೆರವು ಮಾಡುತ್ತಿರುವ ನಡೆಯನ್ನು ವಿರೋಧಿಸಿ ಹಾಗೂ ಅಲ್ಲಿನ ನಿವಾಸಿಗಳಿಗೆ ಖಾಯಂ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿ ಕೆಂಪಗೇರಿ ನಿವಾಸಿಗಳಿ ಧಾರವಾಡದಲ್ಲಿ ಪ್ರತಿಭಡನೆ ನಡೆಸಿ ಅಧಿಕಾರಿಗಳ ವಿರಿದ್ಧ ತಮ್ಮ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಕೆಂಪಗೇರಿ ನಿವಾಸಿಗಳ ಸುಧಾರಣಾ ಸಮಿತಿ ಸದಸ್ಯರು ಸೇರಿದಂತೆ ನಿವಾಸಿಗಳು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳ ಧಿಕ್ಕಾರ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ……

ಬೆಳಗಾವಿ: ಜಿಲ್ಲೆಯ‌ ವಿವಿಧೆಡೆಯಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಸಮಸ್ಯೆ ನಿವಾರಣೆ ಜೊತೆಗೆ ಜ್ಞಾನ ಭಂಡಾರವನ್ನು ಉಣಬಡಿಸುವ ಕೆಲಸವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಸ್ತಕಗಳನ್ನು ಓದುತ್ತಿರುವುದು ಒಂದೆಡೆ ಶಿಸ್ತಿನಿಂದ ಆಸನಗಳಲ್ಲಿ ಕುಳಿತುಕೊಂಡು ಪುಸ್ತಕ ಓದುತ್ತಿರುವ ಜನ, ಮತ್ತೊಂದೆಡೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿರುವುದು. ಹೌದು ಜಿಲ್ಲಾಧಿಕಾರಿ ಕಚೇರಿಗೆ ನಿತ್ಯ ವಿವಿಧ ಕೆಲಸದ …

Read More »

ಅತಿಥಿ ಉಪನ್ಯಾಸಕರಿಗೆ ಗೌರವ ವೇತನ ಬಿಡುಗಡೆ ಮಾಡುವ ಕುರಿತು ಪತ್ರ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್​ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಬರೆದ ಪತ್ರ ರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ …

Read More »

ಶಿರಗುಪ್ಪಿ ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ

ಹುಬ್ಬಳ್ಳಿ; ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಗ್ರಾಮ …

Read More »

ಪಕ್ಷ ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ: ಜಾರಕಿಹೊಳಿ

ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ.‌‌ ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು …

Read More »

ನಕಲಿ ದಾಖಲೆಗೆ ಸಹಕರಿಸಿದ ಆರ್ ಟಿ ಓ ಕಚೇರಿಯ 4 ಸಿಬ್ಬಂದಿಯ ಬಂಧನ…

ದಾವಣಗೆರೆ: ಕಳವು ಮಾಡಿದ ದ್ವಿಚಕ್ರ ವಾಹನಗಳಿಗೆ ನಕಲಿ ದಾಖಲೆ ಸೃಷ್ಟಿಸಲು ಸ್ಥಳೀಯ ಬ್ರೋಕರ್​ಗಳಿಗೆ ಸಹಕರಿಸುತ್ತಿದ್ದ ಆರೋಪದ ಮೇರೆಗೆ ಆರ್​ಟಿಒ ಕಚೇರಿಯ ನಾಲ್ವರು ಸಿಬ್ಬಂದಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಿದ್ದ ಬೈಕ್​ಗಳ ಮಾಲೀಕರಿಗೆ ಗೊತ್ತಿಲ್ಲದಂತೆ ನಕಲಿ ದಾಖಲೆ ಸೃಷ್ಟಿಸಿ ಬೈಕ್​ಗಳನ್ನು ಬೇರೊಬ್ಬರ ಹೆಸರಿಗೆ ವರ್ಗಾಯಿಸುತ್ತಿದ್ದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ದ್ವಿತೀಯ ದರ್ಜೆಯ ಸಹಾಯಕರಾಗಿರುವ (ಎಸ್​ಡಿಎ) ವಸಂತ ಕುಮಾರ್, ಶಶಿಕುಮಾರ್, ಜಗದೀಶ್, ಪ್ರದೀಪ್ ಬಂಧಿತ ಸಿಬ್ಬಂದಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ …

Read More »

ವಿದ್ಯುತ್ ಪ್ರಹರಿಸಿ 8 ತಿಂಗಳ ಮಗು ಸಾವು…

ಕಾರವಾರ: ಸ್ವಿಚ್ಡ್​​ ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ಗೆ ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಯ ಏಂಟು ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ. ಇಂದು ಬೆಳಗ್ಗೆ ಮನೆಯಲ್ಲಿ ಸ್ವಿಚ್ ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ಸ್ವಿಚ್​ ಆಫ್​ ಮಾಡಿರಲಿಲ್ಲ. ಆದರೆ, ಇದೇ ಸಮಯದಲ್ಲಿ ಮಗು …

Read More »

ಧಾರವಾಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಷ್ಟು ಗೊತ್ತಾ?

ಧಾರವಾಡ : ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಧಾರವಾಡ ಗ್ರಾಮೀಣದಲ್ಲಿ 83, ಧಾರವಾಡ ನಗರದಲ್ಲಿ 12, ಹುಬ್ಬಳ್ಳಿ ಗ್ರಾಮೀಣದಲ್ಲಿ 60, ಹುಬ್ಬಳ್ಳಿ ನಗರದಲ್ಲಿ 28, ಕುಂದಗೋಳದಲ್ಲಿ 61, ಕಲಘಟಗಿಯಲ್ಲಿ 61, ನವಲಗುಂದದಲ್ಲಿ 38, ಅಣ್ಣಿಗೇರಿಯಲ್ಲಿ 27, ಅಳ್ಳಾವರದಲ್ಲಿ 10, ಗ್ರಾಮೀಣ ಪ್ರದೇಶದಲ್ಲಿ ಗ್ರಾಮ್ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಹಾಗೂ ತಾತ್ಕಾಲಿಕ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. …

Read More »

ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸೆಮನ್ಸ್ ಜಾರಿ ಮಾಡಿದೆ….

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್ ಪಾಟೀಲ್​​ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. …

Read More »

ಧಾರವಾಡ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥ

ಧಾರವಾಡ ನಗರದ ಪ್ರತಿಷ್ಠಿತ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ವರ್ಷ ಹಾಗೂ ಪೂಜ್ಯ ಧಮ೯ಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ ಅವರು 75ನೇ ಹುಟ್ಟುಹಬ್ಬವನ್ನು ಈ ವರ್ಷ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ 75 ಸಮಾಜಮುಖಿ ಕಾಯಕ್ರಮಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಪೂಜ್ಯರ ಸಹಾಯ ಮುಟ್ಟುವಂತೆ ಜನತಾ ಶಿಕ್ಷಣ ಸಮಿತಿಯ ವಿವಿಧ ಅಂಗ ಸಂಸ್ಥೆಗಳು ವಿವಿಧ ಕಾಯ೯ಕ್ರಮ ಹಮ್ಮಿಕೊಂಡಿವೆ ಎಂದು ಜೆ.ಎಸ್.ಎಸ್ …

Read More »