BigTv News
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ ಇದರಿಂದ ಬಹಳ ರೈತರಿಗೆ ಅನಾನುಕೂಲ ಆಗಿದೆ ಎಂದು ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ. ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳ್ನಾವರ ಭಾಗಕ್ಕೆ ಈಗಾಗಲೇ ಭೇಟಿ ನೀಡಿದ್ದೇನೆ. ಇವತ್ತು ನವಲಗುಂದ ಕ್ಷೇತ್ರದಲ್ಲಿ ಪರಿಶೀಲನೆ ಮಾಡುತ್ತೇನೆ. ಮುಂದೆ ಕುಂದಗೋಳ ಕ್ಷೇತ್ರಕ್ಕೆ ಹೋಗುತ್ತೇನೆ ಎಂದು ಹೇಳಿದರು. ಈಗಗಾಲೇ ಮನೆ ಬಿದ್ದ ಸ್ಥಳಕ್ಕೆ …
Read More »
BigTv News
July 26, 2023
ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ಉತ್ತರಕನ್ನಡದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜೋಯಿಡಾದ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಕರಂಜೋಲ್ ರೈಲ್ವೆ ಮಾರ್ಗದಲ್ಲಿಯೇ ಭೂಕುಸಿತವಾಗಿದೆ. ಘಟನೆಯಿಂದ ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸಂಪೂರ್ಣ ನಿಂತುಹೋಗಿದೆ. ಭೂಕುಸಿತದ ಸ್ಥಳದಲ್ಲಿ ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Read More »
BigTv News
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಅಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತೀಯಾದ ಮಳೆಯಿಂದ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಬೆಳೆ ಹಾನಿಯಾಗಿದೆ. ಮಳೆ ನೀರು ನಿಂತು ಬೆಳೆ ಹಾನಿಯಾಗುತ್ತಿದ್ದರು ಅಧಿಕಾರಿಗಳು ಸಮೀಕ್ಷೆ ಮಾಡುತ್ತಿಲ್ಲ ಆದ್ದರಿಂದಲೇ ನಿರಂತರ ಮಳೆಯಿಂದಾಗಿ ರೈತರು ಬಿದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »
bigtvnews22
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ :ತಾಲೂಕಿನ ತಡಕೋಡ ಗ್ರಾಮದಲ್ಲಿ ಕೈಗೊಂಡಿರುವ ಜೆ ಜೆ ಎಂ ಕುಡಿಯುವ ನೀರಿನ ಯೋಜನೆಯುಕಾಮಗಾರಿಯು ಅವ್ಯವಸ್ಥೆಯಿಂದ ಕೂಡಿದ್ದು ಏಲ್ಲಿ ಬೇಕಾದಲ್ಲಿ ರಸ್ತೆಗಳನ್ನು ಅಗೆದಿದ್ದರಿಂದ ಸಾರ್ವಜನಿಕರಿಗೆ ಅತೀವ ತೊಂದರೆ ಆಗುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸದಸ್ಯರಾದ ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಪಂಚಾಯತ್ ಸಿ.ಇ.ಓ ಗಳಾದ ಶ್ರೀಮತಿ ಕೆ ಟಿ ಸ್ವರೂಪ್ ಕೌರ್ ಅವರಿಗೆ ಮನವಿ ಅಪಿ೯ಸಿದರು. ಗ್ರಾಮದ ಸರಕಾರಿ ಶಾಲೆಗಳ ದುಸ್ಥಿತಿ ಮತ್ತು ಪ್ರೌಡಶಾಲೆಗೆ. …
Read More »
bigtvnews22
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇತ್ತೀಚೆಗೆ ಮೊಬೈಲ್ ಸಿಕ್ಕರೆ ಸಾಕು ಅದರಲ್ಲಿನ ಸಿಮ್ ತೆಗೆದೊಗೆದು ತಾವೇ ಬಳಸಿಕೊಳ್ಳುವವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತನಗೆ ಸಿಕ್ಕ ಸ್ಮಾರ್ಟ್ ಫೋನ್‌ನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಧಾರವಾಡದ ಆಟೋ ಚಾಲಕ ಪ್ರಕಾಶ ಎಂಬುವವರಿಗೆ ಆಟೋ ನಿಲ್ದಾಣದ ಬಳಿ ಸ್ಮಾರ್ಟ್ ಫೋನ್ ಸಿಕ್ಕಿತ್ತು. ಕೂಡಲೇ ಅದನ್ನು ಅವರು ಧಾರವಾಡದ ಉಪನಗರ ಠಾಣೆಗೆ ತಂದು ಪೊಲೀಸರಿಗೆ ಒಪ್ಪಿಸಿ, ಫೋನ್ ಮಾಲೀಕರಿಗೆ ಅದನ್ನು ಮರಳಿಸುವಂತೆ ಮನವಿ …
Read More »
BigTv News
July 26, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮಾನ್ಯ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಜಿಲ್ಲೆಯ ಹೆಮ್ನೂರ್ ಗ್ರಾಮದ ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಭಾರಿ ಪ್ರಮಾಣದಲ್ಲಿ ಹರಿಯುತ್ತಿವೆ. ಸೇತುವೆಗಳ ಮೇಲೆ ಸಂಚರಿಸುವಾಗ ಸಾರ್ವಜನಿಕರು ಎಚ್ಚರ ವಹಿಸುವುದು ಅಗತ್ಯ ಎಂದು ಲಾಡ್ ಅವರು ತಿಳಿಸಿದರು.
Read More »
BigTv News
July 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ವಿದ್ಯುತ್ ತಂತಿ ತಗುಲಿ ಮೂಕಪ್ರಾಣಿ ಎಮ್ಮೆ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿಯ ಇಂಡಿಪಂಪ್ ಬಳಿ ನಡೆದಿದೆ. ಮಳೆಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಕಂಬದಿಂದ ಹರಿದು ಬಿದ್ದ ವಿದ್ಯುತ್ ತಂತಿ. ಕಂಬದ ಬಳಿ ಮೇಯಲು ಹೋಗಿದ್ದ ಎಮ್ಮೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮೂಕಪ್ರಾಣಿ ಬಲಿಯಾಗಿದೆ. ಸ್ಥಳಕ್ಕೆ ಹೆಸ್ಕಾಂ ಸಿಬ್ಬಂಧಿ ಹಾಗೂ ಪಾಲಿಕೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಹೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು …
Read More »
BigTv News
July 25, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಶಿವಮೊಗ್ಗದ ವಿನೋಬ ನಗರದ ಬಳಿ ಬೆಳಿಗ್ಗೆ ಶಿವಮೊಗ್ಗ-ತಾಳಗುಪ್ಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿಶ್ವನಾಥ್ 2012ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.ಅವರ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು,ಮಗನ ಮನೆಗೆ ತೆರಳಿದ್ದ ಅವರು ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗಕ್ಕೆ ವಾಪಾಸ್ ಬಂದಿದ್ದರು ಎಂದು ತಿಳಿದುಬಂದಿದೆ. ಸೋಮವಾರ ತಮ್ಮ ಸಹೋದರಿಗೆ ಕರೆ ಮಾಡಿದ್ದ ಅವರು ಯಾವುದೊ ಸರಿ ಇಲ್ಲ. ನಿಮ್ಮ ಬಳಿ ಬಂದು ಮಾತನಾಡಬೇಕು ಎಂದು ಹೆಳಿದ್ದರು ಎನ್ನಲಾಗಿದೆ. ಈ ಬಗ್ಗೆ ರೈಲ್ವೆ ಪೊಲಿಸ್ ಠಾಣೆಯಲ್ಲಿ ದೂರು …
Read More »
BigTv News
July 25, 2023
ಕರ್ನಾಟಕ, ಬೀದರ್, ಸುದ್ದಿ
ಬೀದರ್: ಬೀದರ್ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹೆಸರು, ಸೋಯಾ ಹಾಗೂ ಅವರೆಯಲ್ಲಿ ಹಳದಿ ನಂಜು ರೋಗಭಾದೆ ಕಂಡು ಬಂದಿದೆ.ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷೆ ವೇಳೆ ರೋಗ ಪತ್ತೆಯಾಗಿದೆ.ಹುಮನಾಬಾದ್ ತಾಲ್ಲೂಕಿನ ಕೆಲ ಹೊಲಗಳಲ್ಲಿ ಹೆಸರು ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಕಾಣಿಸಿದೆ.ಹಳದಿ ನಂಜು ರೋಗ ಪಸರಿಸಲು ಬಿಳಿ ನೊಣ ಕಾರಣವಾಗಿದೆ. ಪ್ರೌಢ ಹಾಗೂ ಮರಿಕೀಟ ಎಲೆ ಹಾಗೂ ಇತರ ಭಾಗಗಳಿಂದ …
Read More »
BigTv News
July 24, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ವಾಹನ ಅಪಘಾತಗಳ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು
Read More »