Breaking News

ಕರ್ನಾಟಕ

ಬೆಳಗಾವಿ ಜಿಲ್ಲೆಯಲ್ಲಿ‌‌ ನಿರಂತರವಾಗಿ ಮಳೆ ಜನಜೀವನ ಅಸ್ತವ್ಯಸ್ತ

ಬೆಳಗಾವಿ: ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ‌‌ ನಿರಂತರವಾಗಿ ಮಳೆ ಸುರಿಯುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಸತತ‌ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, ಪಣಸೂರಿ, ತಟ್ಟಿ, ಕುಂಭಾರ, ಬೈಲ್ …

Read More »

ತುರ್ತು ಮಾಧ್ಯಮಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ. ದಯಾನಂದ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು …

Read More »

ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರ ಬಂಧನ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್​ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ …

Read More »

ಚರಂಡಿಯಲ್ಲಿ ನವಜಾತ ಗಂಡು ಶಿಶು ಪತ್ತೆ – ಜಿಲ್ಲಾ ಆಸ್ಪತ್ರೆಗೆ ರವಾನೆ

ಧಾರವಾಡ: ಯಾರೋ ಪಾಪಿಗಳು ನವಜಾತ ಗಂಡು ಶಿಶುವನ್ನು ಚರಂಡಿಯಲ್ಲಿ ಎಸೆದು ಹೋದ ಘಟನೆ ಧಾರವಾಡದಲ್ಲಿ ನಡೆದಿದೆ. ಸದ್ಯ ಶಿಶುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡದ ರೌನಕಪುರ ಮಸ್ಟೀದ್ ಉರ್ದು ಶಾಲೆಯ ಬಳಿ ಚರಂಡಿಯಲ್ಲಿ ಈ ಶಿಶು ಪತ್ತೆಯಾಗಿದೆ. ಈ ಶಿಶುವನ್ನು ಬಾಲಕನೋರ್ವ ಗಮನಿಸಿದ್ದಾನೆ. ಸುರಿವ ಮಳೆಯಲ್ಲಿ ಚರಂಡಿಯಲ್ಲಿ ಶಿಶು ಬಿದ್ದಿತ್ತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದ ಶಹರ ಠಾಣೆ ಪೊಲೀಸರು ಆ …

Read More »

ನಿರಂತರ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿತ.. ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಧಾರವಾಡ

ಧಾರವಾಡ:ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬವಾಗಿ ಆರಂಭಗೊಂಡಿದೆ. ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತಗೊಂಡು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಬೋಗೂರ ಗ್ರಾಮದಲ್ಲಿ ಇಂದು ನಡೆದಿದೆ. ಸರ್ಕಾರಿ ಶಾಲೆಯ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕೊಠಡಿ ಕುಸಿತಗೊಂಡ ಕಾರಣ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಗರಗ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಸರ್ಕಾರಿ ಶಾಲೆಯ ಕಟ್ಟಡ ಬಹಳ ಹಳೆಯದಾಗಿದ್ದರಿಂದ ಮಳೆಗೆ ಕುಸಿದು ಬಿದ್ದಿದೆ. ಶಾಲೆಯ ಇನ್ನೂ ಸುಮಾರು ಮೂರು …

Read More »

ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ಲಘು ರೈಲು ಸಾರಿಗೆ.

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ, ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರಗಳು …

Read More »

ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆ: ಜೆ.ಪಿ.ನಡ್ಡಾ

ನವದೆಹಲಿ : ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್​ಡಿಎ) ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆ ಇಂದು ಸಂಜೆ ನಡೆಯಲಿದ್ದು, ಸುಮಾರು 38 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾರ್ಥಕ್ಕಾಗಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿವೆ. ತಮ್ಮ ಮೇಲಿನ 20 ಲಕ್ಷ ಕೋಟಿಗೂ ಅಧಿಕ ಭ್ರಷ್ಟಾಚಾರ ಪ್ರಕರಣವನ್ನು ಮುಚ್ಚಿಹಾಕಲು ಅವರು ಒಗ್ಗಟ್ಟಾಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿ …

Read More »

ಐಎಎಸ್ ಅಧಿಕಾರಿ ವಿರುದ್ದ ವರದಕ್ಷಿಣೆ ಆರೋಪ.

ಬೆಂಗಳೂರು: ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ ಮಾನಸಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಐಎಎಸ್ ಅಧಿಕಾರಿಯೊಬ್ಬರ ವಿರುದ್ದ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೊಡಗು ಜಿಲ್ಲಾ ಪಂಚಾಯತ್​​ನಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ಅವರ ಪತ್ನಿ ಡಾ. ವಂದನಾ ಈ ಆರೋಪ ಮಾಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಟಿ ಆರ್ ಸುರೇಶ್ ಅವರ ಪುತ್ರಿ …

Read More »

ಉಯ್ಯಾಲೆಯಲ್ಲಿ ಅಡುವಾಗ ಬಿದ್ದು ಮಗು ಸಾವು.

ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ …

Read More »

ತುಳುವರ ಆಷಾಡ ಆಟಿ ಅಮವಾಸ್ಯೆ.

ಮಂಗಳೂರು: ಆಷಾಢ ಮಾಸವನ್ನು ತುಳುವರು ಆಟಿ ಎನ್ನುವರು. ಈ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆಯಂದು ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಆಟಿ ಕಷಾಯ ಸೇವನೆ ಮಾಡುವ ಸಂಪ್ರದಾಯವಿದೆ. ಆಟಿ ಅಮಾವಾಸ್ಯೆಯಂದು ಕುಡಿಯುವ ಆಟಿ ಕಷಾಯದ ಬಗ್ಗೆ ನಿಮಗೆ ಗೊತ್ತೇ? ತುಳುವರು ಆಹಾರದಲ್ಲಿಯೇ ಔಷಧವನ್ನು ಸೇವಿಸುತ್ತಾರೆ.‌ ಯಾವ ವಸ್ತುವಿನಲ್ಲಿ ಯಾವ ರೀತಿಯ ಔಷಧೀಯ ಗುಣವಿದೆ ಎನ್ನುವ ಸಂಗತಿ ಪೂರ್ವಜರಿಂದ ಬಳುವಳಿಯಾಗಿ ಬಂದಿದೆ.‌ ಮರ, ತೊಗಟೆ, ಹುಲ್ಲು, ಪಥ್ಯ ಹಾಗು …

Read More »