Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕಲಬುರಗಿ

ಕಲಬುರಗಿ

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕಲಬುರಗಿ : ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ವಿವಿಧ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ …

Read More »

ಕೈ- ಕಮಲ ನಾಯಕರ ಕೆಸರೆರಚಾಟ.

ಕಲಬುರಗಿ: ಶಾಸಕ ಬಸವರಾಜ್ ಮತ್ತಿಮೂಡ್ ಅವರ ಪತ್ನಿಯ ಕಾರನ್ನು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಸೀಜ್ ಮಾಡಿದ್ದ ಪ್ರಕರಣವೀಗ ಜಿಲ್ಲೆಯಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ‌ಮತ್ತಿಮೂಡ್ ಪತ್ನಿ ಜಯಶ್ರೀ ಮತ್ತಿಮೂಡ್ ಕಾರನ್ನು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಹಿನ್ನೆಲೆ ಮಹಾರಾಷ್ಟ್ರದ ಸೋಲಾಪುರದ ಸಿಸಿಬಿ ಪೊಲೀಸರು ಕಲಬುರಗಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದ ವೇಳೆ ಸೀಜ್ ಮಾಡಿದ್ದರು. ಈ ಪ್ರಕರಣ ಕಲಬುರಗಿ ಅಲ್ಲದೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ …

Read More »

ಹಸೆಮಣೆ ಏರಬೇಕಿದ್ದ ಯುವತಿ ಮಸಣಕ್ಕೆ.

ಕಲಬುರಗಿ: ಮೂರು ವರ್ಷ ಪ್ರೀತಿಸಿ ಇನ್ನೇನು ಹಸೆಮಣೆ ಏರಬೇಕೆಂದಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ, ಚಿಂಚೋಳಿ ತಾಲೂಕಿನ ಸೂರುನಾಯಕ ತಾಂಡದಲ್ಲಿ ನಡೆದಿದೆ. ಕಾವೇರಿ ಪವಾರ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಕಾವೇರಿ ಹಾಗೂ ಸಲಗರ ಕಾಲೋನಿ ತಾಂಡಾದ ಮಾನಸಿಂಗ್ ರಾಠೋಡ ಇಬ್ಬರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದರು. ಎರಡು ವರ್ಷಗಳಿಂದ ಹೊರದೇಶ ಸೌದಿ ಅರೇಬಿಯಾದಲ್ಲಿ ವಾಸವಾಗಿದ್ದ ಮಾನಸಿಂಗ್, ಇಬ್ಬರ ಮನೆಯಲ್ಲಿ ಹಿರಿಯರನ್ನು ಒಪ್ಪಿಸಿ ಮದುವೆ ಮಾಡಿಕೊಳ್ಳಲೆಂದು 20 ದಿನಗಳ ಹಿಂದಷ್ಟೆ ತಾಂಡಾಕ್ಕೆ …

Read More »

ಅತಿವೃಷ್ಟಿಯಿಂದ ತತ್ತರಿಸುತ್ತಿರುವ ಕಲಬುರಗಿ ಅನ್ನದಾತರು.

ಕಲಬುರಗಿ: ಇಪ್ಪತ್ತು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ದಾಖಲೆ ಮಳೆ ಜಿಲ್ಲೆಯಲ್ಲಿ ಸುರಿದಿದ್ದು, ಅತಿವೃಷ್ಟಿಯಿಂದ ಅನ್ನದಾತನ ಬದುಕು ಬರಿದಾಗಿ ಹೋಗಿದೆ. ಅತಿವೃಷ್ಟಿಗೆ ಜಿಲ್ಲೆಯಲ್ಲಿ ಬರೋಬ್ಬರಿ 2.70 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ. ಉದ್ದು, ಹೆಸರು, ಸಜ್ಜೆ, ಶೇಂಗಾ, ಸೋಯಾ, ತೊಗರಿ ಹೀಗೆ ಮುಂಗಾರು ಬೆಳೆಗಳು ರಣಭೀಕರ ಮಳೆಗೆ ಕೊಚ್ಚಿ ಹೋಗಿವೆ. ಜಮೀನಿನಲ್ಲಿ ನೀರು ನಿಂತು ಬೆಳೆ ಕೊಳೆತು ಹೋಗಿವೆ. ಅಳಿದುಳಿದ ಬೆಳೆಯನ್ನಾದರೂ ರಾಶಿ ಮಾಡಿ ಕಾಪಾಡಿಕೊಳ್ಳೋಣ ಎನ್ನುತ್ತಿದ್ದ ರೈತರಿಗೆ ವರುಣ …

Read More »

ಬೈಕ್ ಅಪಘಾತ : ನಾಲ್ವರು ದುರ್ಮರಣ.

ಕಲಬುರ್ಗಿ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆಯಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತರನ್ನು ಲಾಡ್ಲಾಪುರ ಗ್ರಾಮದ ಮರೆಪ್ಪ(50), ಬಸ್ಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ(50) ಹಾಗೂ ಮಲ್ಲಪ್ಪ ರಾಯಪ್ಪ (35) ಎಂದು ಗುರುತಿಸಲಾಗಿದೆ. ಹನಮಂತ ಹಾಗೂ ಕಾಶಿನಾಥ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಈ ಘ ನಡೆದಿದ್ದು, ಎರಡೂ ಬೈಕ್ ಗಳ …

Read More »

ಬಿಜೆಪಿಯ ತಾರತಮ್ಯ ಧೋರಣೆ ಖಂಡಿಸಿ ಜೆಡಿಎಸ್ ಪ್ರತಿಭಟನೆ.

ಕಲಬುರಗಿ: ಅತಿವೃಷ್ಟಿ ಪರಿಹಾರದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಅಫಜಲಪುರ ಪಟ್ಟಣದಲ್ಲಿ ಜೆಡಿಎಸ್​ ಕಾರ್ಯಕರ್ತರು ನಡು ರಸ್ತೆಯಲ್ಲಿ ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ನಡು ರಸ್ತೆಯಲ್ಲಿ ಉರುಳು ಸೇವೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿದರೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿದೆ. ಆದ್ರೆ ಕಲಬುರಗಿ ಜಿಲ್ಲೆಯಲ್ಲಿ ಮನೆಗಳಿಗೆ ನೀರು ನುಗ್ಗಿದರೆ ಕೇವಲ 10 …

Read More »

ಬೆಳೆ ಹಾನಿ ಪರಿಹಾರಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ರೈತರ ಅಗ್ರಹ..

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶಿಲ್ದಾರ ಕಛೇರಿ ಎದುರು, ಜೆ ಎಂ ಕೋರಬು ಪೌಂಡೇಶನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿ ಹೋಗಿದೆ. ಈಗ ಮಳೆಯಿಂದಾಗಿ ಬೆಳೆಯು ಕೂಡಾ ಹಾನಿಯಾಗಿದೆ. ಹಾಗಾಗಿ ತಕ್ಷಣ ಸರ್ಕಾರ ಕಲಬುರ್ಗಿ ಜಿಲ್ಲೆಯ ರೈತರ ಸಂಕಷ್ಟಕ್ಕೆ ಸ್ಪಂದನೆ ಮಾಡಬೇಕು …

Read More »

ಹಿರಿಯ ನಾಗರಿಕರಿಗೆ ಸಿಹಿಸುದ್ದಿ

ಕಲಬುರಗಿ : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಪೂರೈಸಿದ ಬಡವರಿಗೆ ಮನೆ ಬಾಗಿಲಿಗೇ ವೃದ್ಧಾಪ್ಯ ವೇತನ ನೀಡುವ ಸೌಲಭ್ಯ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ವೃದ್ಧಾಪ್ಯ ವೇತನ ಪಡೆಯಲು ಇನ್ಮುಂದೆ ಜಿಲ್ಲಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಚೇರಿಗಳಿಗೆ ಅಲೆಬೇಕಾಗಿಲ್ಲ. ತಾಲೂಕು ಕಚೇರಿಯಲ್ಲಿ ಆಯಾ ತಾಲೂಕಿನ ಬಡಜನರ ಆಧಾರ್ ಕಾರ್ಡ್ ಗಳ …

Read More »

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್

ಕಲಬುರಗಿ : ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪದವಿ ಕಾಲೇಜುಗಳಲ್ಲಿ 1700 ಉಪನ್ಯಾಸಕರ ಹಾಗೂ 400 ಪ್ರಾಚಾರ್ಯರರ ನೇರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಪದವಿ ಕಾಲೇಜುಗಳಲ್ಲಿ 1700 ಉಪನ್ಯಾಸಕರ ಹಾಗೂ 400 ಪ್ರಾಚಾರ್ಯರರ ನೇರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಸಂದರ್ಶನ ರಹಿತ ನೇಮಕಾತಿ ಆಗಲಿದೆ. …

Read More »

ಕ್ಯಾಸಿನೋ ತೆರೆಯುತ್ತೀರಾ, ನೋಡ್ತಿನಿ : ಡಿ ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕಕ್ಕೆ ಶ್ರೀಮಂತ ರಾಷ್ಟ್ರಗಳಿಂದ ಮೋಜು ಮಸ್ತಿಗೆ ಎಂದು ಬರುವ ವಿದೇಶಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿಯೂ ಕ್ಯಾಸಿನೋ ಜೂಜು ಕೇಂದ್ರಗಳನ್ನು ತೆರೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಆದರೆ, ಇದಕ್ಕೆ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರು, ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕ್ಯಾಸಿನೋಗಳನ್ನು ತೆರೆಯುತ್ತೇವೆ ಎಂದು ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು. ಅಲ್ಲಿಯವರೆಗೂ ಇದರ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು …

Read More »

ಕಲುಷಿತ ನೀರು ಸೇವನೆ : ಜನರು ಅಸ್ವಸ್ಥ

ಕಲಬುರಗಿ : ಕಲುಷಿತ ನೀರು ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಚಿತ್ತಾಪೂರ ಬಳಿಯ ಅಲ್ಲೂರು ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗೆ ಕಲುಷಿತ ನೀರು ಸೇರಿದ್ದರಿಂದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಬೋರವೆಲ್​ನಿಂದ ಗ್ರಾಮಕ್ಕೆ ಪೈಪ್ ಲೈನ್ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮಕ್ಕೆ ನೀರು ಒದಗಿಸುವ ಎರಡು ಮೂಲಗಳು ಕುಡಿಯಲು ಯೋಗ್ಯವಿಲ್ಲ ಎನ್ನಲಾಗಿದೆ. ಕಲುಷಿತ ನೀರು ಮಿಶ್ರಿತ ನೀರು ಸೇವಿಸಿದ್ದರಿಂದ ಆಲ್ಲೂರು ಗ್ರಾಮದ 60 ಕ್ಕೂ ಹೆಚ್ಚು ಜನ …

Read More »

ವಿಚಾರಣಾಧೀನ ಕೈದಿ ಎಸ್ಕೇಪ್: ಪೋಲೀಸರು ಅಮಾನತು.

ಕಲಬುರ್ಗಿ: ಕಳವು ಆರೋಪದಡಿ ಬಂಧಿತನಾಗಿದ್ದ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಕರ್ತವ್ಯಲೋಪ ಆರೋಪದಡಿ ಪೊಲೀಸ್ ಪೇದೆಗಳಾದ ಮಡಿವಾಳಪ್ಪ, ವೀರಭದ್ರಯ್ಯ ಮತ್ತು ಗೌಡಪ್ಪಎಂಬುವವರನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳ್ಳತನ ಆರೋಪ ಹೊತ್ತಿದ್ದ ಚಿಂಚೋಳಿ ಪಟ್ಟಣ ನಿವಾಸಿ ಮುಝೀಬ್ (25) ಅನಾರೋಗ್ಯದ ಹಿನ್ನೆಲೆ ಮೂರು ದಿನಗಳಿಂದ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಸೋಮವಾರ …

Read More »

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ

ಕಲಬುರಗಿ : ಕಲಬುರಗಿ, ಬೀದರ ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಪ್ರಸ್ತುತ ನೀಡುತ್ತಿರುವ ಹಾಲು ಶೇಖರಣೆ ದರಕ್ಕೆ ಪ್ರತಿ ಕೆ.ಜಿ. ಆಕಳ ಮತ್ತು ಎಮ್ಮೆ ಹಾಲಿಗೆ 2020ರ ಫೆಬ್ರವರಿ 24ರ ಬೆಳಿಗ್ಗೆ ಸರತಿಯಿಂದ ಜಾರಿಗೆ ಬರುವಂತೆ 1 ರೂ. ಶೇಖರಣೆ ದರ ಹೆಚ್ಚಳ ಮಾಡಿ ಪರಿಷ್ಕರಿಸಲಾಗಿದೆ ಎಂದು ಹಾಲು ಒಕ್ಕೂಟದ ಅಧ್ಯಕ್ಷ ಆರ್. ಕೆ. ಪಾಟೀಲ ಅವರು ತಿಳಿಸಿದ್ದಾರೆ. ಕಲಬುರಗಿ-ಬೀದರ್ ಹಾಗೂ ಯಾದಗಿರಿ ಜಿಲ್ಲಾ …

Read More »

ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ :ಸಿದ್ದರಾಮಯ್ಯ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸ್ವಾತಂತ್ರ್ಯವಿಲ್ಲ. ರಾಜ್ಯದ ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ. ಇದು ಸರ್ಕಾರದಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿಯಾಗಿದ್ದಾರೆ.‌ 13 ಜಿಲ್ಲೆಗಳಿಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿಲ್ಲ.‌ ಸಂಪುಟದಲ್ಲಿ ಸಾಮಾಜಿಕ ನ್ಯಾಯವೂ ಇಲ್ಲ ಎಂದು ಟೀಕಿಸಿದರು. ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗಿದೆ. ಅಧ್ಯಕ್ಷರ ನೇಮಕದಲ್ಲಿ ನಮ್ಮಲ್ಲಿ …

Read More »
error: Content is protected !!