BigTv News
December 21, 2023
ಚೆನ್ನೈ, ಸುದ್ದಿ
ಚೆನ್ನೈ: ಭ್ರಷ್ಟಾಚಾರ ಪ್ರಕರಣದಲ್ಲಿ ತಮಿಳುನಾಡು ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವ ಸ್ಥಾನ ಕಳೆದುಕೊಂಡು ಶಾಸಕರಾಗಿ ಅನರ್ಹಗೊಂಡಿರುವ ಡಿಎಂಕೆ ಪಕ್ಷದ ಹಿರಿಯ ನಾಯಕ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪೊನ್ಮುಡಿ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ತಮ್ಮ ಸ್ಥಾನವನ್ನು ಕಳೆದುಕೊಂಡ ಮೊದಲ ಡಿಎಂಕೆ ಮತ್ತು ಎಐಎಡಿಎಂಕೆಯಿಂದ ಜೆ ಜಯಲಲಿತಾ ಮತ್ತು ಬಾಲಕೃಷ್ಣ ರೆಡ್ಡಿ ಅವರ ನಂತರ ತಮಿಳುನಾಡಿನ ಮೂರನೇ ನಾಯಕರಾಗಿದ್ದಾರೆ. …
Read More »
BigTv News
December 21, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಹಲವು ಆಟಗಾರರ ಅದೃಷ್ಟ ಖುಲಾಯಿಸಿದೆ. ಆಸ್ಟ್ರೇಲಿಯಾ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂಪಾಯಿ ಪಡೆದರೆ, ಪ್ಯಾಟ್ ಕಮ್ಮಿನ್ಸ್ 20.50 ಕೋಟಿ ಪಡೆದ ಹೊಸ ದಾಖಲೆ ಬರೆದರು. ಇದರ ಜೊತೆಗೆ ಇನ್ನೂ ಅಂತಾರಾಷ್ಟ್ರೀಯ ಪಂದ್ಯವನ್ನೇ ಆಡದ ಯುವ ಆಟಗಾರರು ಕೋಟ ಕೋಟ್ಯಧಿಪತಿಗಳಾದರು. ಉತ್ತರ ಪ್ರದೇಶದ ಬ್ಯಾಟರ್ ಸಮೀರ್ ರಿಜ್ವಿ ಅವರನ್ನು 8.40 ಕೋಟಿ ರೂಪಾಯಿ ನೀಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಖರೀದಿ ಮಾಡಿತು. ಇನ್ನು …
Read More »
BigTv News
December 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಾಖಲೆಯ ಬಹುಮತದೊಂದಿಗೆ ಮಗದೊಮ್ಮೆ ವಿರಾಜಮಾನರಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯುವುದು ಶತಸಿದ್ಧ. ಕಮಲ ಅರಳಲಿದೆ, ಕಾಂಗ್ರೆಸ್ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಭವಿಷ್ಯ ನುಡಿದಿದೆ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ರಾಜ್ಯದ ಅಭಿವೃದ್ಧಿಯನ್ನೇ ಯೋಚಿಸದೆ ಅರಾಜಕತೆ ಸೃಷ್ಟಿಸಿ ಸಮಸ್ಯೆಗಳ ಸಾಗರವನ್ನೇ ಹುಟ್ಟು ಹಾಕಿ ಎಲ್ಲಾ ವರ್ಗದ ಜನರಿಂದ ಜನಾಕ್ರೋಶ ಎದುರಿಸುತ್ತಿದೆ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಸಿದ್ದರಾಮಯ್ಯರವರಿಗೆ ತಮ್ಮ ದುರಾಡಳಿತದಿಂದಾಗಿ ಲೋಕಸಭಾ …
Read More »
BigTv News
December 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯಲ್ಲಿ ಸಮನ್ವಯತೆ ಇಲ್ಲವಾಗಿದೆ. ಅಸಲಿ ವಿರೋಧ ಪಕ್ಷದ ನಾಯಕ ನಾನು ಅಂತ ಇನ್ನೊಬ್ಬರು ಹೇಳ್ತಾರೆ. ಮೂರಲ್ಲ ಬಿಜೆಪಿ ಅವರ ಮನೆ ನೂರು ಬಾಗಿಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ವೇಳೆ ಲೋಕಸಭೆ ಗೆಲ್ಲಲು ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ಉತ್ತರಿಸಿ, ಎರಡೂ ಮನೆಗೂ ಬೆಂಕಿ ಹತ್ತಿದೆ. ಬೆಳಗಾವಿಯಲ್ಲಿ ನೋಡಿದ್ದೇವೆ ಇವರದ್ದು ಮನೆ ಒಂದು ಮೂರು ಬಾಗಿಲಾಗಿದೆ. ಒಂದು ಬಾಗಿಲು ಯತ್ನಾಳ …
Read More »
BigTv News
December 21, 2023
ದೆಹಲಿ, ಸುದ್ದಿ
ಶೌರ್ಯ ಪ್ರಶಸ್ತಿಯನ್ನು ಸ್ವೀಕರಿಸುವುದರಿಂದ ಹಿಡಿದು ಯುದ್ಧ ಘಟಕದಲ್ಲಿ ಪ್ರಮುಖ ಪಾತ್ರ ವಹಿಸುವವರೆಗೆ ಭಾರತೀಯ ರಕ್ಷಣಾ ಪಡೆಗಳ ಮಹಿಳೆಯರು 2023 ರಲ್ಲಿ ಹಲವಾರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ವರ್ಷವೂ ಹಲವಾರು ಮಹಿಳೆಯರು ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೊಸ ಎತ್ತರಕ್ಕೆ ಏರಿದ್ದಾರೆ. ಈ ವರ್ಷ ಮಹಿಳೆಯರ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸೈನಿಕರು, ನಾವಿಕರು ಮತ್ತು ವಾಯು ಯೋಧರಿಗೆ ಮಾತೃತ್ವ, ಮಕ್ಕಳ ಆರೈಕೆ …
Read More »
BigTv News
December 21, 2023
ಕರ್ನಾಟಕ, ಸಿನಿಮಾ, ಸುದ್ದಿ
ಕೆಜಿಎಫ್’ ಸಿನಿಮಾ ಬಳಿಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮೆಗಾ ಬಜೆಟ್ ಸಿನಿಮಾ ಸಲಾರ್. ಇದು ನಾಳೆ (ಡಿಸೆಂಬರ್ 22) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾ ರಿಲೀಸ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಅನ್ನುವಾಗ ಇಡೀ ತಂಡ ಸಿನಿಮಾ ಪ್ರಚಾರಕ್ಕೆ ಇಳಿದಿದೆ. ಕೆಲವು ದಿನಗಳ ಹಿಂದಷ್ಟೇ ರಾಜಮೌಳಿ ಜೊತೆ ಪ್ರಶಾಂತ್ ನೀಲ್, ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಈ ಸಿನಿಮಾದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆ ವೇಳೆ ಕೂಡ ಪ್ರಶಾಂತ್ ನೀಲ್ …
Read More »
BigTv News
December 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಇದಕ್ಕೆ ಪರಿಹಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಶೀಘ್ರದಲ್ಲೇ ಕಲಿಸಿಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದಲ್ಲಿ ಶೈಕ್ಷಣಿಕ ಮೂಲಸೌಕರ್ಯ ಸಂಪೂರ್ಣ ಕುಸಿದಿದೆ. ಅದರಲ್ಲೂ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ವಸತಿ ಶಾಲೆಗಳ ಸ್ಥಿತಿಯಂತೂ ದಯನೀಯವಾಗಿದೆ. ವಿಧಾನ ಮಂಡಲ …
Read More »
BigTv News
December 20, 2023
ಕರ್ನಾಟಕ, ಚಿಕ್ಕಬಳ್ಳಾಪುರ, ಸುದ್ದಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿ ವ್ಯಾಪ್ತಿಯ ಚೊಕ್ಕಹಳ್ಳಿ ಗ್ರಾಮದ ಸರ್ವೆ ನಂಬರ್.16ರ ಅಳತೆಗೆ ಶಾಸಕ ಪ್ರದೀಪ್ ಈಶ್ವರ್ ಅವರು ಸೂಚನೆ ನೀಡಿದ್ದು ಚಿಕ್ಕಬಳ್ಳಾಪುರ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ನಾಂದಿ ಹಾಡುವ ಲಕ್ಷಣಗಳು ಕಾಣಿಸಿಕೊಂಡಿವೆ.ಸರ್ವೇ ನಂಬರ್ 16 ರಲ್ಲಿ 42 ಎಕರೆ ಸರ್ಕಾರಿ ಭೂಮಿ ಇದೆ. ಚಿಕ್ಕಬಳ್ಳಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಕೆ.ವಿ ಕ್ಯಾಂಪಸ್ ಅಸುಪಾಸಿನವರೆಗೂ ಈ ಜಮೀನು ಬರುತ್ತದೆ ಎನ್ನುತ್ತವೆ ಭೂ ದಾಖಲೆಗಳ ಇಲಾಖೆ ಮೂಲಗಳು, ಶಿಕ್ಷಣ …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿಗೆ ಪ್ರಯಾಣ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದ ಇಬ್ಬರು ನಾಯಕರ ಭೇಟಿ.ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್‌ಗಳು.ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು ನಾಯಕರು.ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಂಸದ ಅನಂತಕುಮಾರ ಹೆಗಡೆ. ಡಿ.17 ರಾತ್ರಿ 8.30ಕ್ಕೆ ಒಂದೇ ವಿಮಾನದಲ್ಲಿ ಇಬ್ಬರು ನಾಯಕರು ಪ್ರಯಾಣ ಮಾಡುತ್ತಿರುವ.ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಹುಟ್ಟು …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ತಂದೆ ತಾಯಿ ಕಿತ್ತಾಟದ ನಡುವೆ ಕೂಸು ಬಲಿಯಾದಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ, ನಮ್ಮ ಉತ್ತರ ಕರ್ನಾಟಕ ರೈತರು ಬಲಿಯಾಗುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ಹಿಂಜರಿಯುತ್ತಿರುವುದರಿಂದ ರೈತ ಸಂಘಟನೆಗಳು ಪತ್ರ ಚಳುವಳಿ ಮಾಡಲು ಮುಂದಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಹೋರಾಟ ಮಾಡ್ತಾ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …
Read More »