admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಭಾರಿ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮೂರು ಸೇತುವೆಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕೃಷ್ಣಾ ನದಿಯ ಯಡೂರ-ಕಲ್ಲೋಳ, ದೂಧಗಂಗಾ ನದಿಯ ಕಾರದಗಾ-ಬೋಜ ಮಲ್ಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ 60000 ಕ್ಯೂಸೆಕ್ ನೀರು ಹೆಚ್ಚಳ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೊಡಲ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ಸಿಎಂ ಯಡಿಯೂರಪ್ಪ ಬಹುಮತ ಸಾಭೀತು ಹಿನ್ನಲೆಯಲ್ಲಿ ರಾಮನಗರದಲ್ಲಿಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ನಗರದ ಐಜೂರು ವೃತ್ತದಲ್ಲಿ ಸಂಭ್ರಮ ಮನೆಮಾಡಿತ್ತು. ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ : ಹಸು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆದಾವಣಗೆರೆಯ ಕಾಳಿಕಾದೇವಿ ರಸ್ತೆಯಲ್ಲಿ ನಡೆದಿದೆ.ವ್ಯಕ್ತಿಯೊಬ್ಬ ಅಪೆ ಆಟೋದಲ್ಲಿ ಹಸು ಸಾಗಿಸುತ್ತಿದ್ದ.ಈ ವೇಳೆ ಹಲವು ಯುವಕರಿಂದ ಚಾಲಕನಿಗೆ ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದು ಕೆಲ ಯುವಕರು ಚಾಲಕನಿಗೆ ಥಳಿಸಿದ್ದಾರೆ.ವಿಷಯ ತಿಳಿದು ಮತ್ತೊಂದು ಗುಂಪು ಸ್ಥಳಕ್ಕೆ ಆಗಮಿಸಿದಾಗ ಎರಡೂ ಗುಂಪುಗಳ ನಡುವೆಪರಸ್ಪರ ಕಿತ್ತಾಟ ನಡೆದಿದೆ.ಬಳಿಕ ಪೊಲೀಸರಿಗೆ ಮಾಹಿತಿ ದೊರೆತರೂ ಸಹ ಉದ್ವಗ್ನಗೊಂಡ ಪರಿಸ್ಥಿತಿ ನಿಯಂತ್ರಣಕ್ಕೆ ತರಲುಬಸವನಗರ ಪೋಲಿಸರು ಹರಸಾಹಸ ಪಡುವಂತಾಯಿತು. …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆರೆ ಕಟ್ಟೆಗಳಿಗೆ ನೀರು ಹರಿಸಲು, ಒಣಗುತ್ತಿರುವ ಕಬ್ಬು, ತೆಂಗು, ಅಡಿಕೆ, ಬಾಳೆ ಮುಂತಾದ ಬೆಳೆಗಳನ್ನು ಉಳಿಸಲು, ಕೆ.ಆರ್.ಪೇಟೆ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ಗೊರೂರು ಜಲಾಶಯದಿಂದ 2500ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ನೀರಿಲ್ಲದೇ ಒಣಗಿ ಖಾಲಿಯಾಗಿದ್ದ ಹೇಮೆಯ ಒಡಲು ಭರ್ತಿಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ದೂರಾಗಿದೆ…ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಹೇಮಾವತಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ : ಹಾಡಹಗಲೇ ಹಳೇ ಮನೆ ವಿವಾದದ ಜಗಳದ ವೇಳೆ ಯುವಕನೋರ್ವ ಲಾಂಗ್ ತೋರಿಸಿ ಯಾರ್ ಬರ್ತಿರೋ ಬರ್ರೋ ಕೊಚ್ಚಾಕಿ ಬಿಡ್ತೀನಿ ಅಂತ ಧಮ್ಕಿ ಹಾಕಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಇದ್ಲೂಡು ಗ್ರಾಮದಲ್ಲಿ ನಡೆದಿದೆ.ಗ್ರಾಮದ ನರಸಿಂಹಮೂರ್ತಿ ಎಂಬವರ ಪುತ್ರ ಪ್ರೇಮ್ ಕುಮಾರ್ ಎಂಬಾತ ಲಾಂಗ್ ಹಿಡಿದು ಬೆದರಿಕೆ ಹಾಕಿದ್ದಾನೆ. ನಾಗೇಶ್ ಎಂಬವರಿಗೆ ಪ್ರಿತ್ರಾರ್ಜಿತವಾಗಿ ಬಂದಿದ್ದ ಖಾಲಿ ನಿವೇಶನ ಜಾಗದಲ್ಲಿ ಪ್ರೇಮ್ ಕುಮಾರ್ ತಂದೆ ನರಸಿಂಹಮೂರ್ತಿ ಒಪ್ಪಂದದ ಪ್ರಕಾರ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಸ್ಪರ್ಧಿಸುವ ಸಂಭವ ಹೆಚ್ಚಾಗಿದೆ.ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶಾಸಕ ಕೆ.ಸಿ.ನಾರಾಯಣಗೌಡರನ್ನು ಸೋಲಿಸಿ ಪರಾಭವಗೊಳಿಸಿ ಮುಂಬೈಗೆ ವಾಪಸ್ ಕಳಿಸಿ ಸೋಲಿನ ಕಹಿ ಉಣಿಸಲು ದೊಡ್ಡನಗೌಡರು ಶಪಥ ಮಾಡಿದ್ದಾರೆ. ಇದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯತಂತ್ರದ ಒಂದು ಭಾಗವಾಗಿದ್ದು, ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ..ಕಾದು ನೋಡೋಣ….
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಗತಿಪರ ಚಿಂತಕ, ಮೈಸೂರಿನ ಜ್ಞಾನಬುತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರಿಗೆ ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ ಅವರಿಂದ ಅಧಿಕೃತ ಆಹ್ವಾನ ನೀಡಲಾಯಿತು.ಸತ್ಯನಾರಾಯಣಗೌಡ ಅವರ ಮನೆಗೆ ತೆರಳಿದ ಕೆ.ಆರ್.ಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಅವರ ನೇತೃತ್ವದಲ್ಲಿ ಫಲತಾಂಬೂಲ ನೀಡಿ, ಮೈಸೂರು ಪೇಟ ತೊಡಿಸಿ ಆಹ್ವಾನ ನೀಡಲಾಯಿತು. ಅಕ್ಕಿಹೆಬ್ಬಾಳು ಗ್ರಾಮದ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಭಸ್ಮವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ ಅತ್ತಿಬೆಲೆಯ ರಾಷ್ಟ್ರೀಯ ಹೆದ್ದಾರಿಯ ಪ್ಲೇಯೋವರ್ ಮೇಲೆ ಜೆಪಿ ನಗರದಿಂದ ತಮಿಳುನಾಡಿನತ್ತ ತೆರಳುತ್ತಿದ್ದ ಸೈಯದ್ ಎಂಬುವವರಿಗೆ ಸೇರಿದ KA 51 MB 6632 ಸ್ಕಾರ್ಪಿಯೋ ಕಾರಿನ ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಇನ್ನು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಲ್ಲಿದ್ದ ಸುಮಾರು 10 ಜನರನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ. ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ . ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು …
Read More »