admin
September 12, 2019
ಧಾರವಾಡ, ಸುದ್ದಿ
ಧಾರವಾಡ:ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗ ಮಧ್ಯದಲ್ಲಿಯೇ ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದ ಹೈಕೋರ್ಟ್ ಬಳಿ ನಡೆದಿದೆ.ದುರ್ಗದಕೇರಿ ಗ್ರಾಮದ ಕಾವೇರಿ ಮಾಳಗಿ ಎಂಬ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿತ್ತು.ಇಂದು ಬೆಳಗಿನ ಜಾವ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಆ್ಯಬುಲೆನ್ಸ್‌ನ ರಸ್ತೆ ಪಕ್ಕ ನಿಲ್ಲಿಸಿ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಕಾವೇರಿ. ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ; ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆಯನ್ನು ವಿರೋಧಿಸಿ ದಾವಣಗೆರೆಯಲ್ಲಿಂದು ಫೆಡರೇಶನ್ ಆಪ್ ಕರ್ನಾಟಕ ಆಟೋ ರಿಕ್ಷಾ ಸಮಿತಿಯವತಿಯಿಂದ ಪ್ರತಿಭಟನೆ ನಡೆಸಲಾಯಿತು.ದಾವಣಗೆರೆಯ ಜಯದೇವ ವೃತ್ತದಲ್ಲಿ ಆಟೋ ಚಾಲಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.ಬಳಿಕ ಪ್ರತಿಭಟನಾಕಾರರು ಎಸಿ ಕಚೇರಿಗೆ ತೆರಳಿ ಈ ಕಾಯ್ದೆಯು ಚಾಲಕರಿಗೆ ಮಾರಕವಾಗಿದೆ. ಹೀಗಾಗಿ ಆಟೋ ಚಾಲಕರು ಈ ಕಾಯ್ದೆಯನ್ನು ವಿರೋಧಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮನವಿ ಸಲ್ಲಿಸಿದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕ.ರಾ.ಸ.ನೌ.ಸಂಘ ಮಂಡ್ಯ ಶಾಖೆಯ ವತಿಯಿಂದ ಮಂಡ್ಯ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಎಸ್ ಶಂಭುಗೌಡ , ರಾಜ್ಯ ಪರಿಷತ್ತಿನ ಸದಸ್ಯರಾದ ಜಿ.ಎನ್ ನಾಗೇಶ್, ಕಾರ್ಯದರ್ಶಿ ದೇವರಾಜ್. ಖಜಾಂಚಿ ಗೋಪಾಲ್ ಹಾಗೂ ಇತರೆ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು .ಇದೇ ಸಂದರ್ಭದಲ್ಲಿ ತಹಶಿಲ್ದಾರ್ ಶಿವಮೂರ್ತಿ ಎಂ, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆರ್ ಎಸ್ ಮಹದೇವೇಗೌಡ ಅವರನ್ನು ಹಾಗೂ ನೂತನವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರುಗಳನ್ನು ಪ್ರಮಾಣ ಪತ್ರ ನೀಡುವುದರ ಮೂಲಕ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಅಧ್ಯಕ್ಷ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಮಣಿಗನಹಳ್ಳಿಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಯ ಜನ್ಮದಿನದ ಅಂಗವಾಗಿ ವರ್ಧಂತಿ ಮಹೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ನೂರಾರು ಮಹಿಳೆಯರು ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.ಮಹೇಶ್ವರಿ ವಂಶಸ್ಥರಾದ ದೇವಾಲಯ ಸಂಚಾಲನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ದಿನೇಶ್ದಂಪತಿಗಳು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ದೇವಿಗೆ ವಿಶೇಷ ಪೂಜೆ ಪುರಸ್ಕಾರಗಳು, ಅಭಿಷೇಕ, ಹೋಮ ಹವನಗಳು ನಡೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತರು ಹಾಗೂ ಸಾರ್ವಜನಿಕರಿಗೆ ಉಚಿತ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜು.28ರ ರವಿವಾರ ಹಾಗೂ 29ರ ಸೋಮವಾರ ನಗರದ ಇಂದಿರಾ ಗಾಜಿನ ಆವರಣ ಹತ್ತಿರದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸಮ್ಮೇಳನದ ದ್ವಾರಕ್ಕೆ ಡಾ.ಗಂಗೂಬಾಯಿ ಹಾನಗಲ್, ಸಭಾಂಗಣಕ್ಕೆ ನಿರಂಜನ ವಾಲಿಶೆಟ್ಟರ ಹಾಗೂ ವೇದಿಕೆಗೆ ಡಾ.ಗಿರೀಶ ಕಾರ್ನಾಡ ಹೆಸರಿಡಲಾಗಿದ್ದು, ಸಮ್ಮೇಳ ನದ ಸರ್ವಾಧ್ಯಕ್ಷರಾಗಿ ಡಾ.ಬಸವರಾಜ ಸಾದರ ಪಾಲ್ಗೊಳ್ಳಲಿದ್ದಾರೆ. 28ರಂದು ಬೆಳಿಗ್ಗೆ 8-30ಕ್ಕೆ ರಾಷ್ಟ್ರ ಧ್ವಜಾರೋಹಣವನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಸ್ಮಾರ್ಟ್ ಸಿಟಿ ನಗರ ಎಂದು ಬಾಯಿ ಮಾತುಗಳಲ್ಲಿ ಹೇಳೊದು ಆಯ್ತು. ಯಾಕೆಂದರೆ ಅವಳಿನಗರ ಅಕ್ಷರಶಃ ಸಮಸ್ಯೆಗಳ ಸರಮಾಲೆಯಲ್ಲಿ ನರಳುತ್ತಿದೆ. ಅವಳಿನಗರದಲ್ಲಿರುವ ಬಹುತೇಕ ಒಳಚರಂಡಿಗಳು ನಿರ್ವಹಣೆ ಇಲ್ಲದೇ ಹದಗೆಟ್ಟ ಹೋಗಿದ್ದು ಒಳಚರಂಡಿ ನೀರು ತುಂಬಿ ರಸ್ತೆಗೆ ಬರುತ್ತಿದ್ದು, ಇದರಿಂದ ಸಾರ್ವಜನಿಕರು ಪ್ರತಿನಿತ್ಯ ಪರಿಪಾಟಲು ಅನುಭವಿಸುವಂತಾಗಿದ್ದು ಪಾಲಿಕೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಇನ್ನೂ ಸ್ವಚ್ಛತೆ ನಮ್ಮ ಆದ್ಯ ಕರ್ತವ್ಯ, ನಾವಿರುವುದು ನಿಮ್ಮ ಸೇವೆಗಾಗಿ ಎಂಬ ತನ್ನ ಧ್ಯೇಯವಾಕ್ಯ ಕೇವಲ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಸರಕಾರಿ ಜಾಗದಲ್ಲಿ ಅನಧಿಕೃತ ಚರ್ಚ್ ಕಟ್ಟಲು ಮುಂದಾದ ಜನರಿಗೆ ಜಿಲ್ಲಾಡಳಿತ ತಡೆ ಒಡ್ಡಿದೆ. ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಸ್ಥಾನದ ಪಕ್ಕದ ಜಾಗದಲ್ಲಿ ಸಾರ್ವಜನಿಕರು ಯೇಸು ದೇವಾಲಯ ಕಟ್ಟಲು ಹುನ್ನಾರ ನಡೆಸಿದ್ದರು. ಇದನ್ನು ವಿರೋಧಿಸಿ ದೇವಸ್ಥಾನ ಆಡಳಿತ ಮಂಡಳಿ ಮತ್ತು ಜಿಲ್ಲಾ ಬಜಂಗದಳದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಮದ್ದೂರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ 16 ನೇ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮಾಜಿ ಸಚಿವರು, ಹಾಲಿ ಶಾಸಕರಾದ ಡಿ ಸಿ ತಮ್ಮಣ್ಣ ನವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ಚಾಮಲಾಪುರ ತಾಲೂಕು ಅಧ್ಯಕ್ಷ ಶ್ರೀ ಹರ್ಷ, ಅಪೂರ್ವ ಚಂದ್ರು,ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಅಕ್ಕಿಹೆಬ್ಬಾಳು ಗ್ರಾಮದಲ್ಲಿ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜುಲೈ-31ರಂದು ನಡೆಸಲು ನಿರ್ಧರಿಸಲಾಗಿದ್ದು, ಸಮ್ಮೇಳನಾಧ್ಯಕ್ಷರಾಗಿ ಪ್ರಗತಿಪರ ಚಿಂತಕ, ಸಾಂಸ್ಕೃತಿಕ ಸಂಘಟಕ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ತಿಳಿಸಿದ್ದಾರೆ. ಈ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡದ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ನಡೆಸುವ ಸಂಬಂಧ ಕನ್ನಡದ ಎಲ್ಲಾ ಮನಸುಗಳು ಒಂದಾಗಿ ಕೆಲಸ ಮಾಡಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಪೂರ್ಣಚಂದ್ರ ತೇಜಸ್ವಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಕಾರ್ ನ ಟೈರ್ ಸ್ಪೋಟಗೊಂಡು ಕಾರ್ ಕೆರೆಗೆ ಪಲ್ಟಿಯಾಗಿರುವಂತಹ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಕೆರೆಯ ಬಳಿಯಲ್ಲಿ ನಡೆದಿದೆ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮಮತಾ ಮೃತ ದುರ್ದೈವಿಯಾಗಿದ್ದು ಆನೇಕಲ್ ತಾಲ್ಲೂಕಿನ ಜಿಗಣಿ ಕೆರೆ ಕಟ್ಟೆಯ ಮೇಲೆ ಮಮತಾ ಹಾಗು ಅವರ ಪತಿ ಆನಂದ್ ಸಾಂಟ್ರೋ ಕಾರಿನಲ್ಲಿ ಬರುತ್ತಿದ್ದಾಗ ಹಟಾತ್ ಕಾರ್ ನ ಟೈರ್ ಸ್ಪೋಟಗೊಂಡಿದೆ … ನಂತರ ಏಕಾಏಕಿ ಕಾರ್ ಪಲ್ಟಿ …
Read More »