Breaking News

ಸುದ್ದಿ

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ….

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು …

Read More »

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ವಿಶಿಷ್ಟ ಕಾರಣ ಗಳಿಗಾಗಿ ಸುದ್ದಿ….

ಮಂಗಳೂರು: ಈ ಶಾಲೆಯ ಮಕ್ಕಳಿಗೆ ಬಸ್ ವ್ಯವಸ್ಥೆಯ ಅನಿವಾರ್ಯತೆಯಿಲ್ಲ, ಟ್ರಾಫಿಕ್ ಜಾಮ್‌ನಲ್ಲಿ ಸಿಲುಕುವ ಟೆನ್ಷನ್ ಇಲ್ಲ. ಈ ಶಾಲೆಯ ಮಕ್ಕಳೆಲ್ಲಾ ಸಾರಿಗೆಗಾಗಿ ನೆಚ್ಚಿಕೊಂಡಿರೋದು ತಮ್ಮ ಸೈಕಲ್‌ಗಳನ್ನು ಮಾತ್ರ. ಕೇರಳದ ಸೈಕಲ್ ಶಾಲೆ ಎಂದೇ ಗುರುತಿಸಲ್ಪಟ್ಟಿರುವ ಈ ಶಾಲೆಯು ಇಕೋ ಫ್ರೆಂಡ್ಲಿ ಶಾಲೆಯಾಗಿಯೂ ಮಾರ್ಪಟ್ಟಿದೆ. ಇದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ. ಈ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಕಾರಣ ಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿದ್ದಾರೆ. …

Read More »

ಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆ..

ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಹರಿಯಾಣದ ಫತೇಹಾಬಾದ್‌ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್‌ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ …

Read More »

ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌….

ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಡಿಸೆಂಬರ್ 30ರೊಳಗೆ ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವೀಕ್ಷಕ ಸಭೆ ನಡೆಸುತ್ತಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಆದರೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ಇದರ ಜೊತೆಗೆ ನಾನು ಉಡುಪಿಯ ಉಸ್ತುವಾರಿಯೂ ಹೌದು ಹೀಗಾಗಿ …

Read More »

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ 35 ಆರೋಪಿಗೆ ಜಾಮೀನು…..

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್​ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್​ 16ರಂದು ಹಳೇ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ …

Read More »

ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ….

ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಮುಂದುವರಿದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಕಲಾಪಕ್ಕೆ ಮಾಹಿತಿ ನೀಡಿದರು. ಈಗಾಗಲೇ ಎಷ್ಟು ಅಳವಡಿಸಲಾಗಿದೆ, ಇನ್ನು ಎಷ್ಟು ಅಳವಡಿಸಲಾಗುತ್ತಿದೆ ಎಂಬೆಲ್ಲ ಮಾಹಿತಿಯನ್ನು ತಿಳಿಸಿದರು. ಅಲ್ಲದೇ ಸಂಚಾರ ದಟ್ಟಣೆ, ಟ್ರಾಫಿಕ್ ನಿಯಂತ್ರಣಕ್ಕಾಗಿ AI ತಂತ್ರಜ್ಞಾನ ಬಳಸುತ್ತಿದೆ ಎಂಬ ಮಾಹಿತಿ ನೀಡಲಾಯಿತು. ಬೆಂಗಳೂರಿನಲ್ಲಿ ಅಪರಾಧ ತಡೆಯಲು ಶೀಘ್ರದಲ್ಲೇ 10,000 ಸಿಸಿಟಿವಿ ಕ್ಯಾಮೆರಾಗಳನ್ನು ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು. …

Read More »

ಪೂರ್ವಾಪರ ತಿಳಿದುಕೊಳ್ಳದೆ ಪಾಸ್ ನೀಡಿದ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಮೇಲೂ ಕ್ರಮ…

ಬೆಂಗಳೂರು: ಮಹಾನ್ ರಾಷ್ಟ್ರ ಭಕ್ತರು ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಸಭಾಪತಿ ಓಂಪ್ರಕಾಶ್ ಬಿರ್ಲಾ ಅವರು ಈ ಘಟನೆಯ ನೇರ ಹೊಣೆಯನ್ನು ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಂಸದ ವಿ ಎಸ್‌ ಉಗ್ರಪ್ಪ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ವಿ ಎಸ್‌ ಉಗ್ರಪ್ಪ ಮಾತನಾಡಿ, ಡಿ.13, 2023 ದೇಶದ ಮತ್ತು ಸಂಸತ್ತಿನ ಇತಿಹಾಸದಲ್ಲೇ ಕರಾಳ ದಿನ. ಹಿಂದೆಂದೂ ಸಹ ಸಂಸತ್ತಿನ ಒಳಗಡೆ ಯಾವುದೇ …

Read More »

ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ….

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ವಿಚಾರದಲ್ಲಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್‌ನಲ್ಲಿ ಪ್ರತಾಪ್ ಸಿಂಹ ನಾಯಕ್‌ ಕೆ. (ವಿಧಾನಸಭೆಯಿಂದ ಚುನಾಯಿತರಾದವರು) ಈ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ನೀಡಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ …

Read More »

ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿ….

ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ. ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ …

Read More »

ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿ…..

ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ. ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ …

Read More »