Breaking News

ಸುದ್ದಿ

ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷ…..

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌ ಸದ್ಯ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷರಾಗಿದ್ದಾರೆ. ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ …

Read More »

ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ….

ಬೆಂಗಳೂರು: ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ಕೊಟ್ಟರೆ ನಾನು 4 ಸಾವಿರ ಕೊಡುತ್ತಿದ್ದೆ. ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರಕ್ಕೆ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ …

Read More »

ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆ ತೃಣಮೂಲ ಸದಸ್ಯರ ಅಮಾನತಿಗೆ ಪ್ರಸ್ತಾವನೆಯನ್ನು ಅಂಗೀಕರಿಸಿದೆ…

ನವದೆಹಲಿ: ಅನುಚಿತ ವರ್ತನೆ ಕಾರಣ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಟಿಎಂಸಿ ಸಂಸದ ಡೆರೆಕ್ ಓ ಬ್ರಿಯಾನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ರಾಜ್ಯಸಭೆ ಅಂಗೀಕರಿಸಿದೆ. ರಾಜ್ಯಸಭಾ ಅಧ್ಯಕ್ಷರ ಪ್ರಕಾರ, ನಿನ್ನೆಯ ಭದ್ರತಾ ಉಲ್ಲಂಘನೆಯ ಘಟನೆಯ ವಿಷಯವನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುತ್ತಿದ್ದಂತೆ ಡೆರೆಕ್ ಓ ಬ್ರಿಯಾನ್ ಅವರು ಸದನದ ಬಾವಿಗೆ ನುಗ್ಗಿ ಘೋಷಣೆಗಳನ್ನು ಕೂಗಿದರು ಮತ್ತು ಸದನದ ಕಲಾಪಕ್ಕೆ ಅಡ್ಡಿಪಡಿಸಿದರು. ಗುರುವಾರ ಬೆಳಗ್ಗೆ ನಡೆದ ಕಲಾಪದಲ್ಲಿ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ …

Read More »

ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ….

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …

Read More »

ಯೂಟ್ಯೂಬ್‌ನಲ್ಲಿ ಗಗನ್‌ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ….

ನಮಸ್ಕಾರ ದೇವ್ರು ಅಂತ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಗಗನ್‌ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ. ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ. ಸಾಮಾನ್ಯವಾಗಿ ಅವರು ವಾರದಲ್ಲಿ ಎರಡು ಮೂರು ವಿಡಿಯೋ ಹಂಚಿಕೊಳ್ಳುತ್ತಿದ್ದರು. ಆದರೆ ಕಳೆದೊಂದು ತಿಂಗಳಿಂದ ಅವರ …

Read More »

ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು…

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪತಿ ದರ್ಶನ್‌ ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಳಸ ಪಟ್ಟಣದಲ್ಲಿ ಶ್ವೇತಾ ಅಂತ್ಯ ಸಂಸ್ಕಾರ ನಡೆದಿದೆ. 31 ವರ್ಷದ ಶ್ವೇತಾ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದರು. ಈ ಸಾವಿನ ಕುರಿತು ಹಲವು ಅನುಮಾನ ವ್ಯಕ್ತವಾಗಿದೆ. ಆಕೆಯ ಪತಿ ದರ್ಶನ್ ಕೊಲೆ ಮಾಡಿದ್ದಾರೆ ಎಂದು ಶ್ವೇತಾ …

Read More »

ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಆಡಳಿತ ಆರಂಭ….

ಭೋಪಾಲ್: ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಆಡಳಿತ ಆರಂಭವಾಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮರಳಿ ಅಧಿಕಾರವನ್ನು ಪಡೆದಿತ್ತು. ಬುಧವಾರ ಭೋಪಾಲ್‌ನ ಲಾಲ್ ಪರೇಡ್‌ ಗ್ರೌಂಡ್‌ನಲ್ಲಿ ನಡೆದ ಸಮಾರಂಭದಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 58 ವರ್ಷದ ಮೋಹನ್ ಯಾದವ್ ಈ ಹಿಂದೆ ಶಿವರಾಜ್ …

Read More »

ಕೆ.ಎಲ್ ರಾಹುಲ್‌ ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ…

ಕನ್ನಡಿಗ ಕ್ರಿಕೆಟಿಗ ಕೆ.ಎಲ್ ರಾಹುಲ್‌, ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ ವಿಶ್ವಕಪ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು, ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿಗೆ, ಕೆ.ಎಲ್ ರಾಹುಲ್‌, ಹೊಚ್ಚ ಹೊಸ ಕಪ್ಪು ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯಲ್ಲಿ ಕಾಣಿಸಿಕೊಂಡಿದ್ದು, ಆ ವಿಡಿಯೋ ಆನ್‌ಲೈನ್‌ ನಲ್ಲಿ ಹರಿದಾಡುತ್ತಿದ್ದು, ಕಾರ್ಸ್ …

Read More »

ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ….

ಬೆಳಗಾವಿ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ ಗಳ ಬಹುಮಾನ ನೀಡುವುದರ ಜೊತೆಗೆ ಮಾಹಿತಿ ನೀಡುವವರ ಗೋಪ್ಯತೆಯನ್ನು ಕಾಪಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಮಂಗಳವಾರ ವಿಧಾನಪರಿಷತ್‌ನಲ್ಲಿ ನಡೆದ ಗಮನ ಸೆಳೆಯುವ ಸೂಚನೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ಕಾನೂನು ಬಾಹಿರವಾಗಿ …

Read More »

ಜವಾರಿ ಮತ್ತು ಹೈಬ್ರೀಡ್ ಬೆಳ್ಳುಳ್ಳಿ ಬೆಲೆ ಏರಿಕೆ….

ಹುಬ್ಬಳ್ಳಿ: ಈರುಳ್ಳಿ, ಬೆಳ್ಳುಳ್ಳಿ ಪ್ರತಿ ಮನೆಯ ಅಡುಗೆಮನೆಯಲ್ಲಿ ಲಭ್ಯವಿರುವ ಮಸಾಲೆ ಸಾಮಾಗ್ರಿಯಾಗಿದೆ. ಇವು ಅಡುಗೆಗೆ ಅತೀ ಅವಶ್ಯಕ ಪದಾರ್ಥಗಳಾಗಿವೆ. ಆದರೆ ಟೊಮೆಟೋ ಬೆಲೆ ಏರಿಕೆ ಬಳಿಕ ಈಗ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಬೆಳ್ಳುಳ್ಳಿ ಬೆಲೆ ಕೇಳಿದರೆ ದಾಂಗಾಗುವುದು ಗ್ಯಾರಂಟಿ. ಅಷ್ಟರ ಮಟ್ಟಿಗೆ ಜವಾರಿ ಮತ್ತು ಹೈಬ್ರೀಡ್ ಬೆಳ್ಳುಳ್ಳಿ ಬೆಲೆ ಏರಿಕೆ ಆಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಒಂದು ಕೆ.ಜಿ ಬೆಳ್ಳುಳ್ಳಿಗೆ 80-ರಿಂದ 90 ರೂಪಾಯಿ ಮೊದಲಿತ್ತು. ಇದೀಗ ಬೆಳ್ಳುಳ್ಳಿ ದರ …

Read More »