admin
September 12, 2019
ಕರ್ನಾಟಕ, ಸುದ್ದಿ
ಚಾಮರಾಜನಗರ: ಆನೆ ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಬಾಬು (27) ಮೃತ ದುರ್ದೈವಿ ಎಂದು ಹೇಳಲಾಗಿದೆ. ತಾಳ ಬೆಟ್ಟದ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಆನೆ ದಾಳಿ ನಡೆಸಿದೆ. ಮಲೆ ಮಹದೇಶ್ವರ ಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ : ಬೈಕ್ ಅಡ್ಡಾದಿಡ್ಡಿ ಚಲಾಯಿಸದರಿಂದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಳ್ಳಕೆರೆಯ ಹೊರವಲಯದಲ್ಲಿ ನಡೆದಿದೆ.ಚಿತ್ರದುರ್ಗದ ನಿವಾಸಿ ಇಂತಿಯಾಜ್ ಮೃತನೆಂದು ಗುರುತಿಸಲಾಗಿದೆ.ಚಳ್ಳಕೆರೆ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಜಿಲ್ಲೆಯಲ್ಲಿ ೨೫ ಸಕ್ಕರೆ ಕಾರ್ಖಾನೆಗಳು ಇವೆ. ಅದರಲ್ಲಿ, ಒಂದು ಕಾರ್ಖಾನೆ ಮಾತ್ರ ಕಾರ್ಯನಿರ್ವಸುತ್ತಿಲ್ಲ. ಕಾರ್ಯನಿರ್ವಸುತ್ತಿರುವ ೨೪ ಕಾರ್ಖಾನೆಗಳ ಪೈಕಿ ೧೮ ಸಕ್ಕರೆ ಕಾರ್ಖಾನೆಗಳು ಕಳೆದ ವರ್ಷದ ಬಾಕಿ ಬಿಲ್ಲನ್ನು ಸಂಪೂರ್ಣವಾಗಿ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಜಿಲ್ಲಾಡಳಿತದಿಂದ ಸೂಚನೆ ಹಾಗೂ ನೋಟಿಸ್ ಜಾರಿ ಮಾಡಿ, ಒತ್ತಡ ಹೆರಿದ ಬಳಿಕ ೧೮ ಕಾರ್ಖಾನೆಗಳು ಸಂಪೂರ್ಣವಾಗಿ ಬಾಕಿ ಬಿಲ್ಲನ್ನು ರೈತರಿಗೆ ಪಾವತಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಕೊಪ್ಪಳ ಸರ್ಕಾರಿ ನೌಕರರ ಸಂಘದ ಫಲಿತಾಂಶ ಪ್ರಕಟ ಕೊಪ್ಪಳ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕೊಪ್ಪಳ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನಾಗರಾಜ್ ಜುಮ್ಮಣ್ಣವರ್ ಬಣ ಜಯ ಸಾಧಿಸಿದೆ. ಆರೋಗ್ಯ ಇಲಾಖೆಯ ನಾಗರಾಜ್ ಜುಮ್ಮಣ್ಣವರ ಕಂದಾಯ ಇಲಾಖೆಯ ಮಂಜುನಾಥ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಜಿಲ್ಲಾ ಅದ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಸಮಿತಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆದಿತ್ತು. ಒಟ್ಟು ೬೮ ಮತಗಳಿದ್ದು ಇದರಲ್ಲಿ ೫೧ ಮತಗಳನ್ನು ಪಡೆದು …
Read More »
admin
September 12, 2019
ಕರ್ನಾಟಕ, ಸುದ್ದಿ
ಕೋಲಾರ : ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ, ಸಿಎಂ ಕುಮಾರಸ್ವಾಮಿ ಅವರು ಕೋಲಾರ ಜಿಲ್ಲೆಗೆ ಭರ್ಜರಿ ಗಿಪ್ಟ್ ಕೊಟ್ಟಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎಂವಿಕೆ ಗೋಲ್ಡನ್ ಡೇರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. 50 ಕೋಟಿ ರುಪಾಯಿ ಅನುದಾನದಲ್ಲಿ ಮೊದಲನೇ ಕಂತಾಗಿ 25 ಕೋಟಿ ರುಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ …
Read More »
admin
September 12, 2019
ಕರ್ನಾಟಕ, ಸುದ್ದಿ
ಕೋಲಾರ : ಸಿಲಿಂಡರ್ ಸ್ಪೋಟಗೊಂಡು ಮನೆಯ ಛಾವಣಿ ಕುಸಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಮಾಲೂರು ತಾಲೂಕಿನ ಕುಡಿಯನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗ್ರಾಮದ ರಾಜಪ್ಪನವ್ರ ಮನೆಯ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟಗೊಂಡ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಸಿಲಿಂಡರ್ ಸ್ಪೋಟಕ್ಕೆ ಮನೆಯ ಛಾವಣಿ ಕುಸಿದಿದ್ದು, ಗೋಡೆಗಳು ಬೀಳುವ ಹಂತಕ್ಕೆ ತಲುಪಿದೆ. ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, 2 ಲಕ್ಷ ರುಪಾಯಿಗೂ ಅಧಿಕ ಹಾನಿ ಉಂಟಾಗಿದೆ. …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಕೃಷ್ಣಂರಾಜು ಮತ್ತು ಯೋಜನಾ ನಿರ್ದೇಶಕರಾದ ಗಣಪತಿನಾಯಕ ಅವರ ನೇತೃತ್ವದಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯು ನಡೆಯಿತು ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಫಲಪ್ರದವಾಗಿ ಜಾರಿಗೊಳಿಸಿ ಬಡಜನರ ಸೇವೆಯಲ್ಲಿ ಭಗವಂತನನ್ನು ಕಾಣುವ ಪ್ರಯತ್ನ ಮಾಡಬೇಕು ಎಂದು ಯೋಜನಾ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ಸವತಿಯರ ನಡುವೆ ಘರ್ಷಣೆ ನಡೆದಿದೆ.ಘರ್ಷಣೆಯಲ್ಲಿ ಹಿರಿಯ ಹೆಂಡತಿ ಲಕ್ಷ್ಮೀ(35) ಅವರಿಗೆ ಕಿರಿಯ ಹೆಂಡತಿ ಮಂಜಮ್ಮ, ಪತಿ ಕೃಷ್ಣಯ್ಯ ಮತ್ತು ಮಗ ಅವಿಕಿರಣ ಅವರು ಸೇರಿಕೊಂಡು ಮಚ್ಚು ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮಿರಕ್ಷಣೆ ಕೋರಿ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.ದೂರು ದಾಖಲಿಸಿಕೊಂಡಿರುವ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಅಪರಿಚಿತ ವೃದ್ದನ ಶವ ಪತ್ತೆವುಬಆನೇಕಲ್ ನ ರೈಲ್ವೆ ಹಳಿ ಬಳಿ ಪತ್ತೆಯಾಗಿದೆ.ಮೃತ ವೃದ್ಧ ಸಮಾರು ೫೦- ೬೦ ವರ್ಷದವರಾಗಿರಬಹುದು. ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯ ಆನೇಕಲ್ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ .
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಮಂಗಳೂರು ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಮೂರು ಮಂದಿ ಯನ್ನು ಬಂಧಿಸಲಾಗಿದೆ .ಬಂಧಿತರನ್ನು ಸಂತೋಷ್ ಜೀವನ್ ಕುಮಾರ್ ಹಾಗೂ ನಿಶಾಂತ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 140000 ರುಪಾಯೀ ನಗದು 6 ಮೊಬೈಲ್ ಫೋನ್ ಹಾಗೂ ಹುಂಡೈ ಕ್ರೆಟಾ ಕಾರು ವಶಪಡಿಸಿಕೊಳ್ಳಲಾಗಿದೆ.ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದವರ ವಿರುದ್ಧ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ .
Read More »