Breaking News

ಸುದ್ದಿ

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭ..

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದ್ದು, ಇದರಿಂದ ದಿನಪೂರ್ತಿ ರೈಲು ಸೇವೆ ಲಭ್ಯವಾದಂತಾಗಿದೆ. ಇದರಿಂದ ಬೆಂಗಳೂರಿಗೆ ನಿತ್ಯ ಹೋಗಿ ಬರುವ ಸ್ಥಳೀಯರು, ವ್ಯಾಪಾರಸ್ಥರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಗೆ ಬಂದು ನಿಲ್ಲುತ್ತಿದ್ದವು. ಅಷ್ಟೂ ರೈಲುಗಳನ್ನು ಈಗ ಚಿಕ್ಕಬಳ್ಳಾ ಪುರದವರೆಗೂ ಸಂಚರಿಸಲು ಹಸಿರು ನಿಶಾನೆ ತೋರಲಾಗಿದೆ. …

Read More »

ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ…..

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್‌ 370 ಕಾಯ್ದೆ ರದ್ಧತಿಯನ್ನು ಪ್ರಶ್ನಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಈ ನಿಟ್ಟಿನಲ್ಲಿ ತೀರ್ಪು ಬಂದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. 5 ಆಗಸ್ಟ್ 2019 ರಂದು ಭಾರತದ …

Read More »

ನಟ ಯಶ್ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ….

ನಟ ಯಶ್ ತಮ್ಮ ಮೊದಲನೇ ಸಿನಿಮಾದಿಂದ ಹಿಡಿದು, ಕೆಜೆಎಫ್ ತನಕ ಹೊಸ ತನವನ್ನು ಕನ್ನಡ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾ ಕಥೆ ಇದ್ದಂತೆ, ಇನ್ನೊಂದು ಸಿನಿಮಾ ಇರಲ್ಲ. ಎಲ್ಲದ್ರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್. ಈಗ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಯಶ್-19’ ಸಿನಿಮಾದ ಫಸ್ಟ್‌ಲುಕ್ ಟೀಸರ್ ರಿಲೀಸ್ ಆದ ಬಳಿಕ, ಇಂದು ಸೋಷಿಯಲ್ ಮೀಡಿಯಾ ಪೂರ್ತಿ ಯಶ್ ಅವರ ಸುದ್ದಿ …

Read More »

ಹಠಾತ್ತನೆ ಕಾಡಾನೆ ಅರ್ಜುನನ ಮೇಲೆ ದಾಳಿ ಗುಂಡೇಟಿನಿಂದ ಅರ್ಜುನ ಸಾಯಲಿಲ್ಲ….

ಮೈಸೂರು: ಅಂಬಾರಿ ಆನೆ ಅರ್ಜುನನ ಸಾವಿಗೆ ಇಡೀ ಕರುನಾಡೇ ಕಂಬನಿ ಮಿಡಿದಿದೆ. ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಶಿಸ್ತುಬದ್ಧವಾಗಿ ಕಾರ್ಯಾಚರಣೆ ನಡೆಸದ ಪರಿಣಾಮ ಅರ್ಜುನ ಮೃತಪಡಬೇಕಾಗಿ ಬಂತು ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಅಂದು ಕಾರ್ಯಾಚರಣೆಯಲ್ಲಿದ್ದ ಪಶು ವೈದ್ಯ ಡಾ.ರಮೇಶ್, ಅರ್ಜುನನ ಮೇಲೆ ಕಾಡಾನೆ ದಾಳಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಗುಂಡೇಟಿನಿಂದ ಆತ ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರ್ಜುನ ಆನೆ ನನ್ನ ನೆಚ್ಚಿನ ಆನೆ. ಕಾರ್ಯಾಚರಣೆ ವೇಳೆ ಹಠಾತ್ತನೆ ಕಾಡಾನೆ …

Read More »

ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ…

ಕಾರವಾರ: ರಾಜ್ಯದಲ್ಲಿ ಎದುರಾದ ಬರಕ್ಕೆ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಬಾರದೆ ಇದೀಗ ಸರ್ಕಾರದ ಪರಿಹಾರಕ್ಕಾಗಿ ಎದುರು ನೋಡುವಂತಾಗಿದೆ. ಆದರೆ ಇದೇ ಸ್ಥಿತಿ ಇದೀಗ ಮೀನುಗಾರರಿಗೂ ಎದುರಾಗಿದ್ದು ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ ಕೂರುವಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಆರಂಭವಾಗಿತ್ತು. ಆರಂಭದಲ್ಲಿ ಸ್ಥಳೀಯವಾಗಿ ಕಾರ್ಮಿಕರು ಸಿಗದ ಕಾರಣಕ್ಕೆ ಒಂದಿಷ್ಟು ಬೋಟ್‌ಗಳು ತಡವಾಗಿ ಮೀನುಗಾರಿಕೆಗೆ ತೆರಳಿದ್ದವಾದರೂ ಬಹುತೇಕರು ಉತ್ತಮ …

Read More »

ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹ…

ಬೆಂಗಳೂರು: ಬೆಳಗಾವಿಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯಿಂದ ನ್ಯಾಯಾಲಯಕ್ಕೆ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು. ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ …

Read More »

ಶಾಲೆಯ ಮಕ್ಕಳಿಂದಲೇ ತಾರಸಿತೋಟ ಮಾಡಿ ಉತ್ತಮ ಇಳುವರಿ ತೆಗೆಯಲಾಗಿದೆ….

ಮಂಗಳೂರು: ಸಿಟಿ ಮಕ್ಕಳಿಗೆ ಕೃಷಿಯ ಅರಿವು ಇಲ್ಲ, ಭತ್ತ, ಕಂಗು ತೆಂಗು ಹೊರತುಪಡಿಸಿ ಯಾವ ಬೆಳೆಯ ಬಗ್ಗೆಯೂ ಮಾಹಿತಿಯೇ ಇಲ್ಲ ಎಂಬ ಅಪವಾದ ಇದೆ. ಆದರೆ ಈ ಅಪವಾದ ವನ್ನು ಮಂಗಳೂರು ನಗರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ತೊಡೆದು ಹಾಕಿದ್ದಾರೆ. ನಗರದ ಮಕ್ಕಳ ತರಕಾರಿ ಕೃಷಿ ಯಾವ ಕೃಷಿಕನಿಗೂ ಕಮ್ಮಿ ಇಲ್ಲದಂತೆ ಫಸಲು ನೀಡುತ್ತಿದ್ದು, ಮಕ್ಕಳು ಟಾರೆಸಿ ಮೇಲೆ ನೆಟ್ಟ ಗಿಡ ಈಗ ಮಧ್ಯಾಹ್ನದ ಬಿಸಿಯೂಟಕ್ಕೆ ತರಕಾರಿಗಳನ್ನು ಒದಗಿಸುತ್ತಿದೆ.ಶಾಲೆ ಜ್ಞಾನಾರ್ಜನೆಗೆ …

Read More »

ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ…..

ಬೆಂಗಳೂರು: ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಚುನಾವಾಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶಗಳನ್ನು ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆಯಲ್ಲಿ ಕನೀಝ್‌ ಫಾತಿಮಾ ವಿರುದ್ಧ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಎ. ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ …

Read More »

ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿ…..

ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನಗೊಂಡ, ಪಕ್ಷ ತ್ಯಾಗಕ್ಕೆ ವಿ ಸೋಮಣ್ಣ ಮುಂದಾಗಿದ್ದು, ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ …

Read More »

ಗಣ್ಯರಿಂದ ಲೀಲಾವತಿಯವರಿಗೆ ಅಂತಿಮ ನಮನ…

ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಹಿರಿಯ ನಟಿ ಲೀಲಾವತಿ ಅಂತ್ಯಕ್ರಿಯೆ ಸಿದ್ಧತೆ ನಡೀತಿದೆ. ಸದ್ಯ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗಿದ್ದು ರಾಜಕೀಯ ಮುಖಂಡರು, ಕಲಾವಿದರು ಬಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಾರ್ಥೀವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ ಕೊಂಡೊಯ್ಸು ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಟ ಶ್ರೀನಾಥ್, ದ್ವಾರಕೀಶ್ ನಟಿಯರಾದ ಪೂಜಾ ಗಾಂಧಿ, ಶ್ರುತಿ, …

Read More »