Breaking News

ಸುದ್ದಿ

ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಲಂಚ ಕೊಡುವಂತೆ ಕೇಳುತ್ತಿದ್ದಾರೆ….

ಧಾರವಾಡ: ಕರ್ನಾಟಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿ ಬಂದಿದ್ದ ಗುತ್ತಿಗೆದಾರರ ಆರೋಪಗಳು ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿವೆ. ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಅವರು ಧಾರವಾಡ ಪಾಲಿಕೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಬಿಲ್ ಕೇಳಲು ಹೋದರೆ ಮೊದಲು ಲಂಚ ಕೊಡುವಂತೆ ಮಹಾನಗರ ಪಾಲಿಕೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಳುತ್ತಿದ್ದಾರೆ ಎಂದು ಅವರು ಬುಧವಾರ …

Read More »

ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು….

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಪತ್ನಿ ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ದಂಪತಿಯಾಗಿದ್ದಾರೆ. ಕೇವಲ ಉದ್ಯಮ ವಿಚಾರವಾಗಿ ಮಾತ್ರವಲ್ಲ ಸಮಾಜ ಸೇವೆ, ದೇಣಿಗೆ ಹೀಗೆ ಹತ್ತಾರು ಕೆಲಸಗಳಿಂದಲೂ ಎಲ್ಲರ ಗಮನ ಸೆಳೆಯುತ್ತಾರೆ. ಆದರೆ ಇತ್ತೀಚಿಗೆ ಅವರು ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು. ಸುಧಾ ಮೂರ್ತಿ ಅವರನ್ನು ಡ್ರಾಪ್ ಮಾಡಲು ಟಿಕೆಟ್ ಇಲ್ಲದೆ 11 ಗಂಟೆಗಳ ಕಾಲ ರೈಲಿನಲ್ಲಿ ಪ್ರಯಾಣಿಸಿದ್ದ ದಿನವನ್ನು ಇತ್ತೀಚೆಗೆ ನೆನಪಿಸಿಕೊಂಡಿದ್ದಾರೆ. …

Read More »

ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ…

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ, ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮಾಡಿರುವ ಸಾಧನೆ ಮೀರಿಸಲು ಬಹುಶಃ ಸದ್ಯಕ್ಕೆ ಯಾವ ಆಟಗಾರನಿಗೂ ಸಾಧ್ಯವಿಲ್ಲ ಅಂತಾ ಕಾಣುತ್ತೆ. ಈ ಆಟಗಾರ ಮುಟ್ಟಿದ್ದೆಲ್ಲಾ ಚಿನ್ನ ಎನ್ನುಷ್ಟರ ಮಟ್ಟಿಗೆ ಸಾಧಿಸಿ ತೋರಿಸಿದ್ದಾರೆ. ಅದ್ರಲ್ಲೂ 2023ರ ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ. ಇಷ್ಟೆಲ್ಲಾ ಸಾಧನೆ ಮಾಡಿರುವ ಆಟಗಾರನ ಪರ್ಸನಲ್ ಲೈಫ್ ಹೆಂಗಿತ್ತು ಗೊತ್ತಾ? ಅದು 2013 ಭಾರತೀಯ ವೇಗದ ಬೌಲಿಂಗ್ ವಿಭಾಗಕ್ಕೆ ಒಬ್ಬ …

Read More »

ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ….

ಬೆಂಗಳೂರು: ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ( ಜನವರಿ 9) ಬೆಳಗ್ಗೆಯೇ ದಾಳಿ ನಡೆಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ಆರು ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ …

Read More »

ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತ….

ಹುಬ್ಬಳ್ಳಿ:ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿಕಾಂಗ್ರೆಸ್‌ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ‌ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ.ಬಿಜೆಪಿಯವರು ವೋಟ್‌ಗೋಷ್ಟರ್ ಶ್ರೀರಾಮನನ್ನ ನೆನಪು ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್‌ನವರು ಯಾವತ್ತಿಗೂ ದೇವರನ್ನ ಹಿಂದುತ್ವವನ್ನ ರಾಜಕಾರಣದಲ್ಲಿ ತರೋಲ್ಲ ಎಂದ ಅವರು ಇವರಿಗೆ ಏನೂ ಬಂಡವಾಳ ಇಲ್ಲ, …

Read More »

ಅಭಿಮಾನಿಗಳು ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಯಶ್ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ…

ರಾಕಿಂಗ್ ಸ್ಟಾರ್ ಯಶ್ 38ನೇ ಹುಟ್ಟುಹಬ್ಬ. ಹೀಗಾಗಿ ದೇಶ ಮೂಲೆ ಮೂಲೆಯಲ್ಲಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಯುವಕರು ಮಧ್ಯರಾತ್ರಿ ಯಶ್ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ. ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಈ ಮೂವರು ಮೃತ ಅಭಿಮಾನಿಗಳು. ಇನ್ನು ಮೂವರು ಯುವಕರು ಗಂಭೀರವಾಗಿ …

Read More »

ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ: ಬಿ ವೈ ವಿಜಯೇಂದ್ರ.

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐ (ಇಂಡಿ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಈ ಕುರಿತು ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಸೋಮವಾರ ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ …

Read More »

ಯಶ್ ಅವರ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತ….

ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾದ ಯಶ್ ಅಭಿಮಾನಿಗಳಿಗೆ ಸೂತಕದ ಛಾಯೆ ಆವರಿಸಿದೆ. ಇದಕ್ಕೆ ಕಾರಣ ನೆಚ್ಚಿನ ನಟನ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಪ್ರಯುಕ್ತ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಯಶ್ ಅಭಿಮಾನಿಗಳು ದುರಂತ ಅಂತ್ಯ …

Read More »

ಚುಂಚನಕಟ್ಟೆ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿ….

ಮೈಸೂರು: ರಾಮನ ಹೆಜ್ಜೆಗುರುತುಗಳು ದೇಶದಾದ್ಯಂತ ನೆಟ್ಟಿವೆ. ಆತ ಕಾಲಿಟ್ಟ ಸ್ಥಳಗಳೆಲ್ಲವೂ ಇವತ್ತಿಗೂ ಪವಿತ್ರ ಕ್ಷೇತ್ರಗಳಾಗಿ ಭಕ್ತರಿಂದ ಪೂಜಿಸಲ್ಪಡುತ್ತಿವೆ. ಇಂತಹ ಕ್ಷೇತ್ರಗಳ ಪೈಕಿ ಜಿಲ್ಲೆಯ ಕೆ.ಆರ್.ನಗರ ಬಳಿಯಿರುವ ಚುಂಚನಕಟ್ಟೆಯೂ ಒಂದಾಗಿದ್ದು, ಇಲ್ಲಿ ರಾಮ ನೆಲೆನಿಂತು ಭಕ್ತರಿಂದ ಪೂಜಿಸಲ್ಪಡುತ್ತಿದ್ದರೆ, ಇಲ್ಲಿ ನಡೆಯುವ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ. ಕೊರೊನಾ ಮತ್ತು ಜಾನುವಾರುಗಳಿಗೆ ತಗುಲಿದ ಚರ್ಮಗಂಟು ರೋಗದ ಕಾರಣದಿಂದಾಗಿ ಕಳೆದ ಕೆಲವು ವರ್ಷಗಳಿಂದ ನಡೆಯದ ಚುಂಚನಕಟ್ಟೆ ಜಾನುವಾರು ಜಾತ್ರೆ ಈ ಬಾರಿ ಅದ್ಧೂರಿಯಾಗಿ …

Read More »

ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ….

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದು ಹೇಳಿದರು. ಈ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ …

Read More »