Shaikh BigTv
November 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅವಳಿ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಸತತವಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವುಗಳಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ …
Read More »
BigTv News
November 22, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವೃದ್ಧೆಯೋರ್ವಳಿಗೆ ಬೈಕ್ ನಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಒಳಪಡಿಸಿ ಪರಾರಿಯಾಗಿದ್ದ ನೋಂದಣಿ ಸಂಖೆ ಇಲ್ಲದ ಬೈಕ್ ಸವಾರನನ್ನು ಪತ್ತೆ ಹಚ್ಚಿ ಬೈಕ್ ಹಾಗೂ ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಸಂಚಾರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ತೇಜಸ್ವಿನಗರ ಹಾಗೂ ಗಾಂಧಿನಗರ ಹೋಗುವ ರಸ್ತೆಯಲ್ಲಿ ಬರುವ ಬಂಡೆಮ್ಮ ಗುಡಿ ಹತ್ತಿರ ನವೆಂಬರ್ 15 ರಂದು ವೃದ್ಧೆಗೆ ಬೈಕ್ ಸವಾರ ಡಿಕ್ಕಿ ಹೊಡೆದು ಪರಾರಿಯಾಗಿದ್ದು ವೃದ್ಧರ ತೀವೃ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು …
Read More »
BigTv News
November 22, 2023
ಉತ್ತರ ಕನ್ನಡ, ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಹಂಚಿಕೆಯಾಗುವ ಟಿಕೆಟ್‌ಗಾಗಿ ಬಾರಿ ಪೈಪೋಟಿ ಕೂಡ ಶುರುವಾಗಿದೆ. ಆದರೆ ಉತ್ತರ ಕನ್ನಡದಲ್ಲಿ ಅಸ್ತಿತ್ವಕ್ಕೂ ಪರದಾಡುತ್ತಿರುವ ಜೆಡಿಎಸ್ ಪಕ್ಷದ ಮೂಲಕ ಮೈತ್ರಿ ಟಿಕೆಟ್ ಗಿಟ್ಟಿಸಿಕ್ಕೊಳ್ಳಲು ಪಕ್ಷದ ನಾಯಕರುಗಳಲ್ಲಿ ಭಾರೀ ಪೈಪೋಟಿ ಶುರುವಾಗಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾದಂತೆ ಉತ್ತರಕನ್ನಡದಲ್ಲಿಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್ಚಾಗಿ ಕಾಣಿಸಿಕ್ಕೊಳ್ಳುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ”ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.ಬಳ್ಳಾರಿ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬರ ಪರಿಹಾರದ ಹಣ ರೈತರಿಗೆ ಆನ್ಲೈನ್ ಮೂಲಕವೇ ತಲುಪಲಿದೆ. ‘ಫ್ರೂಟ್ಸ್’ ತಂತ್ರಾಂಶದಲ್ಲಿ ರೈತರ ಸಂಪೂರ್ಣ …
Read More »
BigTv News
November 21, 2023
ದೇಶ-ವಿದೇಶ, ಸುದ್ದಿ
ಟರ್ಕಿಯಿಂದ ಭಾರತಕ್ಕೆ ಬರುತ್ತಿದ್ದ ಇಸ್ರೇಲ್‌ಗೆ ಸೇರಿದ ಸರಕು ಸಾಗಾಣಿಕೆ ಹಡಗು ‘ಗ್ಯಾಲಕ್ಸಿ ಲೀಡರ್’ ಅನ್ನು ಎಮೆನ್ ದೇಶದ ಹೌತಿ ಬಂಡುಕೋರರು ಅಪಹರಿಸಿದ್ದರು. ಈಗ ಹಡಗು ಅಪಹರಿಸಿದ್ದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಕೆಂಪು ಸಮುದ್ರದಲ್ಲಿ ಹೈಜಾಕ್ ಮಾಡಿರುವ ಈ ಹಡಗು ಸದ್ಯ ಯೆಮೆನ್‌ನ ಹೊಡೆಡಾ ಬಂದರು ಪ್ರದೇಶದಲ್ಲಿದೆ ಎಂದು ಹಡಗಿನ ಮಾಲೀಕರು ಹೇಳಿದ್ದಾರೆ. ಈ ದೊಡ್ಡ ಹಡಗನ್ನು ಹೇಗೆ ಅಪಹರಿಸಲಾಯಿತು ಎನ್ನುವ ವಿಡಿಯೋ ಬಿಡುಗಡೆ ಮಾಡಿದ್ದು, ಯಾವ ಸಿನಿಮಾ …
Read More »
BigTv News
November 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕೊನೆಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೀತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ತೆರೆಮೇಲೆ ‘ಕಾಟೇರ’ನ ದರ್ಶನಕ್ಕಾಗಿ ಕಾದು ಕೂತಿದ್ದಾರೆ. ಮಂಡ್ಯದಲ್ಲಿ ‘ಕಾಟೇರ’ ಚಿತ್ರದ ಕೊನೆಯ ಹಾಡಿನ ಚಿತ್ರೀಕರಣ ಈ ವಾರ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಭಾರೀ ಸೆಟ್ ನಿರ್ಮಿಸಿ 4 …
Read More »
BigTv News
November 21, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ. ಈ ಬಗ್ಗೆ ಯಾರಿಗೂ ಹಕ್ಕು ಕೊಟ್ಟಿಲ್ಲ. ಸಿಎಂ ವಿಚಾರ ಏನಿದ್ದರೂ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಏನಿದ್ದರೂ ಎಐಸಿಸಿ ಅಧ್ಯಕ್ಷರು, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರಿಗೆ ಬಿಟ್ಟ ವಿಚಾರ. ಇದು ಬಹಿರಂಗವಾಗಿ ಸಿಎಂ ವಿಚಾರ ಮಾತನಾಡೋ ಯೋಗ್ಯತೆ ನಮಗೆ ಯಾರಿಗೂ ಇಲ್ಲ. ಮಾತನಾಡುವುದು ಅಕ್ಷಮ್ಯ ಎಂದು …
Read More »
bigtvnews22
November 21, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್‌ಡ್ರೈವ್ …
Read More »
BigTv News
November 20, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಲೇ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ನೈರುತ್ಯ ರೈಲ್ವೆ ವಲಯ ತನ್ನ ಹೆಸರನ್ನು ಸೇರ್ಪಡೆ ಮಾಡಿದ್ದು, ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ. ವಿಶ್ವದಲ್ಲೇ ಅತೀ ಉದ್ದವಾದ ಪ್ಲಾಟ್ ಫಾರ್ಮ್ ಹೊಂದಿದ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ, ನೈರುತ್ಯ ರೈಲ್ವೆ ನಿಲ್ದಾಣ ಈಗ ಮತ್ತೊಂದು ಪ್ರಶಸ್ತಿ ಪಡೆದಿದ್ದು, ಸ್ವಚ್ಛತಾ ಪಾಡಾ 2023ರಲ್ಲಿ ನೈಋತ್ಯ ರೈಲ್ವೆ …
Read More »
BigTv News
November 20, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿವೆ. ಬಿಜೆಪಿಯಲ್ಲಿ ನೂತನ ರಾಜ್ಯಾದ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ನಾನಾ ಬೆಳವಣಿಗೆಗಳು ನಡೆದಿದ್ದು,ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಮಾಜಿ ಸಚಿವ …
Read More »