Breaking News

ಸುದ್ದಿ

ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು ಬದಲಾವಣೆ ಮಾಡಿಕೊಳ್ಳಬೇಕು:ಎ. ನಾರಾಯಣ ಸ್ವಾಮಿ.

ಕಾಂಗ್ರೆಸ್ ವಿರುದ್ಧ ಸಚಿವ ಎ. ನಾರಾಯಣ ಸ್ವಾಮಿ ಗರಂ ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದು ತಿಳಿಯದಂತಾಗಿದೆ. ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ ಎಂದು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರಿಗೆ ಸರ್ಕಾರದ ಆಡಳಿತ ನೋಡಿಕೊಳ್ಳುವಂತೆ ಹೇಳಿದ್ದಾರೆ, ಇದು ಸರಿಯಲ್ಲ. ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು …

Read More »

ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ…..

ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ ಭಾರತ ಈ ಬಾರಿ ಹೊಸ ಚರಿತ್ರೆ ಬರೆಯಲು ಎಲ್ಲ ಸಿದ್ಧತೆ ನಡೆಸಿದೆ. 2023ರ ಐಸಿಸಿ ವಿಶ್ವಕಪ್ ಕೊನೇ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇನ್ನೇನು ಈ ಭಾನುವಾರ ಗುಜರಾತ್ ರಾಜಧಾನಿ ಅಹಮದಾಬಾದ್‌ನ ‘ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ 2023ರ ಐಸಿಸಿ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತೆ. ಹೀಗಾಗಿ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ. ಐಸಿಸಿ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯಕ್ಕೆ ತಯಾರಿ ಜೋರಾಗಿ …

Read More »

ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ….

ಚಾಮರಾಜನಗರ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಖಂಡಿಸಿ ಶುಕ್ರವಾರ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ‌ ತಾಲೂಕು ಅಧ್ಯಕ್ಷ ಹಾಲಿನ‌ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯರಸ್ತೆಯನ್ನು …

Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 02 ಟರ್ಮಿನಲ್‌ ಗಳಲ್ಲಿ ತಲಾ ಒಂದು ಇಂದಿರಾ ಕ್ಯಾಟೀನ್ ನಿರ್ಮಿಸಲಿದೆ….

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟ್ಯಾಕ್ಸಿ ಚಾಲಕರು, ಮಧ್ಯಮ ವರ್ಗದವರಿಗೆ, ಅಲ್ಲಿನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತೀ ಕಡಿಮೆ ಬೆಲೆಗೆ ಊಟ-ತಿಂಡಿ ಸೌಲಭ್ಯ ಸಿಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಇದೇ ಕಾರಣದಿಂದಲೇ ಹಾಲಿ ಇರುವ 199 ಇಂದಿರಾ ಕ್ಯಾಂಟೀನ್‌ಗಳನ್ನು 250ಕ್ಕೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಸದ್ಯ …

Read More »

ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿ….

ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದ್ಕಾಲದಲ್ಲಿ ಲೂಸ್ ಮಾದ ಯೋಗಿ ಸಿನಿಮಾಗಳಿಗೆ ಭಾರೀ ಕ್ರೇಜ್ ಇತ್ತು. ಆದರೆ ಈಗ ಅಷ್ಟಾಗಿ ಯೋಗಿ ಸಿನಿಮಾಗಳು ಸದ್ದು ಮಾಡ್ತಿಲ್ಲ. ಅವರ …

Read More »

ಕರೀನಾ ಕಪೂರ್ ‘KGF’ ಸಿನಿಮಾ ಹಾಗೂ ಯಶ್ ಬಗ್ಗೆ ಮಾತನಾಡಿದ್ದಾರೆ….

KGF’ ಸರಣಿ ಸಿನಿಮಾಗಳು ಬಂದು ಹೋಗಿ ಒಂದೂವರೆ ವರ್ಷ ಕಳೆದರು ರಾಕಿಭಾಯ್ ಕ್ರೇಜ್ ಮಾತ್ರ ಕಮ್ಮಿ ಆಗಿಲ್ಲ. ಅಭಿಮಾನಿಗಳು ಯಶ್‌19 ಅಪ್‌ಡೇಟ್‌ಗಾಗಿ ಕಾದು ಕಾದು ಸುಸ್ತಾಗಿದ್ದಾರೆ. ರಾಕಿಂಗ್ ಸ್ಟಾರ್ ಮಾತ್ರ ತಮ್ಮ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಮೌನ ಮುಂದುವರೆಸಿದ್ದಾರೆ.ಸದ್ಯ ಹೊಂಬಾಳೆ ಸಂಸ್ಥೆಯ ‘ಸಲಾರ್’ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರದಲ್ಲಿ ಯಶ್ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ ಎನ್ನುವ ಗುಸುಗುಸು ಕೇಳಿಬರ್ತಿದೆ. ‘ಸಲಾರ್’ ಹಾಗೂ ‘KGF’ ಸರಣಿಗೆ ಲಿಂಕ್ ಇದೆ. ಪ್ರಶಾಂತ್ ನೀಲ್ …

Read More »

ಆಕಾಶ್ ಚೋಪ್ರ ರೋಹಿತ್ ಶರ್ಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ….

ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆದ ಬಳಿಕ ಆಕಾಶ್ ಚೋಪ್ರ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳ ಅಂತರದಿಂದ ಮಣಿಸಿದ್ದು ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಮತ್ತಷ್ಟು ಸನಿಹಕ್ಕೆ ತಲುಪಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತ್ತು. ಅದಾದ ಬಳಿಕ ಕಿವೀಸ್ …

Read More »

ಕ್ರಿಕೆಟ್ ದೇವರು ಸಚಿನ್ ದಾಖಲೆಯನ್ನೇ ಸರಿಗಟ್ಟಿದ್ದಾರೆ ಕೊಹ್ಲಿ….

ಶತಕೋಟಿ ಭಾರತೀಯರಿಗೆ ಈ ದಿನ ಎಂದೆಂದಿಗು ಮರೆಯಲು ಆಗಲ್ಲ. ಯಾಕಂದ್ರೆ ಒಂದು ಕಡೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಿರ್ಮಾಣ ಮಾಡಿದ್ದ ದಾಖಲೆ ಇಂದು ಮುರಿದು ಹೋಗಿದೆ. ಇನ್ನೊಂದೆಡೆ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆ ಭಾರತೀಯನೇ ಮುರಿದಿದ್ದಾನೆ. ಹೀಗೆ ಎಷ್ಟೋ ಜನರ ಡೈರಿಯಲ್ಲಿ 15 ನವೆಂಬರ್ 2023 ಅಚ್ಚಳಿಯದೆ ಉಳಿಯಲಿದೆ. ಇದಕ್ಕೆಲ್ಲಾ ಕಾರಣರಾದ ಮಾನ್ಯ ಕೊಹ್ಲಿ ಅವರಿಗೆ ಈಗ ಧನ್ಯವಾದ ಹೇಳಬೇಕಿದೆ. ವಿರಾಟ್ ಕೊಹ್ಲಿ ಅಂದ್ರೆ ಮಾಸ್, ವಿರಾಟ್ …

Read More »

ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ…

ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ಅಬ್ಬರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ …

Read More »

ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ: ಡಾ. ಯತೀಂದ್ರ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿದ್ದರಾಮಯ್ಯ ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ. ಶಾಲಾ ಕಟ್ಟಡಗಳನ್ನು …

Read More »