Breaking News

ಸುದ್ದಿ

ಅನೀಲ ಕೃಷ್ಣಾ ಮೇತ್ರಿ ರವರಿಗೆ ಅಧ್ಯಯನ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ…

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದಲ್ಲಿ ಸಹಾಯಕ ಬೋಧಕರೆಂದು ಕಾರ್ಯನಿರ್ವಹಿಸುತ್ತಿರುವ ಮೇತ್ರಿ ಅನೀಲ ಕೃಷ್ಣಾ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವು “ಭಾರತೀಯ ಸಂಗೀತ ಕ್ಷೇತ್ರದಲ್ಲಿ ಚರ್ಮವಾದ್ಯಗಳ ಪಾತ್ರ” : ಒಂದು ಅಧ್ಯಯನ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿಯನ್ನು ನೀಡಿದೆ. ಇವರಿಗೆ ಡಾ. ಶ್ರೀಮತಿ ಮೀರಾ ಶಿವಶಂಕರ ಗುಂಡಿ ರವರು ಸಂಶೋಧನಾ ಮಾರ್ಗದರ್ಶಕರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಗಾಂಧಿ ಭವನದಲ್ಲಿ ನಡೆದ ೭೩ನೇ ವಾರ್ಷಿಕ ಘಟಿಕೋತ್ಸವದಲ್ಲಿ …

Read More »

ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧನ….

ಹುಬ್ಬಳ್ಳಿ : ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಜನತಾ ಬಜಾರ ಬಳಿಯ ಚಾಂಗದೇವ ಮಹಾರಾಜ ಗುಡಿ ಹತ್ತಿರ ಮುಕುಂದಪ್ಪ ನಾರಾಯಣ ಓತಾಲಿ (ಹೊರಾಲಿ) ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಮಹಿಳೆ ಬಂಧನ 2010 ರಲ್ಲಿ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ …

Read More »

ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿತ….

ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ. ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ.ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ ಮಾಡಿದ ವ್ಯಕ್ತಿಯ ಕುಟುಂಬಸ್ಥರುಸುಮಾರು 10 ವರ್ಷಗಳಿಂದ ಕಿಮ್ಸ್ ನಲ್ಲಿ ಈ ಮಹಿಳೆ,ಆಯಾ ಕೆಲಸ ಮಾಡುತ್ತಿದ್ದಾಗಿ ಹೇಳಲಾಗಿದ್ದು, ಕೆಲಸದಿಂದ …

Read More »

ಶಂಕರಗೌಡ ದೊಡ್ಡಮನಿ ಜೆಡಿಎಸ್‌ಗೆ ಮರು ಸೇರ್ಪಡೆ….

ಕುಂದಗೋಳ : ತಾಲೂಕಿನ ಯರಿನಾರಾಯಣಪೂರ ಗ್ರಾಮದ ಯುವ ಮು ಖಂಡ ಶಂಕರಗೌಡ ದೊಡಮನಿ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಹನುಮಂತಪ್ಪ ಆಲ್ನೋಡ್ ಹಾಗೂ ಕೆ.ಎನ್.ಗಡ್ಡಿ ಇವರ ನೇತ್ರತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಶಂಕರಗೌಡ ದೊಡಮನಿ ಕುಂದಗೋಳ ತಾಲೂಕಾ ಜೆಡಿಎಸ್ ತಾಲೂಕಾಧ್ಯಕ್ಷರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದಿದ್ದರು. ಇದೀಗ ಮತ್ತೆ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದು ಹರ್ಷ ತಂದಿದೆ ಎಂದು ಹನುಮಂತಪ್ಪ ಆಲ್ನೋಡ್ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರ ವೀರಭದ್ರಪ್ಪ ಹಾಲಹರವಿ, ಗುರುರಾಜ ಹುಣಸಿಮರದ …

Read More »

ಪ್ರಭಾಸ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್…

ಬಾಹುಬಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಡಿಸೆಂಬರ್ 22ಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸಲಿದೆ. ಪ್ರಭಾಸ್ ಕೆಲ ದಿನಗಳಿಂದ ವಿದೇಶದಲ್ಲಿ ಬೀಡು ಬಿಟ್ಟಿದ್ದರು. ಮೊಣಕಾಲು ಶಸ್ತ್ರ ಚಿಕಿತ್ಸೆಗಾಗಿ ಇಟಲಿಗೆ ಹೋಗಿದ್ದರು ಎನ್ನಲಾಗ್ತಿದೆ. ಇದೀಗ ಪ್ರಭಾಸ್ ಹೈದರಾಬಾದ್‌ಗೆ ವಾಪಸ್ ಬಂದಿದ್ದಾರೆ. ಪ್ರಭಾಸ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗುತ್ತಿದ್ದಾರೆ. ಶೀಘ್ರದಲ್ಲೇ ‘ಸಲಾರ್’ ಪ್ರಮೋಷನ್ ಶುರುವಾಗಲಿದೆ. ಅಂದಹಾಗೆ ‘ಸಲಾರ್’ ಚಿತ್ರದ ಸ್ಪೆಷಲ್ …

Read More »

ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ….

ನವದೆಹಲಿ: ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ. ಕಾರಣ ಇಲ್ಲಿ ಕಾಂಗ್ರೆಸ್‌ ತನ್ನ ಪ್ರತಿಸ್ಪರ್ಧಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ (KCR) ವಿರುದ್ಧ ಸಂಸದ ಮತ್ತು ಪಕ್ಷದ ತೆಲಂಗಾಣ ಮುಖ್ಯಸ್ಥ ರೇವಂತ್ ರೆಡ್ಡಿಯನ್ನು ಕಣಕ್ಕಿಳಿಸಿದೆ. ಇಲ್ಲಿ ಸಹ ಕರ್ನಾಟಕದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ನಾಯಕರೊಬ್ಬರ ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೋಮವಾರ ರಾತ್ರಿ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 16 ಅಭ್ಯರ್ಥಿಗಳ …

Read More »

ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ….

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ …

Read More »

ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು…..

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದ್ದು, ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ. ರಾಜ್ಯದಲ್ಲಿ ವಿವಿಧ ಸಂಸ್ಥೆಗಳು …

Read More »

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಆದೇಶ ಹಿಂಪಡೆಯಲು ಆಗ್ರಹ….

ಧಾರವಾಡ: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕಡಿತಗೊಳಿಸಿ ಕಲ್ಯಾಣ ಮಂಡಳಿಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಐಯುಟಿಯುಸಿ ಗೆ ಸೇರಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ(ರಿ)ದ ಜಿಲ್ಲಾ ಸಮಿತಿಯವರು ಇಂದು ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆದಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಳೆದ ೨ ವರ್ಷಗಳಿಂದ ಶೈಕ್ಷಣಿಕ ವರ್ಷಗಳ ಸಹಾಯಧನವನ್ನು …

Read More »

ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ…

ಧಾರವಾಡ: ಧಾರವಾಡ ಮುರಘಾಮಠದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರವರ ನೇತೃತ್ವದಲ್ಲಿ ಗುರುವಾರ ದಿ 09 ರಂದು ಸಮಮ 10-30 ಗಂಟೆಗೆ ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ ಹಾಗೂ ಡಿಸಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಹಮ್ಮಿಕೊಂಡಿದೆ ಎಂದು ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಮ. ಕಲ್ಕೂರ ಹೇಳಿದರು, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಬ್ಬಿಗೆ ಪ್ರತಿ ಟನ್ನಗೆ 4000 ರೂಪಾಯಿ ಬೆಲೆ …

Read More »