Breaking News

ಸುದ್ದಿ

ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ….

ನವದೆಹಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ ನಡೆಯಲಿದೆ. ಸಂಸತ್ತಿನ ನೀತಿ ನಿಯಮಗಳ ಸಮಿತಿಯು ಈ ವಿಚಾರಣೆಯನ್ನು ಮಾಡಲಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟಕ್ಕೆ ಈ ಆರೋಪವು ಕಾರಣವಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೀತಿ ನಿಯಮಗಳ ಮುಂದೆ ಹಾಜರಾಗಲಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಉದ್ಯಮಿ …

Read More »

ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್….

ಜೈಪುರ: ಪೇಪರ್ ಲೀಕ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಳೆದ ವರ್ಷ ನಡೆದ ಪರೀಕ್ಷಾ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಮನಿ ಲಾಂಡರಿಂಗ್ ಪ್ರಕರಣ …

Read More »

ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ….

ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್​ ಶರ್ಮಾ ತಮ್ಮ ತವರು ಪಿಚ್​ನಲ್ಲಿ ನಾಲ್ಕು ರನ್​ ಗಳಿಸಿ​ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಮುಂಬೈ, ಮಹಾರಾಷ್ಟ್ರ: ಇಂಗ್ಲೆಂಡ್​ ವಿರುದ್ಧ ಅಬ್ಬರಿಸಿದ್ದ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಈ ಬಾರಿ ತವರು ನೆಲದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ. ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. …

Read More »

ಬುಡಕಟ್ಟು ಜನಾಂಗದವರ ಅಮೂಲ್ಯ ಭೂಮಿಯನ್ನು ಕಸಿದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ….

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದವರ ಅಮೂಲ್ಯ ಭೂಮಿಯನ್ನು ತಮ್ಮ ಆತ್ಮೀಯರಿಗೆ ಕಸಿದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎಂಎನ್‌ಎಫ್‌ ಮತ್ತು ಝಡ್‌ಪಿಎಂನಂತಹ ಪ್ರಾದೇಶಿಕ ಸಂಘಟನೆಗಳು ಬಿಜೆಪಿಯ ಅನಧಿಕೃತ ಏಜೆಂಟ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಿಜೋರಾಂನಲ್ಲಿ ನವೆಂಬರ್ 7 ರ ವಿಧಾನಸಭಾ ಚುನಾವಣೆ ನಡೆಯಲಿದೆ. ಮಿಜೋರಾಂನ ಜನರು ಶಾಂತಿ ಮತ್ತು ಪ್ರಗತಿಗೆ ಅರ್ಹರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1986 ರಲ್ಲಿ ಶಾಂತಿ ಒಪ್ಪಂದದ ಮೂಲಕ …

Read More »

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನಲ್ಲಿ ದಿನೇ ದಿನೇ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನದವು ರಾಜ್ಯ ಸರ್ಕಾರದ ಆಡಳಿತದ ಮೇಲೆ ತೀವ್ರ ಪರಿಣಾಯ ಬೀರುತ್ತಿದೆ. ಈಗಾಗಲೇ ಎರಡುವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ …

Read More »

ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ….

ಟಾಲಿವುಡ್ ನಟಿ ಅನಸೂಯಾ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಾ ಫೋಟೋಶೂಟ್ ಮಾಡುತ್ತಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳ ಆಫರ್ ಗಳಿಂದ ಟ್ರೆಡಿಷನಲ್ ಹಾಗೂ ಟ್ರೆಂಡಿ ಡ್ರೆಸ್​​ಗಳ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಅನಸೂಯಾ ಭಾರಧ್ವಾಜ್ ಅವರು ರೆಟ್ರೋ ಲುಕ್​ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಪ್ಯೂರ್ ವೈಟ್ ಹಾಗೂ ರೆಡ್ ಸೀರೆಗಳಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ. ಟಾಲಿವುಡ್ ನಟಿ ಅನಸೂಯಾ ನವರಸ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ …

Read More »

ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ……

ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಆಯುಕ್ತರಾದ …

Read More »

ರಮೇಶ್‌ ಜಾರಕಿಹೊಳಿ ವಿರುದ್ಧ ದೂರು…

ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಎಸ್.ಮನೋಹರ್ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ್‌ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪುಕ್ಕಲ, ಮೋಸಗಾರ, ಸಿ.ಡಿ …

Read More »

ಮುಖೇಶ್ ಅಂಬಾನಿ ಅವರ ಜೀವನ ತುಂಬಾ ಸರಳ…

ಮುಖೇಶ್ ಅಂಬಾನಿ ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ. ಶತಕೋಟಿ ಮೌಲ್ಯದ ಸಾಮ್ರಾಜ್ಯವನ್ನು ಅವರು ಹೊಂದಿದ್ದಾರೆ. ಅವರ ಐಷಾರಾಮಿ ಜೀವನಶೈಲಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿದೆ. ಮುಖೇಶ್‌ ಅಂಬಾನಿ ಕುಟುಂಬ ವಿಶ್ವದ ಅತ್ಯಂತ ದುಬಾರಿ ಮನೆಯಲ್ಲಿ ವಾಸವಾಗಿದೆ. ಅಲ್ಲಿ ಕೆಲಸ ಮಾಡುವ ಚಾಲಕರಿಗೇ ಲಕ್ಷಾಂತರ ರೂಪಾಯಿ ಸಂಬಳ ನೀಡುವ ಮುಕೇಶ್‌ ಅಂಬಾನಿ ಎಷ್ಟೇ ಹಣವಿದ್ರೂ ಅದನ್ನು ತೋರಿಕೆಗೆ ಬಳಕೆ ಮಾಡೋದಿಲ್ಲ. ಮುಕೇಶ್ ಅಂಬಾನಿ ಅವರ ಜೀವನ ತುಂಬಾ ಸರಳವಾಗಿದೆ. ಸಾಮಾನ್ಯರಂತೆ …

Read More »

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ…

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿಯ ಕನ್ನಡ ಹಬ್ಬದ ಮೆರವಣಿಗೆಯಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಡೀ ರಾಜ್ಯದಲ್ಲಿ ಬೆಳಗಾವಿಯಲ್ಲೇ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಶುದ್ಧ ಕುಡಿಯುವ ನೀರು, ಮೊಬೈಲ್‌ ಟಾಯ್ಲೆಟ್‌ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ರಾಣಿ ಚನ್ನಮ್ಮನ ವೃತ್ತದಲ್ಲಿ …

Read More »