Breaking News

ಸುದ್ದಿ

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ…..

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ …

Read More »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ….

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇ‍ಷವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್‌, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ …

Read More »

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ…

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಕಾರಣ ಯಾರು? ಬಿಜೆಪಿ ಕೆಲಸ ಸುಲಭ ಮಾಡಿದ್ದು ನೀವು ಅಲ್ಲವೇ? ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಗೆ ಸಪೋರ್ಟ್ ಮಾಡಿದವರು ಯಾರು? ಇದೇ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಈ ಕುರಿತು ಗುರುವಾರ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಮೇರಿಕಾಕ್ಕೆ ಹೋದ ತಕ್ಷಣ ಮೊದಲ ವಿಕೆಟ್ ಪತನ ಮಾಡಿದರು. ಐಎಂಎ ಆರೋಪಿ …

Read More »

ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗಲಿದೆ ಎಂಬುದು ಅವರ ಕನಸು ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಹಿಂದೆ ಲಿಂಗಾಯಿತ-ವೀರಶೈವ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆದಿರುವ ಹಾಗೂ ತಮ್ಮ ಹೇಳಿಕೆಯಲ್ಲಿ ಮೃಧುತ್ವದ …

Read More »

ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ…

ಬೆಂಗಳೂರು: ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು. ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ …

Read More »

ನಟ ರಿಚರ್ಡ್ ರೌಂಡ್ ಟ್ರೀ ನಿಧನ….

ಮುಂಬೈ: ಅಮೆರಿಕದ ಫಿಲ್ಮ್ ಕಾರಿಡಾರ್‌ನಿಂದ ಬುಧವಾರ ಬೆಳಗ್ಗೆ ಬ್ಯಾಡ್ ನ್ಯೂಸ್ ಹೊರಬಿದ್ದಿದೆ. ‘ಬ್ಲ್ಯಾಕ್ ಆಕ್ಷನ್ ಹೀರೋ’ ಎಂದೇ ಖ್ಯಾತರಾಗಿದ್ದ ನಟ ರಿಚರ್ಡ್ ರೌಂಡ್ ಟ್ರೀ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಕಾರಣ ಎನ್ನಲಾಗಿದೆ.

Read More »

ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನಟ ವಿನಾಯಕನ್ ಬಂಧನ…….

ರಜನಿಕಾಂತ್ ಅಭಿನಯದ ಜೈಲರ್ ಸಿನೆಮಾದಲ್ಲಿ ಮನೋಜ್ಞ ಅಭಿನಯ ಮಾಡಿ ಎಲ್ಲರ ಮನಗೆದ್ದಿದ್ದ ಚಿತ್ರದ ಖಳನಾಯಕ ವಿನಾಯಕನ್ ಇದೀಗ ನಿಜ ಜೀವನದಲ್ಲಿ ಖಳನಾಯಕನಾಗಲು ಹೋಗಿ ಅರೆಸ್ಟ್ ಆದ ಘಟನೆ ನಡೆದಿದೆ. ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ನಟ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಮಂಗಳವಾರ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ.ಅವರನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದೆ ಎಂದು ಪೊಲೀಸ್ ಮೂಲಗಳು …

Read More »

ತಂದೆಗೆ ದಂಡ ವಿಧಿಸದಂತೆ ಮಕ್ಕಳು ಪೊಲೀಸರ ಜೊತೆ ಮನವಿ…

ತಂದೆಗೆ ದಂಡ ವಿಧಿಸದಂತೆ ಮಕ್ಕಳು ಪೊಲೀಸರ ಜೊತೆ ಮನವಿ ಮಾಡಿಕೊಂಡಿದ್ದು, ಸಂಚಾರಿ ನಿಯಮವನ್ನು ಸರಿಯಾಗಿ ಪಾಲಿಸುವಂತೆ ಬೈಕ್​ ಸವಾರನಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ವ್ಯಕ್ತಿಯೊಬ್ಬ ಆರು ಮಕ್ಕಳನ್ನು ಬೈಕ್​ನಲ್ಲಿ ಕೂರಿಸಿಕೊಂಡು ಟ್ರಾಫಿಕ್​ ನಿಯಮಗಳನ್ನು ಉಲ್ಲಂಘಿಸಿ ಹೋಗುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಚಿತ್ರದಲ್ಲಿ ಬೈಕ್​ ಸವಾರನ ಹಿಂದೆ ನಾಲ್ವರು ಮಕ್ಕಳು ಹಾಗೂ ಮುಂದೆ ಇಬ್ಬರು ಮಕ್ಕಳು ಕುಳಿತಿರುವುದು ಕಂಡು ಬಂದಿದೆ. ಇದು ವಾರಾಣಸಿಯ ಚಿತ್ರವಾಗಿದ್ದು, ಈ ಬಗ್ಗೆ ಮಾಹಿತಿ …

Read More »

ವಿರಾಟ್​ ಕೊಹ್ಲಿ ಅವರು ಹಿಮಾಚಲ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್​ ಸುಖು ಅವರನ್ನು ಭೇಟಿ…

ಭಾರತ ತಂಡದ ಬ್ಯಾಟರ್​ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಹಿಮಾಚಲ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್​ ಸುಖು ಅವರನ್ನು ಭೇಟಿ ಮಾಡಿದರು.ಧರ್ಮಶಾಲಾ(ಹಿಮಾಚಲ ಪ್ರದೇಶ) ಭಾರತ ತಂಡದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಅವರು ಹಿಮಾಚಲ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್​ ಸುಖು ಅವರನ್ನು ಭೇಟಿ ಮಾಡಿದರು.

Read More »

ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್….

ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ಬಳಿಕ ಅರಣ್ಯಾಧಿಕಾರಿಗಳು ಅಲರ್ಟ್ ಆಗಿದ್ದು, ಯಾರೆಲ್ಲಾ ಆ ರೀತಿಯ ಲಾಕೆಟ್ ಧರಿಸಿದ್ದಾರೋ ಅವರಿಗೆಲ್ಲ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ರಾಜ್ಯಸಭೆ ಸದಸ್ಯ, ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ. ವರ್ತೂರ್ ಸಂತೋಷ್ ಬಂಧನವಾದ ಬಳಿಕ ಹುಲಿ ಉಗುರಿನ ಲಾಕೆಟ್ ಧರಿಸಿರುವ ಎಲ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ …

Read More »