Breaking News

ಸುದ್ದಿ

ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ…

ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ನಡೆದ ಪಟಾಕಿ ಅವಗಡ ದುರಂತವನ್ನು ಮನಗಂಡು ಯಾವುದೇ ಪಟಾಕಿ ಮಾರಾಟಗಾರರು ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಡೂರು, ಬೀರೂರು ಪುರಸಭಾ ಅಧಿಕಾರಿಗಳು ಬೀರೂರು ಪಟ್ಟಣದ ವಿವಿಧ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದರು. ದಾಳಿ ಬಳಿಕ ಮಾತನಾಡಿದ ಬೀರೂರು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಸರ್ಕಾರದ …

Read More »

ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ…

ಇಡೀ ದೇಶವೇ ತಿರುಗಿ ನೋಡುವಷ್ಟರ ಮಟ್ಟಿಗೆ ಗಲಭೆ, ಘರ್ಷಣೆಗಳು ನಡೆದು ಉದ್ವಿಗ್ನ ಪರಿಸ್ಥಿತಿ ಮಣಿಪುರದಲ್ಲಿ ನಿರ್ಮಾಣವಾಗಿತ್ತು. ಇಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಛಾಯಾಚಿತ್ರಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇದರಿಂದ ಉದ್ವಿಗ್ನ ಸ್ಥಿತಿ ಎದುರಿಸುತ್ತಿರುವ ಆ ರಾಜ್ಯದ ಬಿಜೆಪಿ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಮಣಿಪುರ ಹಿಂಸಾಚಾರ ಕುರಿತಂತೆ ಯಾವುದೇ ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ ಎಂದು ಇಲ್ಲಿನ ಬಿಜೆಪಿ ಸರ್ಕಾರ ನಿಷೇಧ ಹೇರಿದೆ. …

Read More »

ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ …

Read More »

ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮ…

ಈ ಬಾರಿಯ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಿತ್ತು. ಆದರೆ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇಲ್ಲದೆ ಸರಳವಾಗಿ ಈ ಪಂದ್ಯ ನಡೆದಿತ್ತು. ಆದರೆ ಉದ್ಘಾಟನಾ ಪಂದ್ಯ ತಾಣವಾದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮವನ್ನು ಬಿಸಿಸಿಐ ಹಮ್ಮಿಕೊಂಡಿದೆ. ಈ ವಿಚಾರವನ್ನು ಬಿಸಿಸಿಐ ಅಧಿಕೃತವಾಗಿ ‘ಎಕ್‌’ನಲ್ಲಿ ಹಂಚಿಕೊಂಡಿದೆ. ಈ ಮನರಂಜನಾ ಕಾರ್ಯಕ್ರಮದ ಬಗ್ಗೆ ಬಿಸಿಸಿಐ ಎಕ್ಸ್‌ನಲ್ಲಿ ಮೂರು …

Read More »

ಮೂರನೇ ಆರೋಪಿಯಾಗಿದ್ದ ಪರಮಶಿವಯ್ಯ ಅವರಿಗೆ ಜಾಮೀನು..

ಚಿತ್ರದುರ್ಗ: ನಗರ ಹೊರವಲಯದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿ ಬಂದಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯಾಗಿದ್ದ ಪರಮಶಿವಯ್ಯ ಅವರಿಗೆ ಜಾಮೀನು ಸಿಕ್ಕಿದೆ.ಹಲವು ತಿಂಗಳಿನಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಪರಮಶಿವಯ್ಯ ಅವರು ಅಕ್ಟೋಬರ್ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇನ್ನು ಮುರುಘಾ ಮಠದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಕಾರಾಗೃಹದಲ್ಲಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ …

Read More »

ಪರಿಶಿಷ್ಟ ಜಾತಿಯ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದ ಶಿಕ್ಷಕಿ….

ಹಿಂದುಳಿದ ವರ್ಗಗಳಲ್ಲಿ ಬರುವ ಮೊಗೇರ ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿಯ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿಯಡಿ ಸಹಾಯಕ ಕನ್ನಡ ಶಿಕ್ಷಕರ ಹುದ್ದೆ ಪಡೆಯಲು ಮುಂದಾಗಿದ್ದ ಆರೋಪಿ ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಉತ್ತರ ಕನ್ನಡದ ಭಟ್ಕಳ ತಾಲೂಕಿನ ಬೆಂಗೆರೆ ನಿವಾಸಿ ಸರಸ್ವತಿ ಪ್ರಕರಣದ ಆರೋಪಿ. ಅವರು ಸಲ್ಲಿಸಿದ್ದ ಕ್ರಿಮಿನಲ್ ಮೆಲ್ಮನವಿ ಅರ್ಜಿಯನ್ನು ನ್ಯಾ ಜೆ ಖಾಜಿ ಅವರಿದ್ದ ಏಕ ಸದಸ್ಯ ಪೀಠ ತಿರಸ್ಕರಿಸಿದೆ. ಅರ್ಜಿದಾರರು ಹಿಂದುಳಿದ …

Read More »

ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ…

ಬೆಂಗಳೂರು: ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. 4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ಮನೆಗೆ ‌ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್‌ ಪ್ರಶ್ನಿಸಿದೆ.ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ರಾಜ್ಯ ಘಟಕ, 135 ಸೀಟು ಗೆದ್ದಿದ್ದೇವೆ …

Read More »

ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು….

ರಾಯಚೂರು: ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು. ಇದರಲ್ಲಿ ಒಂದು ರೈಲು ಕರ್ನಾಟಕದ ರಾಯಚೂರು ಮತ್ತು ತೆಲಂಗಾಣದ ನಾಂದೇಡ್​ಗೆ ಸಂಚಾರ ನಡೆಸುತ್ತದೆ. ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಕ್ಟೋಬರ್ 10ರಿಂದಲೇ ಈ ರೈಲು ಸೇವೆ ಆರಂಭವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ, ರೈಲ್ವೆ ಸಚಿವಾಲಯ ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಿಸಿದೆ.

Read More »

ಬ್ಲ್ಯಾಕ್‌ ಕಾಫಿ ಆರೋಗ್ಯ ವೃದ್ಧಿಸುತ್ತದೆ, ಆದರೆ ಹಾಲು ಹಾಕಿದ ಕಾಫಿ ಕುಡಿಯುವುದು ಒಳ್ಳೆಯದಲ್ಲ…

ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸ ಹಲವರಲ್ಲಿದೆ. ಕಾಫಿ ಕುಡಿಯುವುದು ತುಂಬಾ ಒಳ್ಳೆಯ ಅಭ್ಯಾಸನೇ ಆದರೆ ಹಾಲು ಹಾಕಿದ ಕಾಫಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಅಷ್ಟು ಸರಿಯಲ್ಲ. ಬ್ಲ್ಯಾಕ್‌ ಕಾಫಿ ಆರೋಗ್ಯ ವೃದ್ಧಿಸುತ್ತದೆ, ಆದರೆ ಹಾಲು ಹಾಕಿದ ಕಾಫಿ ಕುಡಿಯುವುದು ಒಳ್ಳೆಯದಲ್ಲ, ಹಾಲು ಹಾಕಿ ಮಾಡಿದ ಕಾಫಿ ಕುಡಿಯುವುದರಿಂದ ಉಂಟಾಗುವ ಅಡ್ಡಪರಿಣಾಮಗಳೇನು. ಜೀರ್ಣಕ್ರಿಯೆಗೆ ಒಳ್ಳೆಯದಲ್ಲ. ಹಾಲು ಹಾಕಿದ ಕಾಪಿ ಕುಡಿಯುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಇದರಿಂದ ಹೊಟ್ಟೆಯ ಆರೋಗ್ಯಕ್ಕೆ …

Read More »

ಮಂಗಲ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿ ವರ್ಗ ರೊಟ್ಟಿಗವಾಡ ಗ್ರಾಮ ಪಂಚಾಯತಿ ಬೇಟಿ ನೀಡಿದ್ದರು….

ಹುಬ್ಬಳ್ಳಿ: ಮಂಗಲ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿ ವರ್ಗ ರೊಟ್ಟಿಗವಾಡ ಗ್ರಾಮ ಪಂಚಾಯತಿ ಬೇಟಿ ನೀಡಿದ್ದರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೊಟ್ಟಿಗವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯತಿಯವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೂಟ್ಟಿಗವಾಡ ಗ್ರಾಮ ಪಂಚಾಯಿತಿಗೆ ಮಂಗಲ ಗ್ರಾಮ ಪಂಚಾಯತಿ ಅವರನ್ನುಹುಗುಚ್ಛ ನೀಡುವುದರ ಮೂಲಕ ಸ್ವಾಗತ ಬರಮಾಡಿಕೊಂಡರು ಮಂಗಲ ಗ್ರಾಮ ಪಂಚಾಯತಿಯವರು ರೊಟ್ಟಿಗವಾಡ ಗ್ರಾಮ ಪಂಚಾಯತಿಗೆ ನೀವು …

Read More »